ಹುಟ್ಟಿದ ಕುಲಕ್ಕಿಂತ ಕಾಯಕ ಲೇಸು


Team Udayavani, Jan 16, 2018, 5:23 PM IST

yad-4.jpg

ಕಲಬುರಗಿ: ನಾವು ಯಾವ ಸಮಾಜದಲ್ಲಿ, ಕುಲದಲ್ಲಿ ಹುಟ್ಟಿದ್ದೇವೆ ಎನ್ನುವುದು ಮುಖ್ಯವಲ್ಲ.. ನಾವು ಜೀವಿಸುವ ಸಮಾಜಕ್ಕೆ ಯಾವ ರೀತಿ ದಾರಿದೀಪವಾಗಿ ಕಾಯಕ ಮಾಡಿದ್ದೇವೆ ಎನ್ನುವುದು ಪ್ರಮುಖವಾಗುತ್ತದೆ. ಆದ್ದರಿಂದ
ಜಾತಿಗಿಂತ ಕಾಯಕ ಲೇಸು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ
ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು. 

ಬಸವಾದಿ ಶರಣರು ರಚಿಸಿರುವ ಸಾಹಿತ್ಯದಿಂದ ಮಾನವನ ಬದಲಾವಣೆ ಸಾಧ್ಯ. ಇಂಥ ಸಾಹಿತ್ಯ, ವಚನಗಳನ್ನು
ಮಕ್ಕಳಿಗೆ ತಿಳಿಸಿ ಅರ್ಥ ಮಾಡಿಸಬೇಕು. ವಚನಗಳಲ್ಲಿರುವ ಅರಿವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು. ಸಮಾಜದಲ್ಲಿ ಒಗ್ಗಟ್ಟು ತಂದು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕು ಎಂದು ಹೇಳಿದರು.

ಶಿವಯೋಗಿ ಸಿದ್ದರಾಮೇಶ್ವರರು ಕಾಯಕಯೋಗಿಯಾಗಿ ನಿಸ್ವಾರ್ಥಿ ಗಳಾಗಿದ್ದರು. ಆದ್ದರಿಂದಲೇ ಅನುಭವ
ಮಂಟಪದಲ್ಲಿ ಚನ್ನಬಸವಣ್ಣನವರು ಉನ್ನತ ಸ್ಥಾನ ನೀಡಿದ್ದರು. ಹನ್ನೆರಡನೇ ಶತಮಾನದ ಬಸವಾದಿ ಶರಣರು
ನುಡಿದಂತೆ ನಡೆದುಕೊಂಡಿದ್ದಾರೆ. ಈಗ ಸ್ವಾರ್ಥ ಮರೆಯಲಿಕ್ಕೆ ಆಗುತ್ತಿಲ್ಲ. ಸ್ವಾರ್ಥ ಬಿಡಲು ಬಸವಾದಿ ಶರಣರು ಹಲವಾರು ವಚನ ರಚಿಸಿದ್ದಾರೆ. ನಾವು ಯಾವ ಕುಲದಲ್ಲಿ ಹುಟ್ಟಿದ್ದೇವೆ ಎನ್ನುವುದು ಮುಖ್ಯವಲ್ಲ. ನಾನು ಹೇಗೆ ಸಮಾಜಕ್ಕೆ ದಾರಿದೀಪವಾಗಿ ಬಾಳಿ ಬದುಕುತ್ತೇನೆ ಎಂಬುವುದು ಮುಖ್ಯ ಎಂದು ಹೇಳಿದರು. 

ಸರ್ಕಾರ ಭೋವಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಇದಕ್ಕೆ ಹೆಚ್ಚಿನ ಅನುದಾನ ನೀಡಿ ಸಮಾಜ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು. ಜೀವನವೇ ಅವರ ಸಂದೇಶ ಎನ್ನುವ ರೀತಿಯಲ್ಲಿ ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡಿದವರ ಜನ್ಮ ದಿನವನ್ನು ಸರ್ಕಾರ ಆಚರಿಸುತ್ತಿದೆ. 

