ಕುವೆಂಪು ಸಾಹಿತ್ಯ ಲೋಕದ ದಿಗ್ಗಜ: ಪಾಟೀಲ
Team Udayavani, Dec 30, 2017, 10:54 AM IST
ಕಲಬುರಗಿ: ನಾಡಿನ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ತಮ್ಮ ಸಾಹಿತ್ಯ ಮತ್ತು ಕವನದಿಂದ ಸಮಾಜದ ಓರೆ ಕೋರೆ ತಿದ್ದುವ ಮೂಲಕ ಸಾಹಿತ್ಯ ಲೋಕದ ದಿಗ್ಗಜರಾಗಿ ಹೊರಹೊಮ್ಮಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ
ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕವಿ, ನಾಟಕಕಾರ, ಕಾದಂಬರಿಕಾರರಾಗಿದ್ದ ಕುವೆಂಪು ಅಖಂಡ ಕರ್ನಾಟಕದ ಬಗ್ಗೆ ಪರಿಕಲ್ಪನೆ ಹೊಂದಿದ್ದರು. ತಮ್ಮ
ಬರಹದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಮೇರು ವ್ಯಕ್ತಿತ್ವದ ನುಡಿ-ನಡೆಯಲ್ಲಿ ಸಾಮ್ಯತೆ ಕಂಡುಕೊಂಡ ಯುಗದ ಕವಿ ಅವರಾಗಿದ್ದಾರೆ. ಬುದ್ಧ, ಬಸವ, ಬಸವಾದಿ ಶರಣರು ಸೇರಿದಂತೆ ನಾಡಿನ ಖ್ಯಾತ ಕವಿಗಳ ಬದುಕು ಮತ್ತು ಬರಹ ಇಂದಿನ ಪೀಳಿಗೆ ಮಾದರಿಯಾಗಿದೆ ಎಂದರು.
ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹೈ.ಕ. ಭಾಗದ ವ್ಯಾಪ್ತಿಯ ಗ್ರಂಥಾಲಯಗಳಿಗೆ ಪುಸ್ತಕ ಸರಬರಾಜು ಮಾಡಲು ಇಲ್ಲಿನ ಲೇಖಕರಿಂದ ಪುಸ್ತಕಗಳನ್ನು ಖರೀದಿಸಲಾಗುವುದು. ಈ ಸಂಬಂಧ ವಾರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಕಲಬುರಗಿ ಎನ್.ವಿ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಸ್ವಾಮಿರಾವ್ ಕುಲಕರ್ಣಿ ಉಪನ್ಯಾಸ ನೀಡಿದರು.
ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ
ಪಾಟೀಲ, ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರೊ| ಬಿ.ಡಿ. ಕಲಬುರಗಿ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಅಪ್ಪಾರಾವ್ ಅಕ್ಕೋಣಿ, ಡಾ| ವಾಸುದೇವ
ಸೇಡಂ ಹಾಗೂ ಸಾಹಿತಿಗಳು, ಉಪನ್ಯಾಸಕರು, ವಿವಿಧ ಕಾಲೇಜಿನ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಡಾ| ಚಿ.ಸಿ. ನಿಂಗಣ್ಣ
ನಿರೂಪಿಸಿದರು. ಇದಕ್ಕೂ ಮುನ್ನ ಕಲಾವಿದ ಬಸಯ್ಯ ಗುತ್ತೇದಾರ ಮತ್ತು ತಂಡದಿಂದ ಕುವೆಂಪು ಗೀತ ಗಾಯನ ಮತ್ತು ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಕವಿತೆ ವಾಚನ ನಡೆಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.