ಲೋಕ ಕಲ್ಯಾಣಕ್ಕಾಗಿ ಅವತರಿಸಿದ ಸೂತ್ರಧಾರಿ
Team Udayavani, Aug 15, 2017, 11:16 AM IST
ಆಳಂದ: ಭಗವದ್ಗೀತೆ ಭಾರತ ಚಿಂತನೆಯ ಪರಂಪರೆಯ ತಾಯಿ ಬೇರು. ಇದನ್ನು ಬೋಧಿ ಸಿದ ಶ್ರೀಕೃಷ್ಣ ಸಮಸ್ತ ಜೀವಕೋಟಿಗೆ ಅಭಯ ನೀಡಿದ್ದಾನೆ. ಅವನ ವಂಶಜರು ಶಿಕ್ಷಣ, ಸಂಘಟನೆ, ಸಾಮಾಜಿಕ ಆರ್ಥಿಕವಾಗಿ ಅಭಿವೃದ್ಧಿ ಸಾಧಿ ಸಲು ಪ್ರಯತ್ನಿಸಬೇಕು ಎಂದು ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಹೇಳಿದರು. ಪಟ್ಟಣದ ಗುರುಭವನ ಆವರಣದಲ್ಲಿ ಸೋಮವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಮಾತ್ಮನಾದ ಶ್ರೀಕೃಷ್ಣ ಲೋಕಕಂಟಕ ನಿವಾರಣೆಗೆ ಮತ್ತು ಲೋಕ ಕಲ್ಯಾಣಕ್ಕಾಗಿ ಅವತರಿಸಿರುವ ಸೂತ್ರಧಾರಿ. ಮಹಾಭಾರತ ಎಂಬ ನದಿ
ನಾವಿಕನಾಗಿ ವಿಶ್ವಕ್ಕೆ ಅಮೂಲ್ಯ ನಿಧಿಯಾದ ಭಗವದ್ಗೀತೆ ಉಪದೇಶಿಸಿದವನೇ ಶ್ರೀಕೃಷ್ಣ. ಭಗವದ್ಗೀತೆ ಭಾರತ ಚಿಂತನಾ
ಪರಂಪರೆಯ ತಾಯಿಬೇರು. ಕೃಷ್ಣ ಜನ್ಮಾಷ್ಟಮಿ ಹಿಂದುಗಳಲ್ಲಿ ಆಚರಿಸುವ ಒಂದು ಪವಿತ್ರ ಹಬ್ಬದ ದಿನವಾಗಿದೆ. ಇದು ಅಧರ್ಮ ಓಡಿಸಿ ಧರ್ಮ ರಕ್ಷಿಸುವ ಸಲುವಾಗಿ ಶ್ರೀಕೃಷ್ಣ ಜನಿಸಿದ ದಿನವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ತಾಪಂ
ಕಾರ್ಯನಿರ್ವಾಹಕ ಅಧಿ ಕಾರಿ ಡಾ| ಸಂಜಯ ರೆಡ್ಡಿ ಮಾತನಾಡಿ, ಶ್ರೀಕೃಷ್ಣನ ಆದರ್ಶ ಮೈಗೂಡಿಸಿಕೊಂಡು ಯಾದವ (ಗೊಲ್ಲ) ಸಮುದಾಯದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಸರ್ಕಾರಿ ಸೌಲಭ್ಯ ಪಡೆಯಬೇಕು ಎಂದು ಹೇಳಿದರು. ಉಪನ್ಯಾಸಕ ಸಂಜು ಪಾಟೀಲ ಉಪನ್ಯಾಸ ನೀಡಿದರು. ಪುರಸಭೆ ಮುಖ್ಯಾಧಿ ಕಾರಿ ಚಂದ್ರಕಾಂತ ಪಾಟೀಲ, ಪಿಎಸ್‌ಐ ಸುರೇಶ ಬಾಬು, ಗ್ರೇಡ್-2 ತಹಸೀಲ್ದಾರ ಬಿ.ಜಿ. ಕುದರಿ, ಮುಖಂಡ ದಯಾನಂದ ಶೇರಿಕಾರ, ಕಂದಾಯ ನಿರೀಕ್ಷಕ ಶರಣಬಸಪ್ಪ ಹಕ್ಕಿ, ಗೊಲ್ಲ ಸಮುದಾಯದ ಮುಖಂಡ ಯಲ್ಲಪ್ಪ ಸಾವಳೆ, ಯಲ್ಲಪ್ಪ ಬಿ. ಸಾವಳೆ, ಸುರೇಶ ವರನಾಳೆ, ಭೀಮಶಾ ಮಾರವಾಡಿ, ರಾಮ ಸಾವಳೆ, ಯಂಕಪ್ಪ ಇರೊಳೆ
ಇದ್ದರು. ಪ್ರಹ್ಲಾದ ಶಿಂಧೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನಂತರ ಪ್ರಮುಖ ರಸ್ತೆಗಳ ಮೂಲಕ ಕುಂಬ ಕಳಸದೊಂದಿಗೆ ಪ್ರಮುಖ ರಸ್ತೆಗಳ ಮೂಲಕ ಕೃಷ್ಣನ ಭಾವಚಿತ್ರದ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.