ವಿಮೋಚನಾ ಹೋರಾಟದ ಸತ್ಯ ಅರಿವಿರಲಿ
Team Udayavani, Sep 6, 2022, 4:20 PM IST
ಕಲಬುರಗಿ: ಇಂದಿನ ದಿನಗಳಲ್ಲಿ ನಮ್ಮ ಯುವ ಜನಾಂಗಕ್ಕೆ ಇತಿಹಾಸದ ತಿಳಿವು ಅಗತ್ಯವಾಗಿ ಬೇಕು. ವಿಮೋಚನಾ ದಿನಗಳಲ್ಲಿ ನಡೆದಿರುವ ಹೋರಾಟದ ಕುರಿತು ಸತ್ಯವನ್ನು ಅರಿಯಬೇಕು. ಆದರಿಂದ ಮುಂದಿನ ನಡೆ ಸ್ಪಷ್ಟವಾಗುತ್ತದೆ ಎಂದು ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೆಗಾಂವ್ ಹೇಳಿದರು.
ನಗರದ ಸರಕಾರಿ ಕನ್ಯಾ ಪ.ಪೂ. ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾಡಳಿತ, ಪ.ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಮೋಚನಾ ಹೋರಾಟದ ಚಿಂತನ- ಮಂಥನ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬಳಿಕ ಉಪನ್ಯಾಸ ನೀಡಿದ ಪತ್ರಕರ್ತ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ್, ಅವಿಭಜಿತ ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಭಾರತದಲ್ಲಿ ಬಹುತೇಕ ಚಿಕ್ಕ ಚಿಕ್ಕ ರಾಜ್ಯಗಳು, ಸಂಸ್ಥಾನಗಳಿದ್ದವು. ಬ್ರಿಟಿಷ ಸರ್ಕಾರ ಈ ಎಲ್ಲಾ ರಾಜ್ಯ, ಸಂಸ್ಥಾನಗಳಿಗೆ ಹೊಸದಾಗಿ ರಚಿಸಲ್ಪಡುವ ಭಾರತ ಅಥವಾ ಪಾಕಿಸ್ತಾನದ ಜೊತೆ ವಿಲೀನವಾಗಲು ಅಥವಾ ಸ್ವತಂತ್ರವಾಗಿ ಇರಲು ಆಯ್ಕೆಗಳನ್ನು ಕೊಟ್ಟಿತ್ತು ಎಂದು ತಿಳಿಸಿದರು.
ಬ್ರಿಟಿಷರ ನೇರ ಆಡಳಿತಕ್ಕೆ ಒಳಪಟ್ಟ ಪ್ರದೇಶಗಳು ಅವತ್ತಿನ ದಿನದಿಂದ ಭಾರತಕ್ಕೆ, ಪಾಕಿಸ್ತಾನಕ್ಕೆ ಸೇರಿಸಲ್ಪಟ್ಟವು. ಕೆಲವು ಸಂಸ್ಥಾನಗಳು ಮೊದಮೊದಲು ಭಾರತದಲ್ಲಿ ವಿಲೀನವಾಗಲು ಒಪ್ಪದಿದ್ದರೂ, ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ರಾಜಕೀಯ ಮುತ್ಸದ್ಧಿತನ ಮತ್ತು ಚಾಣಾಕ್ಷತನದಿಂದ ನಂತರ ಒಪ್ಪಿದರು. ಅನೇಕ ರಾಜ್ಯಗಳೊಂದಿಗೆ ಅಂದಿನ ಹೈದರಾಬಾದ್ ಕರ್ನಾಟಕ ಪ್ರದೇಶಗಳನ್ನೊಳಗೊಂಡ ರಾಜ್ಯವು ಕೂಡ ಸೇರಲು ಒಪ್ಪಲಿಲ್ಲ. ಹೈದರಾಬಾದ್ ರಾಜ್ಯ ಬಹುಸಂಖ್ಯಾತ ಹಿಂದೂಗಳನ್ನು ಹೊಂದಿದ್ದರೂ, ಮುಸ್ಲಿಂ ರಾಜರ ಆಳ್ವಿಕೆಗೆ ಒಳಪಟ್ಟಿತ್ತು ಎಂದರು.
ತುಂಬಾ ಜನ ತಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ, ಅದರಲ್ಲಿ ಸರದಾರ ಶರಣಗೌಡ ಇನಾಮದಾರ್, ಸ್ವಾಮಿ ರಾಮನಂದ ತೀರ್ಥರು, ಚಂದ್ರಶೇಖರ ಪಾಟೀಲ್, ನೀಲಕಂಠರಾವ್ ಪಾಟೀಲ್ ಪ್ರಮುಖರು. ಹಲವಾರು ಸಾಮಾನ್ಯ ಜನರು ತಮ್ಮ ಪ್ರಾಣವನ್ನು ನೀಡಿದ್ದಾರೆ. ರಜಾಕಾರರ ಕಿರುಕುಳ ತಾಳದೆ ಕೆಲವರು ಊರು ತ್ಯಜಿಸಿದರು. ಎಲ್ಲ ಮಾತುಕತೆಗಳು, ರಾಜತಾಂತ್ರಿಕ ಒತ್ತಡ, ಷರತ್ತುಗಳಿಗೆ ನಿಜಾಮ ಒಪ್ಪದಿದ್ದಾಗ ಆಗಿನ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತೀಯ ಸೇನೆಗೆ ಆದೇಶ ಕೊಟ್ಟು ಪೊಲೀಸ್ ಕಾರ್ಯಾಚರಣೆ ಮೂಲಕ ಹೈದರಾಬಾದ್ ಅನ್ನು ಭಾರತದಲ್ಲಿ 17ನೇ ಸಪ್ಟೆಂಬರ್ 1948 ರಂದು ಹೈದರಾಬಾದಿನ ನಿಜಾಮ ಶರಣಾದ ನಂತರ ಭಾರತದೊಂದಿಗೆ ವಿಲೀನ ಮಾಡಿಲಾಯಿತು ಎಂದು ಉಪನ್ಯಾಸದಲ್ಲಿ ವಿವರಿಸಿದರು.
ಪ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ವೇದಮೂರ್ತಿ, ಒಕ್ಕೂಟದ ಕಾನೂನು ಸಲಹೆಗಾರರಾದ ಗುರುರಾಜ ತಿಳಗುಳ, ಗೌರವಾಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಅತಿಥಿಯಾಗಿ ಸಚಿನ್ ಫರತಾಬಾದ್ ಭಾಗವಹಿಸಿದ್ದರು. ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಯಶ್ವಂತ ಸೂರ್ಯವಂಶಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ಮಂಜುನಾಥ ನಾಲವಾರಕರ್ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಜಗದೇವಿ ನಿರೂಪಿಸಿದರು. ಶಿಕ್ಷಕಿ ಜಯಶ್ರೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.