ಜ್ಞಾನ ದಾಸೋಹ ಶ್ರೇಷ್ಠ ಕಾರ್ಯ
Team Udayavani, Feb 5, 2018, 12:11 PM IST
ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿಂತ ಮಿಗಿಲಾದ ವಸ್ತು ಮತ್ತೂಂದಿಲ್ಲ, ಅದನ್ನು ದಾಸೋಹದ ರೂಪದಲ್ಲಿ ಹಂಚಿಕೊಳ್ಳುವುದಕ್ಕಿಂತ ಮಹತ್ತರ ಕಾರ್ಯ ಮತ್ತೂಂದಿಲ್ಲ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ
ಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು
ವಾಣಿಜ್ಯ ಮಹಿಳಾ ಮಹಾ ವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.
ಹಲವಾರು ರೂಪದ ದಾಸೋಹಗಳು ಚಾಲ್ತಿಯಲ್ಲಿದ್ದು, ಅದರಲ್ಲಿ ಜ್ಞಾನ ದಾಸೋಹವೇ ಅತೀ ಶ್ರೇಷ್ಠವಾದದ್ದು. ಜ್ಞಾನ ಅವ್ಯಕ್ತ ವ್ಯಕ್ತಿಯನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುತ್ತದೆ. ಹೀಗಾಗಿ ಜ್ಞಾನ ದಾಸೋಹ ಎಲ್ಲ ಕಾಲಕ್ಕೂ ಸಲ್ಲುವಂತಹದ್ದಾಗಿದೆ ಎಂದು ನುಡಿದರು.
ಮನುಷ್ಯರು ಆಶಾವಾದಿಗಳಾಗಿರಬೇಕು. ಇದರಿಂದ ಅಂದುಕೊಂಡಿದ್ದನ್ನು ಸಾಧಿಸಬಹುದು. ಮೇಡಂ ಕ್ಯೂರಿ ಆಶಾವಾದಿ ಆಗಿದ್ದರಿಂದಲೇ ಅವರ ಮನೆತನಕ್ಕೆ ಜಗತ್ತಿನ ಸರ್ವಶ್ರೇಷ್ಠ ಐದು ನೊಬೆಲ್ ಪಾರಿತೋಷಕಗಳು ಲಭಿಸಿದ್ದವು. ಆದ್ದರಿಂದ ಜೀವನದಲ್ಲಿ ಎಂತಹದೇ ಕಷ್ಟ ಕಾರ್ಪಣ್ಯಗಳು ಬಂದರೂ ಎದೆಗುಂದದೇ ಮುನ್ನುಗ್ಗುವ
ಮನೋಭಾವ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ, ಶರಣಬಸವ ವಿವಿ ಕುಲಪತಿ ಡಾ| ನಿರಂಜನ ನಿಷ್ಠಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿದ್ಯಾರ್ಥಿ ಕಲ್ಯಾಣಾಧಿಕಾರಿ
ಪ್ರೊ| ಶಾಂತಲಾ ನಿಷ್ಟಿ ಹಾಜರಿದ್ದರು. ಸಂಗೀತ ವಿಭಾಗದವರು ವಚನ ಗಾಯನ ನಡೆಸಿಕೊಟ್ಟರು. ಪ್ರಾಚಾರ್ಯೆ ಡಾ| ನೀಲಾಂಬಿಕಾ ಶೇರಿಕಾರ ಸ್ವಾಗತಿಸಿದರು. ಡಾ| ಪುಟ್ಟಮಣಿ ದೇವಿದಾಸ ನಿರೂಪಿಸಿದರು. ಡಾ| ಎಸ್.ಎಸ್. ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.