ಕುಲಕ್ಕೊಬ್ಬ ಶರಣನ್ನು ಗುರುತಿಸಿ ಎಲ್ಲ ಸಮಾದವರಲ್ಲಿ ಸ್ವಾಭಿಮಾನ ತುಂಬಿ ಗೌರವಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಹನ್ನೆರಡನೇ ಶತಮಾನದ ಕ್ರಾಂತಿ ಸಕಲ ಜೀವಾತ್ಮಗಳಿಗೆ ಲೇಸು ಬಯಸಿದ್ದು, ಇಡೀ ಸಮಾಜವನ್ನು ಪರಿವರ್ತಿಸುವಲ್ಲಿ ತೊಡಗಿತ್ತು ಎಂದು ಹೇಳಿದರು.
 
ಚಿರಗಳ್ಳಿ ಜಗದ್ಗುರು ಮುರಳಶಂಕರ ದೇವರ ಗುರುಪೀಠದ ಸಿದ್ದಬಸವ ಕಬೀರ ಮಹಾಸ್ವಾಮಿಗಳು ವಿಶೇಷ ಉಪನ್ಯಾಸ
ನೀಡಿ, ಕೆರೆ ಕಟ್ಟಿಸುವುದು, ಮದುವೆ ಮಾಡಿಸುವಂತಹ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದ ಸಿದ್ದರಾಮೇಶ್ವರರನ್ನು
ಅಲ್ಲಮಪ್ರಭುಗಳು ಮನಪರಿವರ್ತಿಸಿ ಸ್ವತಃ ಕಾಯಕ ಮಾಡಿ ಅನ್ನದಾಸೋಹ ಮಾಡಲು ತಿಳಿಸುತ್ತಾರೆ. 

ಸಿದ್ದರಾಮೇಶ್ವರರನ್ನು ಅನುಭವ ಮಂಟಪಕ್ಕೆ ಕರೆತಂದು ಪರಿಶುದ್ಧರನ್ನಾಗಿಸಿ ಶೂನ್ಯ ಪೀಠದ ಅಧ್ಯಕ್ಷರನ್ನಾಗಿಸುತ್ತಾರೆ.
ಅನುಭವ ಮಂಟಪದಲ್ಲಿ ಬಸವಣ್ಣನವರ ಮಾರ್ಗದರ್ಶನದಲ್ಲಿ ಶಿವಯೋಗಿ ಸಿದ್ದರಾಮೇಶ್ವರರು ಮನುಕುಲದ ಉದ್ಧಾರಕ್ಕೆ ಶ್ರಮಿಸುತ್ತ ಹಲವಾರು ವಚನಗಳನ್ನು ರಚಿಸಿದ್ದಾರೆ. ಅವುಗಳನ್ನು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಸಿದ್ದರಾಮೇಶ್ವರರು ಹನ್ನೆರಡನೇ ಶತಮಾನದ ಇಂಜಿನಿಯರ್‌ ಆಗಿದ್ದರು. ಅವರು ತಮ್ಮ ಕಾಲದಲ್ಲಿ ಹಲವಾರು ಕೆರೆ ಕಟ್ಟಿಸಿದ್ದಾರೆ. ಭೋವಿ, ವಡ್ಡರ ಸಮಾಜದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕು ಎಂದು ಮನವಿ ಮಾಡಿದರು. 

ಶ್ರೀಶೈಲ ಸಾರಂಗಮಠದ ಡಾ|ಸಾರಂಗಧರ ದೇಶಿಕೇಂದ್ರದ ಮಹಾಸ್ವಾಮಿ,ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ
ಮಲಾಜಿ, ವಿಧಾನ ಪರಿಷತ್‌ ಶಾಸಕರಾದಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ಜಿಲ್ಲಾ ಭೋವಿ (ವಡ್ಡರ) ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬಿ. ಕುಸ್ತಿ, ಮುಖಂಡರಾದ ಸುನೀಲ ವಲ್ಲಾಪುರೆ, ಆರ್‌.ಎಸ್‌. ಪಾಟೀಲ, ವೀರಣ್ಣ ಹೊನ್ನಳ್ಳಿ, ಅನೀಲ ಜಾಧವ, ಅಲ್ಲಮಪ್ರಭು ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ನಂತರ ಸಚಿವರು ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ಚಾಲನೆ ನೀಡಿದರು. 

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.