29ರಿಂದ ಕರ್ನಾಟಕ ಸಾಂಸ್ಕೃತಿಕ ಉತ್ಸವ


Team Udayavani, Oct 23, 2021, 9:50 AM IST

2-karnataka

ಕಲಬುರಗಿ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ “ಕನ್ನಡಕ್ಕಾಗಿ ನಾವು’ ಎನ್ನುವ ಧ್ಯೇಯವಾಕ್ಯದೊಂದಿಗೆ ಆಚರಿಸುವ ನಿಟ್ಟಿನಲ್ಲಿ ಅ.29ರಿಂದ ನ.31ರ ವರೆಗೆ ಕಲಬುರಗಿ ರಂಗಾಯಣದ ಆವರಣದಲ್ಲಿ “ಕರ್ನಾಟಕ ಸಾಂಸ್ಕೃತಿಕ ಉತ್ಸವ’ ಆಚರಣೆಗೆ ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು, ಜಿಲ್ಲೆಯಲ್ಲಿರುವ ವಿವಿಧ ಅಕಾಡೆಮಿ, ಪ್ರಾಧಿಕಾರದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ, ಕನ್ನಡ ಮತ್ತ ಸಂಸ್ಕೃತಿ ಇಲಾಖೆ, ಕಲಬುರಗಿ ರಂಗಾಯಣ ಸಂಯುಕ್ತಾಶ್ರಯದಲ್ಲಿ ಜರುಗುವ ಕಲಬುರಗಿ ವಿಭಾಗ ಮಟ್ಟದ ಈ ಉತ್ಸವಕ್ಕೆ ಅ. 29ರಂದು ಬೆಳಗ್ಗೆ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ ನೆರವೇರಿಸಲು ಮತ್ತು ಶಿಷ್ಟಚಾರದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಸಭೆ ಒಪ್ಪಿಗೆ ಸೂಚಿಸಿತು.

ವಿಭಾಗ ಮಟ್ಟದ ಕಾರ್ಯಕ್ರಮ ಇದಾಗಿದ್ದರಿಂದ ಎಲ್ಲ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲು ಕವಿಗೋಷ್ಠಿ ಆಯೋಜನೆ ಮತ್ತು ಕವಿಗಳ ಆಯ್ಕೆ, ಪುಸ್ತಕ ಪ್ರದರ್ಶನ ಮಳಿಗೆ, ವಾಣಿಜ್ಯ ಮಳಿಗೆಗೆಳ ಸ್ಥಾಪನೆ ನಿಟ್ಟಿನಲ್ಲಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಯಿತು.

ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾಕರ ಜೋಶಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ ನಿರ್ದೇಶನ ಅನ್ವಯ ಕಲಬುರಗಿ ವಿಭಾಗ ಮಟ್ಟದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದರ ಯಶಸ್ಸಿಗೆ ಎಲ್ಲ ಅಕಾಡೆಮಿಗಳ ಸದಸ್ಯರು ಸಹಕರಿಸಬೇಕು ಎಂದರು.

ಇದನ್ನೂ ಓದಿ: ಮಧ್ಯಾಹ್ನದ ಬಿಸಿಯೂಟಕ್ಕೆ ಚಾಲನೆ

ಮೂರು ದಿನಗಳ ಕಾಲ ಗೋಷ್ಠಿ, ಕವಿಗೋಷ್ಠಿ, ರಂಗ ಗೀತೆ, ನೃತ್ಯ, ಚಿತ್ರಕಲಾ ಮತ್ತು ಶಿಲ್ಪಕಲೆಗಳ ಪ್ರದರ್ಶನ, ಸಾಯಂಕಾಲ ನಾಟಕದೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ಪುಸ್ತಕ, ಆಹಾರ, ದೇಶಿ ಉಡುಪುಗಳು ಸೇರಿದಂತೆ ಇನ್ನಿತರ ವಾಣಿಜ್ಯ ಮಳಿಗೆಗಳು ಉತ್ಸವಕ್ಕೆ ಕಳೆ ತರಲಿವೆ ಎಂದು ಪ್ರಭಾಕರ ಜೋಷಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್‌.ಚೆನ್ನೂರ ಮಾತನಾಡಿ, ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಅ.24ರಿಂದ 30ರ ವರೆಗೆ ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಕನ್ನಡದ ಶ್ರೇಷ್ಠತೆ ಸಾರುವ ಡಾ| ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ’ ಡಾ| ಕೆ.ಎಸ್ .ನಿಸಾರ್‌ ಅಹ್ಮದ್‌ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳು ರಾಜ್ಯದಾದ್ಯಂತ ಅ.28ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡಲಾಗುತ್ತಿದೆ ಎಂದರು.

