ಶೌಚಾಲಯ ಕಟ್ಟಿಕೊಂಡು ಆರೋಗ್ಯವಾಗಿರಿ: ಸುವರ್ಣಾ
Team Udayavani, Aug 25, 2018, 10:00 AM IST
ಕಲಬುರಗಿ: ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಶೌಚಾಲಯ ಕಟ್ಟಿಕೊಳ್ಳುವುದರಿಂದ ಆರೋಗ್ಯವಂತರಾಗಿರಲು ಸಾಧ್ಯವೆಂದು ಜಿ.ಪಂ.ಅಧ್ಯಕ್ಷೆ ಸುವರ್ಣಾ ಎಚ್. ಮಲಾಜಿ ಹೇಳಿದರು. ಭಾರತ ಸರಕಾರದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ , ಜಿಪಂ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ತಾಪಂ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸರಕಾರಿ ಪದವಿ ಪೂರ್ವ ಬಾಲಕಿಯರ ಹಾಗೂ ಬಾಲಕರ ಕಾಲೇಜು ಕಮಲಾಪುರ ಏರ್ಪಡಿಸಿದ್ದ ಸ್ವತ್ಛ ಕ್ರಿಯಾ ಯೋಜನೆ (ಸ್ವಚ್ಚ ಭಾರತ ಅಭಿಯಾನ ) ಕುರಿತು ಹಮ್ಮಿಕೊಳ್ಳಲಾಗಿದ್ದ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅತಿಥಿಯಾಗಿದ್ದ ಕಮಲಾಪುರ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ಸತ್ತಾರ್ ಅಬ್ದುಲ್ ರೆಹಮಾನ್ ಮಾತನಾಡಿ, ಪ್ರತಿಯೊಬ್ಬರು
ತಮ್ಮ ಮನೆ ಅಂಗಳ ಸ್ವತ್ಛವಾಗಿಟ್ಟುಕೊಂಡಲ್ಲಿ ಇಡೀ ಗ್ರಾಮವೇ ಸ್ವತ್ಛವಾಗುತ್ತದೆ. ಇದೆ ರೀತಿ ಪಟ್ಟಣ, ನಗರಗಳು ಸ್ವತ್ಛವಾಗುತ್ತವೆ. ಗಾಂಧೀಜಿ ಕಂಡ ಕನಸು ನನಸಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸ್ವತ್ಛಭಾರತ ಅಭಿಯಾನದಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿದರು. ಕಮಲಾಪುರ ಗ್ರಾಮವನ್ನು ಇನ್ಮುಂದೆ ಸ್ವತ್ಛ ಹಾಗೂ ಹಸಿರು ಗ್ರಾಮವಾಗಿ ಮಾಡಲು ಅನೇಕ ಮರಗಳನ್ನು ನೆಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.
ಕಲಬುರಗಿ ಗ್ರಾಮಿಣ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ ಪ್ರವಿಣಕುಮಾರ ಮಾತನಾಡಿ, ಗ್ರಾಮೀಣ
ಪ್ರದೇಶದಲ್ಲಿ ಸಾರ್ವಜನಿಕರಿಗೆ ಸ್ವತ್ಛತೆ ಬಗ್ಗೆ ಹೆಚ್ಚಿನ ಮಾಹಿತಿ ಇರುವದಿಲ್ಲ. ಇದರಿಂದ ಅನೇಕರು ರೋಗಗಳಿಗೆ ತುತ್ತಾಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರ ಶೌಚಾಲಯ ನಿರ್ಮಿಸಿಕೊಳ್ಳಲು ಕಡುಬಡವರಿಗೆ 12,000ರೂ., ಹಿಂದುಳಿದ ವರ್ಗದವರಿಗೆ 15,000 ರೂ. ವಿತರಿಸುತ್ತದೆ. ಇದನ್ನು ಬಳಸಿಕೊಂಡು ಶೌಚಾಲಯಗಳನ್ನು ನಿರ್ಮಿಸಿ ಬಳಸಿ ಎಂದು ತಿಳಿಸಿದರು.
ಕಮಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶಾಂತಾ ಬಿ. ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಕಮಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್‌ಎಸ್ ಅಧಿಕಾರಿಗಳಾದ ರಮೇಶ ಟಿ. ಪೋತೆ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಚಾರ್ಯ ಬೂಸಾಳೆ ಗೋಪಾಲ, ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಚಾರ್ಯ ಮಲೇಶಿ ನಾಟೇಕಾರ ಸ್ವತ್ಛ ಭಾರತದ ಬಗ್ಗೆ ಮಾಹಿತಿ ನೀಡಿದರು. ಕ್ಷೇತ್ರ ಜನ ಸಂಪರ್ಕ ಕಾರ್ಯಲಯದ ನಾಗಪ್ಪ ಅಂಬಾಗೋಳ ಸ್ವಾಗತಿಸಿದರು, ರವಿಂದ್ರ ಕುಂಬಾರ ವಂದಿಸಿದರು.
ರಂಗೋಲಿ ಸ್ಪರ್ಧೆ: ವಿದ್ಯಾರ್ಥಿಗಳಿಗಾಗಿ ಸ್ವತ್ಛ ಭಾರತ ಅಭಿಯಾನ ಕುರಿತು ರಂಗೊಲಿ ನಿಂಬಂಧ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.