ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ
Team Udayavani, Oct 25, 2021, 10:07 AM IST
ಕಲಬುರಗಿ: ಕನ್ನಡ ನಾಡು ನುಡಿ ಸೇವೆಯನ್ನು ಅದರಲ್ಲೂ ಕನ್ನಡಾಭಿಮಾನ ಹೆಚ್ಚಿಸಲು ಹಾಗೂ ಸಾಹಿತ್ಯ ಶ್ರೀಮಂತ ಗೊಳಿಸಲು ಕನ್ನಡ ಸಾಹಿತ್ಯ ಪರಿಷತ್‌ನ್ನು ಎಲ್ಲ ಹಿರಿಯರ ಸಹಕಾರ-ಸಲಹೆಯೊಂದಿಗೆ ಮುನ್ನಡೆಸಿಕೊಂಡು ಹೋಗುವುದಾಗಿ ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಬಿ.ಎಚ್. ನಿರಗುಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ಚಿತ್ರಣವನ್ನೇ ಬದಲಾಯಿಸಿ ಕನ್ನಡ ಕಟ್ಟುವ ಕೆಲಸ ಮಾಡುತ್ತೇನೆ. ಪ್ರಮುಖವಾಗಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದೇನೆ ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿದರು.
ಕೊರೊನಾ ಎರಡನೇ ಅಲೆಯಿಂದಾಗಿ ಕಸಾಪ ಚುನಾವಣೆ ಮುಂದೂಡಲಾಗಿತ್ತು. ಈಗ ನವೆಂಬರ್ 21 ರಂದು ಕೇಂದ್ರ ಹಾಗೂ ಜಿಲ್ಲಾ ಘಟಕಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 16,621 ಮತದಾರರಿದ್ದು, ಅರ್ಧದಷ್ಟು ಮತದಾರರ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದ್ದೇನೆ. ಹೋದಲೆಲ್ಲ ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮತದಾರರು ಬದಲಾವಣೆ ಬಯಸಿದ್ದು, ಹೊಸ ಮುಖಕ್ಕೆ ಅವಕಾಶ ಕೊಡಬೇಕು ಎಂದರು.
ಇದನ್ನೂ ಓದಿ: ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ
ಒಂದು ಬಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಎರಡನೇ ಬಾರಿ ಸ್ಪರ್ಧಿಸಿದ್ದೇನೆ. ಈ ಸಲ ಗೆದ್ದು ಬಂದರೆ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮತ್ತೂಬ್ಬರಿಗೆ ಸ್ಪರ್ಧೆಗೆ ಅವಕಾಶ ನೀಡಿ ಬೆಂಬಲಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕಸಾಪ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತರೆ ಮೊದಲಿಗೆ ಬಾಪುಗೌಡ ದರ್ಶನಾಪುರ ರಂಗಮಂದಿರಕ್ಕೆ ಅತ್ಯಾಧುನಿಕ ಧ್ವನಿ ವರ್ಧಕ, ಬೆಳಕು, ಸುಃಖಾಸನಗಳ ವ್ಯವಸ್ಥೆ ಕಲ್ಪಿಸಿ ಆಧುನಿಕ ಸ್ಪರ್ಶ ನೀಡಲಾಗುವುದು. ವಿವಿಧ ತಾಲೂಕುಗಳಲ್ಲಿ ಕನ್ನಡ ಭವನ, ವಲಯ ಮಟ್ಟದಲ್ಲಿ ಸಾಹಿತ್ಯಿಕ ಚಟುವಟಿಕೆಗಳು, ಪುಸ್ತಕ ಸಂತೆ, ಗಡಿನಾಡು ಕನ್ನಡ ಕಾರ್ಯಕ್ರಮ ಕಡ್ಡಾಯವಾಗಿ ಏರ್ಪಡಿಸುವ ಕೆಲಸ ಮಾಡುತ್ತೇನೆ. ಜಿಲ್ಲೆಯ ಹಿರಿಯ, ಕಿರಿಯ ಸಾಹಿತಿಗಳ ಮಾಹಿತಿಯುಳ್ಳ ನೂತನ ಕೈಪಿಡಿ ಹೊರ ತರಲಾಗುವುದು ಎಂದು ವಿವರಿಸಿದರು.
ಕಸಾಪ ಮಾಜಿ ಗೌರವ ಕಾರ್ಯದರ್ಶಿ ವಿಜಯಕುಮಾರ ಪರುತೆ, ಪ್ರಮುಖರಾದ ಲಿಂಗರಾಜ್ ಸಿರಗಾಪುರ, ಡಾ| ರಾಜೇಂದ್ರ ಯರನಾಳೆ, ಸೋಮಶೇಖರ ಮಠಪತಿ, ವಿಜಯಕುಮಾರ ಮಠಪತಿ, ಎಸ್. ಎಲ್. ಪಾಟೀಲ, ಆನಂದ ಕಪನೂರ ಮುಂತಾದವರಿದ್ದರು.
ಕಸಾಪಗೆ ಅಧ್ಯಕ್ಷನಾಗಿ ಚುನಾಯಿತನಾದರೆ ಜಿಲ್ಲಾ ಘಟಕವನ್ನು ಯಾವುದೇ ಅಡ್ಡಿ ಆತಂಕವಿಲ್ಲದೇ, ವಿವಾದಗಳಿಲ್ಲದೇ ಮುನ್ನಡೆಸಿಕೊಂಡು ಹೋಗಲಾಗುವುದು. ಕನ್ನಡ ನಾಡು, ನುಡಿ ಸೇವೆ ಮಾಡುವ ಉತ್ಸುಕತೆಯಿದೆ. -ಬಿ.ಎಚ್. ನಿರಗುಡಿ, ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.