ಕುಂಚಾವರಂ ಗಡಿ ತಾಂಡಾಗಳಿಗೆ ಮೂಲ ಸೌಕರ್ಯ
Team Udayavani, Jul 24, 2017, 3:18 PM IST
ಚಿಂಚೋಳಿ: ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವ ಅತಿ ಹಿಂದುಳಿದ ಪ್ರದೇಶ ಕುಂಚಾವರಂ ಗಡಿಭಾಗದಲ್ಲಿ ಇರುವ ಗ್ರಾಮ/ ತಾಂಡಾಗಳಿಗೆ ಮೂಲ ಸೌಕರ್ಯಗಳನ್ನು ವಿವಿಧ ಯೋಜನೆ ಅಡಿಯಲ್ಲಿ ಮಂಜೂರಿಗೊಳಿಸಿಅನುಕೂಲ ಮಾಡಿಕೊಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ್ ಹೇಳಿದರು.
ಕುಂಚಾವರಂ ಗಡಿಭಾಗದ ಪೋಚಾವರಂ, ಮಗದಂಪುರ, ಶಿವರಾಮಪುರ, ಶಿವರೆಡ್ಡಿಪಳ್ಳಿ ಹಾಗೂ ಕುಂಚಾವರಂ ಗ್ರಾಮಗಳಲ್ಲಿ ಸಮುದಾಯ ಭವನ, ಸಿಮೆಂಟ ರಸ್ತೆ, ನೀರಿನ ಟ್ಯಾಂಕ್ ನಿರ್ಮಾಣ ಸೇರಿದಂತೆ ಒಟ್ಟು 2 ಕೋಟಿ ರೂ.ವೆಚ್ಚದ ಕಾಮಗಾರಿಗಳ ಅಡಿಗಲ್ಲು ಸಮಾರಂಭ ನೆರವೇರಿಸಿದ ನಂತರ ಕುಂಚಾವರಂ ಪ್ರವಾಸಿ ಮಂದಿರ ಆವರಣದಲ್ಲಿ ಏರ್ಪಡಿಸಿದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕುಂಚಾವರಂ ಗಡಿಭಾಗದ ಜನರಿಗೆ ಸರಕಾರದ ಸವಲತ್ತು ಸಿಗುವುದಕ್ಕಾಗಿ ಜನಸ್ನೇಹಿ ಕೇಂದ್ರ ಮತ್ತು ಬಡವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರಕಾರಿ ಕೈಗಾರಿಕೆ ತರಬೇತಿ ಕೇಂದ್ರ ಮತ್ತು ಪ್ರಸಕ್ತ ಸಾಲಿನಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಆಂಗ್ಲ ಮಾಧ್ಯಮ ಶಾಲೆ ಮಂಜೂರಿಗೊಳಿಸಲಾಗಿದೆ ಎಂದು ಹೇಳಿದರು.
ತಾಪಂ ಸದಸ್ಯ ಚಿರಂಜೀವಿ ಶಿವರಾಮಪುರ, ಡಿ. ಉಮಾಪತಿ, ನರಸಿಂಹಲೂ ಕುಂಬಾರ, ನರಸಿಂಹ ಸವಾರಿ, ಕುಂಚಾವರಂ ಗ್ರಾಪಂ ಅಧ್ಯಕ್ಷ ಗೋಪಾಲ ಮಾತನಾಡಿದರು. ಎಇಇ ಶಿವಾಜಿ ಡೋಣಿ, ಎಇ ಕಲಿಮೋದ್ದೀನ್, ಎಇ ಮುಸಾ ಖಾದ್ರಿ, ಜೆಇ ಅರ್ಷದ, ವೆಂಕಟಾಪುರ ಗ್ರಾಪಂ ಮಾಜಿ ಅಧ್ಯಕ್ಷ ಗೋಪಾಲ ಜಾಧವ್, ಕೆ.ಎಂ.ಬಾರಿ, ಲಕ್ಷ್ಮಣ ಆವಂಟಿ, ರಾಮಶೆಟ್ಟಿ ಪವಾರ, ಚಂದ್ರಶೆಟ್ಟಿ ರಾಠೊಡ, ಅಶೋಕ, ಸ್ಯಾಮುವೆಲ್, ರಾಜು ರುಸ್ತಂ, ಮೊಗಲಪ್ಪ ಇನ್ನಿತರರಿದ್ದರು. ರಮೇಶ ಸಂಕಟಿ ಸ್ವಾಗತಿಸಿದರು. ಖೀಮು ರಾಠೊಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್!
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.