ವಾಡಿ ಎಸಿಸಿ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು
Team Udayavani, Oct 8, 2021, 9:53 AM IST
ವಾಡಿ (ಚಿತ್ತಾಪೂರ): ನಗರದ ಎಸಿಸಿ ಸಿಮೆಂಟ್ ಕಾರ್ಖಾನೆಯ ನ್ಯೂ ಪ್ಲಾಂಟ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಇಂಗಳಗಿ ಗ್ರಾಮ ನಿವಾಸಿ ಸುಭಾಷ ರಾಠೋಡ (51) ಮೃತ ದುರ್ದೈವಿ.
ಇದನ್ನೂ ಓದಿ: ಈ ವಾರ ತೆರೆ ಕಾಣಲಿದೆ ನಾಲ್ಕು ಚಿತ್ರಗಳು
ಕಂಪನಿಯ ತಾಜ್ ಗ್ರೂಪ್ ಗುತ್ತಿಗೆ ಕಾರ್ಮಿಕ ಸುಭಾಷ ರಾಠೋಡ, ರಾತ್ರಿ ಪಾಳಿ ಕೆಲಸಕ್ಕೆ ಹಾಜರಾಗಿದ್ದ. ಗೂಡ್ಸ್ ರೈಲಿಗೆ ಸಿಮೆಂಟ್ ಚೀಲಗಳ ಲೋಡಿಂಗ್ ಮಾಡುತ್ತಿದ್ದ ವೇಳೆ ಬೆಲ್ಟ್ ಮತ್ತು ಯಂತ್ರದ ಹೊಡೆತದಿಂದ ಸುಮಾರು 25 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ಸುಡುವ ಸಿಮೆಂಟ್ ಧೂಳಿನಲ್ಲಿ ಬಿದ್ದ ಪರಿಣಾಮ ಉಸಿರಾಟದ ಮೂಲಕ ಸಿಮೆಂಟ್ ದೇಹ ಸೇರುವ ಜತೆಗೆ ರೈಲು ಹಳಿಗೆ ತಲೆ ಪೆಟ್ಟಾಗಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಕಂಪನಿ ಮೂಲಗಳು ತಿಳಿಸಿವೆ.
ಸುದ್ದಿ ತಿಳಿದು ಕಂಪನಿ ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಎಸಿಸಿ ಕಂಪನಿ ಮುಂದೆ ತಾಜ್ ಗ್ರೂಪಿನ ನೂರಾರು ಕಾರ್ಮಿಕರು ಜಮಾಯಿಸಿದ್ದು ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.