KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
Team Udayavani, Jul 1, 2024, 4:39 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ)ಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಇಲ್ಲಿನ ಕೆಕೆಆರ್ ಡಿಬಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಮಂಡಳಿ ಸಭೆ ನಡೆಯಿತು.
ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ, ಮುಖ್ಯ ಮಂತ್ರಿಯವರ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಸಿಂಧನೂರ ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ ಭಾಗವಹಿಸಿದ್ದರು.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ ಜೈನ್, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಎಂ. ಸುಂದರೇಶ್ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಎಸ್., ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗದ ನಿರ್ದೇಶಕ ಡಿ. ಚಂದ್ರಶೇಖರಯ್ಯ, ಕೆ.ಕೆ.ಆರ್.ಡಿ.ಬಿ. ಮಂಡಳಿಯ ಉಪ ಕಾರ್ಯದರ್ಶಿ ಎಂ.ಕೆ.ಪ್ರಮೀಳಾ, ಅಪರ ನಿರ್ದೇಶಕಿ ಪ್ರವೀಣ ಪ್ರಿಯಾ, ಅಧೀಕ್ಷಕ ಅಭಿಯಂತ ವಿಜಯಕುಮಾರ, ಹಣಕಾಸು ನಿಯಂತ್ರಕಿ ಅಶ್ವಿನಿ ಧನರಾಜ, ಉಪನಿರ್ದೇಶಕಿ ಸುಜಾತಾ ಕಾಳಗಿ, ಅಧೀನ ಕಾರ್ಯದರ್ಶಿ ದಯಾನಂದ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.