ಭಕ್ತರಿಲ್ಲದೆ ಧಾರ್ಮಿಕ ಕ್ಷೇತ್ರಗಳು ಬಿಕೋ
Team Udayavani, Mar 17, 2020, 11:33 AM IST
ಅಫಜಲಪುರ: ದಿನದಿಂದ ದಿನಕ್ಕೆ ಪಸರಿಸುತ್ತಿರುವ ಕೊರೊನಾ ಸೋಂಕಿಗೆ ಭಯಗೊಂಡಿರುವ ಜನರು ದೇವಸ್ಥಾನಗಳಿಗೂ ಆಗಮಿಸುತ್ತಿಲ್ಲ. ಇದರಿಂದ ಗುಡಿ-ಮಂದಿರಗಳು ಭಕ್ತರಿಲ್ಲದೆ ಬಿಕೋ ಎನ್ನುತ್ತಿವೆ.
ದೇವಲ ಗಾಣಗಾಪುರ: ತಾಲೂಕಿನ ಸುಕ್ಷೇತ್ರಗಳಾದ ಘತ್ತರಗಿ ಮತ್ತು ದೇವಲ ಗಾಣಗಾಪುರಗಳಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಅದರಲ್ಲೂ ಪ್ರತಿನಿತ್ಯ ಸಾವಿರಾರು ಭಕ್ತರಿಂದ ತುಂಬಿರುತ್ತಿದ್ದ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನ ಹಾಗೂ ಸಂಗಮ ಕ್ಷೇತ್ರದಲ್ಲಿಗ ಬೆರಳೆಣಿಕೆಯಷ್ಟು ಭಕ್ತರು ಕಾಣುತ್ತಿಲ್ಲ. ಈ ದೇವಸ್ಥಾನಕ್ಕೆ ದೇಶದ ವಿವಿಧ ಮೂಲೆಗಳಿಂದ ಭಕ್ತರು ಬರುತ್ತಾರೆ. ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಸೀಮಾಂದ್ರ, ತೆಲಂಗಾಣ, ತಮಿಳುನಾಡು, ಗೋವಾ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ, ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಪಲ್ಲಕ್ಕಿ, ಅನ್ನ ದಾಸೋಹ, ಪುಣ್ಯಸ್ನಾನ ನಿಲ್ಲಿಸಲಾಗಿದೆ.
ಘತ್ತರಗಿ: ತಾಲೂಕಿನ ಇನ್ನೊಂದು ಪುಣ್ಯಕ್ಷೇತ್ರ ಘತ್ತರಗಿಯ ಭಾಗ್ಯವಂತಿ ದೇವಸ್ಥಾನದಲ್ಲಿ ಕೂಡ ಭಕ್ತರಿಲ್ಲದೆ ಭಣಭಣ ಎನ್ನುತ್ತಿದೆ. ಭಾಗ್ಯವಂತಿ ದೇವಸ್ಥಾನಕ್ಕೂ ನಿತ್ಯ ನೂರಾರು ಭಕ್ತರು ಬಂದು ಹೋಗುತ್ತಾರೆ. ಭೀಮಾ ನದಿಯಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಕೊರೊನಾ ರೋಗದ ಭೀತಿಯಿಂದ ಭಕ್ತರು ಬರುತ್ತಿಲ್ಲ. ಹೀಗಾಗಿ ಭಾಗ್ಯವಂತಿ ದೇವಸ್ಥಾನಕ್ಕೂ ಭಕ್ತರ ಬರ ಕಂಡು ಬಂದಿದೆ. ಇನ್ನೂ ತಾಲೂಕಿನ ಅನೇಕ ಧಾರ್ಮಿಕ ಕ್ಷೇತ್ರಗಳಲ್ಲೂ ಭಕ್ತರಿಲ್ಲದೆ ಇರುವುದರಿಂದ ದೇವಸ್ಥಾನಗಳು ಬಿಕೋ ಎನ್ನುತ್ತಿವೆ. ಎಲ್ಲಾ ದೇವಸ್ಥಾನಗಳಲ್ಲಿನ ಅನ್ನ ದಾಸೋಹ ಬಂದ್ ಮಾಡಲಾಗಿದೆ.
ಈಗಾಗಲೇ ಅನ್ನ ದಾಸೋಹ ನಿಲ್ಲಿಸಲಾಗಿದೆ. ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. –ಕೆ.ಜಿ ಬಿರಾದಾರ, ದೇವಲ ಗಾಣಗಾಪುರ, ಘತ್ತರಗಿ ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.