ಕುರುಬ ಸಂಘ ಯುವ ಘಟಕ ಪ್ರತಿಭಟನೆ
Team Udayavani, Mar 1, 2022, 10:02 AM IST
ಜೇವರ್ಗಿ: ಕುರಿಗಾಹಿ ಮಹಿಳೆ ಮೇಲೆ ನಡೆದ ಹತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘ ಯುವ ಘಟಕದ ವತಿಯಿಂದ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಪ್ರದೇಶ ಕುರುಬ ಸಂಘ ಯುವ ಘಟಕದ ಅದ್ಯಕ್ಷ ನಿಂಗಣ್ಣ ರದ್ದೇವಾಡಗಿ ಮಾತನಾಡಿ, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊನ್ನೂರ ಗ್ರಾಮದ 27 ವರ್ಷದ ಲಕ್ಷ್ಮೀ ವಿಠಲ ಕಳ್ಳಿಮನಿ ಎಂಬ ವಲಸೆ ಕುರಿಗಾಹಿ ಕಳೆದ ಫೆ.18 ರಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿಹಟ್ಟಿಯಿಂದ ಕಟ್ಟಿಗೆ ತರಲು ಹೋದಾಗ ಮಹ್ಮದ್ ಕೋಲಕಾರ ಎಂಬ ವ್ಯಕ್ತಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದಾನೆ. ಆದರೆ ಈ ಘಟನೆಯಲ್ಲಿ ಇನ್ನೂ ಕೆಲವರು ಪಾಲ್ಗೊಂಡಿದ್ದು, ಸೂಕ್ತ ತನಿಖೆ ನಡೆಸಿ ಎಲ್ಲ ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕು. ಸದರಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಧನ ನೀಡಬೇಕು. ರಾಜ್ಯದ ಎಲ್ಲ ವಲಸೆ ಕುರಿಗಾಹಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ಮೃತ ಲಕ್ಷ್ಮೀ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಶಿರಸ್ತೇದಾರ ಟಿಪ್ಪು ಸುಲ್ತಾನ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕುರುಬ ಸಮಾಜದ ತಾಲೂಕು ಅಧ್ಯಕ್ಷ ನಾಗಣ್ಣ ಗಡ್ಡದ್, ಸಂಗೋಳ್ಳಿ ರಾಯಣ್ಣ ಯುವ ಸಂಘದ ಅಧ್ಯಕ್ಷ ಚಂದ್ರಶೇಖರ ನೇರಡಗಿ, ಸಾಯಬಣ್ಣ ದೊಡ್ಡಮನಿ, ನಿಂಗಣ್ಣ ಭಂಡಾರಿ, ರಾಜಶೇಖರ ಮುತ್ತಕೋಡ, ಭೂತಾಳಿ ಭಾಸಗಿ ನೆಲೋಗಿ, ಬೀರಲಿಂಗ ಕಟ್ಟಿಸಂಗಾವಿ, ಭೀಮಾಶಂಕರ ಕನ್ನೋಳ್ಳಿ, ಭೀಮಾಶಂಕರ ಜನಿವಾರ, ಮಾಳಿಂಗರಾಯ ಹಿಪ್ಪರಗಿ, ಭಗವಂತ್ರಾಯ ಬೆಣ್ಣೂರ, ರವಿಕುಮಾರ ಜನಿವಾರ ಸೇರಿದಂತೆ ಹಲವಾರು ಜನ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.