ಕೆಎಂಎಫ್‌ ಮಾದರಿ ತೊಗರಿ ಮಂಡಳಿ ಅಭಿವೃದ್ಧಿಗೆ ಒತ್ತಾಯ


Team Udayavani, Sep 7, 2018, 11:01 AM IST

gul-1.jpg

ಕಲಬುರಗಿ: 371ನೇ (ಜೆ) ವಿಧಿ ಪರಿಣಾಮಕಾರಿ ಜಾರಿ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತಾಗಲು ಮಧ್ಯಪ್ರದೇಶದಲ್ಲಿ ಜಾರಿಯಲ್ಲಿರುವ ಭಾವಾಂತರ ಯೋಜನೆ ಕಾರ್ಯಾನುಷ್ಠಾನ ತರುವಂತೆ ಹಾಗೂ ಬಂದ್‌ ಆಗಿರುವ ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ಇತರ ಬೇಡಿಕೆಗಳಿಗೆ ಸ್ಪಂದಿಸುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಗುರುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಒತ್ತಾಯಿಸಿತು.

ಮಾಜಿ ಸಚಿವ, ಹೈದ್ರಾಬಾದ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ, ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಸಿ. ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಹಾಗೂ ಇತರ ಸಂಘ ಸಂಸ್ಥೆಗಳ ಅಧ್ಯಕ್ಷರು, ತಂತ್ರಜ್ಞರನ್ನು ಒಳಗೊಂಡ ಸುಮಾರು 60 ಜನರ ಬೃಹತ್‌ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹೈದ್ರಾಬಾದ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಸ್ಪಂದಿಸಬೇಕೆಂದು ಆಗ್ರಹಿಸಿತು.

ಬೆಂಬಲ ಬೆಲೆಯಲ್ಲಿ ಕೃಷಿ ಧಾನ್ಯ ಖರೀದಿ ಮಾಡುತ್ತಿರುವುದರಿಂದ ದ್ವಿದಳ ಧಾನ್ಯ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮಧ್ಯಪ್ರದೇಶದಲ್ಲಿ ಜಾರಿಯಲ್ಲಿರುವ ಭಾವಾಂತರ ಯೋಜನೆ ಕರ್ನಾಟಕ ರಾಜ್ಯದಲ್ಲೂ ಜಾರಿಗೆ ತಂದರೆ ರೈತರ ಜತೆಗೆ ವ್ಯಾಪಾರಿಗಳಿಗೂ ಸಹಾಯವಾಗುತ್ತದೆ.

ಅಲ್ಲದೆ ತೊಗರಿ ಬೇಳೆ ಬೆಲೆ ಕುಸಿತದಿಂದ ಹೈ.ಕ ಭಾಗದಲ್ಲಿರುವ ಶೇ. 90ರಷ್ಟು ದಾಲ್‌ಮಿಲ್‌ಗ‌ಳು ಮುಚ್ಚಿವೆ. ಹೀಗಾಗಿ ದಾಲ್‌ಮಿಲ್‌ ಮಾಲೀಕರು ಬೀದಿಗೆ ಬಂದಿದ್ದಾರೆ. ಇದಕ್ಕಾಗಿ ಪುನಶ್ಚೇತನ ವರದಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವಿಶೇಷ ಪ್ಯಾಕೇಜ್‌, ವಿದ್ಯುತ್‌ ದರ ಸಬ್ಸಿಡಿ ಮುಂತಾದ ಸೌಲಭ್ಯಗಳಿಗೆ ಶಿಫಾರಸ್ಸು ಮಾಡಲಾಗಿದೆ. ಇದಕ್ಕೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕಾಗಿದೆ ಎಂದು ಸಿಎಂ ಗಮನಕ್ಕೆ ತರಲಾಯಿತು. ತುಮಕೂರುದಲ್ಲಿ ನಿಮ್‌ ಸ್ಥಾಪನೆಯಾಗಿದೆ. ಆದರೆ ಕಲಬುರಗಿಯನ್ನು ಸಂಪೂರ್ಣ ಕೈ ಬಿಡಲಾಗಿದೆ. ಇದನ್ನು ಸೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನಿಸಬೇಕು.

ಅದೇ ರೀತಿ ಕಲಬುರಗಿಯ ವಿಮಾನ ನಿಲ್ದಾಣ ಉಡಾನ್‌ ಯೋಜನೆಗೆ ಸೇರ್ಪಡೆಯಾಗಲು, ವಿಭಾಗೀಯ ರೈಲ್ವೇ ಕಚೇರಿ ಕಾರ್ಯಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕುವುದು, ಇಎಸ್‌ಐ ಆಸ್ಪತ್ರೆಯಲ್ಲಿ ಏಮ್ಸ್‌ ಸ್ಥಾಪನೆಗೆ ಆಸಕ್ತಿ ತೋರುವುದು, ಕೆಎಂಎಫ್‌ ಮಾದರಿಯಲ್ಲಿ ತೊಗರಿ ಮಂಡಳಿ ಅಭಿವೃದ್ಧಿಪಡಿಸುವುದು ಸೇರಿದಂತೆ ಇತರ ಬೇಡಿಕೆಗಳಿಗೆ ಆಸಕ್ತಿ ವಹಿಸಬೇಕೆಂದು ನಿಯೋಗದ ಮುಖಂಡರು ಆಗ್ರಹಿಸಿದರು.

ನಿಯೋಗದಲ್ಲಿ ಎಚ್‌ಕೆಸಿಸಿಐ ಪದಾಧಿಕಾರಿಗಳಾದ ಶರಣು ಪಪ್ಪಾ, ಶಿವರಾಜ ಇಂಗಿನಶೆಟ್ಟಿ, ಮನೀಶ ಎಂ. ಜಾಜಿ, ಅಣ್ಣಾರಾವ ಮಾಲಿಪಾಟೀಲ, ವೆಂಕಟ ಚಿಂತಾಮಣಿರಾವ್‌, ರಾಯಚೂರಿನ ರಜಾಕ್‌ ಉಸ್ತಾದ, ಬೀದರ್‌ನ ಬಿ.ಜಿ. ಶೆಟಕಾರ, ಮುಖಂಡರಾದ ಬಸವರಾಜ ಇಂಗಿನ್‌, ತಂತ್ರಜ್ಞರಾದ ಛಾಯಾ ದೇಗಾಂವಕರ್‌, ಬಸವರಾಜ ಕುಮೂರ, ಸಂಗೀತಾ ಕಟ್ಟಿ ಮುಂತಾದವರಿದ್ದರು

ಮೂರು ದಿನ ಕಲಬುರಗಿಯಲ್ಲಿರುವೆ 371ನೇ (ಜೆ) ವಿಧಿ ಪರಿಣಾಮಕಾರಿ ಜಾರಿ ಹಾಗೂ ಹೈ.ಕ ಭಾಗದ ಅಭಿವೃದ್ಧಿ ಕುರಿತು ಚರ್ಚಿಸಲು ಕಲಬುರಗಿಯಲ್ಲಿಯೇ ಮೂರು ದಿನ ಇದ್ದು ಪರಾಮರ್ಶಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಜಿ ಸಚಿವ ವೈಜನಾಥ ಪಾಟೀಲ ಹಾಗೂ ಎಚ್‌ಕೆಸಿಸಿಐ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದರು.

ಟಾಪ್ ನ್ಯೂಸ್

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6

Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

5

Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.