ರಂಗಾಯಣ ಆವರಣದಲ್ಲಿ ಜರುಗುವ ಮೂರು ದಿನಗಳ ಉತ್ಸವದಲ್ಲಿ ಚಿತ್ರಕಲಾ ಮತ್ತು ಶಿಲ್ಪಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಿತ್ರಕಲಾ ಕಲಾವಿದರು ಗರಿಷ್ಠ 2*2 ಅಳತೆಯ ಚಿತ್ರಕಲೆ, ಶಿಲ್ಪಕಲಾ ಕಲಾವಿದರು ತಮ್ಮ ಶಿಲ್ಪಕಲೆ ಪ್ರದರ್ಶನಕ್ಕೆ ಅಕ್ಟೋಬರ್‌ 26ರ ಸಂಜೆ ಒಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ ಕಲಬುರಗಿ ಅವರನ್ನು ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿ ಚಿತ್ರಕಲೆ, ಶಿಲ್ಪಕಲೆಯನ್ನು ಸಲ್ಲಿಸಬಹುದು.

ಮೂರು ದಿನಗಳ ಉತ್ಸವದಲ್ಲಿ ಪುಸ್ತಕ ಮಾರಾಟ, ಆಹಾರ ಪದಾರ್ಥಗಳ ಮಾರಾಟ, ದೇಶಿ ಉಡುಪು ಸೇರಿದಂತೆ ಇನ್ನಿತರ ವಾಣಿಜ್ಯ ವಹಿವಾಟಿಗೆ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. 10*10 ಅಳತೆಯ ಈ ಮಳಿಗೆಗೆ ಪ್ರತಿ ದಿನಕ್ಕೆ 500ರೂ. ದರ ನಿಗದಿ ಮಾಡಲಾಗಿದೆ. ಮಳಿಗೆಗೆ ಅ.26ರ ಸಂಜೆ 5 ಗಂಟೆ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ ಇವರಲ್ಲಿ ಹೆಸರು ನೋಂದಾಯಿಸಬಹುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ| ರಾಜೇಂದ್ರ ಯರನಾಳೆ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ಹಾಗೂ ಹಿರಿಯ ರಂಗಕರ್ಮಿ ಡಾ| ಸಂದೀಪ, ಆರ್ಟ್‌ ಇಂಟಿಗ್ರೇಷನ್‌ ಸೊಸೈಟಿಯ ಎಂ.ಎಚ್‌.ಬೆಳಮಗಿ ಉತ್ಸವದ ಯಶಸ್ಸಿಗೆ ಸಲಹೆ ನೀಡಿದರು.

ಕಲಬುರಗಿ ರಂಗಾಯಣ ಆಡಳಿತಾಧಿಕಾರಿ ಜಗದೀಶ್ವರಿ ಶಿವಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಾಹಿತಿ ಜಗನ್ನಾಥ ತರನಳ್ಳಿ, ದಿ. ಐಡಿಯಲ್‌ ಫೈನ್‌ ಆರ್ಟ್‌ ಸಂಸ್ಥೆಯ ಪ್ರತಿನಿಧಿಗಳು ಇದ್ದರು.

ಪ್ರತಿ ಮನೆಯಲ್ಲೂ ಕನ್ನಡ ಹಬ್ಬದ ವಾತಾವರಣ ನಿರ್ಮಿಸುವ ಉದ್ದೇಶದೊಂದಿಗೆ ಹಲವು ಕಾರ್ಯಕ್ರಮಗಳನ್ನು ಇಲಾಖೆ ಹಮ್ಮಿಕೊಂಡಿದೆ. ನಾವು ಆಡುವ ಮಾತು ಕನ್ನಡದಲ್ಲಿರಬೇಕು. ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಬಳಕೆ, ದೈನಂದಿನ ಕಚೇರಿ ಕೆಲಸದಲ್ಲಿ ಕನ್ನಡ ಬಳಕೆ ಹಾಗೂ ನಿರರ್ಗಳವಾಗಿ ಅನ್ಯ ಭಾಷೆ ಬಳಸದೇ ಕೇವಲ ಕನ್ನಡ ಪದದಲ್ಲಿಯೆ ಮಾತನಾಡುವ ಕುರಿತು ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ. -ಪ್ರಭಾಕರ ಜೋಶಿ, ರಂಗಾಯಣದ ನಿರ್ದೇಶಕ

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.