ಅಫಜಲಪುರ ನಿವಾಸಿಗಳಿಗೆ ಕುಡಿವ ನೀರಿಲ್ಲ
ಪ್ರವಾಹ ನೆಪದಲ್ಲಿ 4 ದಿನದಿಂದ ನೀರು ಪೂರೈಕೆ ಸ್ಥಗಿತ
Team Udayavani, Oct 18, 2020, 6:35 PM IST
ಅಫಜಲಪುರ: ಮಹಾರಾಷ್ಟ್ರದಲ್ಲಿ ಮಳೆ ಬಂದರೆ ಅಫಜಲಪುರ ಪಟ್ಟಣದಲ್ಲಿ ಕುಡಿಯಲು ನೀರುಬರುವುದಿಲ್ಲ. ಇದು ತಮಾಷೆಯಾದರೂ ನಿಜ. ಕಳೆದನಾಲ್ಕು ದಿನಗಳಿಂದ ಪಟ್ಟಣದ ಜನರಿಗೆ ಕುಡಿಯುವ ನೀರು ಮರೀಚಿಕೆಯಾಗಿದೆ.
ದಿನದಿಂದ ದಿನಕ್ಕೆ ಪಟ್ಟಣದ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಸದ್ಯ ಪಟ್ಟಣದಲ್ಲಿ ಅಂದಾಜು 29 ಸಾವಿರದಷ್ಟು ಜನಸಂಖ್ಯೆ ಇದೆ. ಇಷ್ಟೊಂದು ಪ್ರಮಾಣದ ಜನರಿಗೆ ನದಿಯ ನೀರನ್ನು ಶುದ್ಧೀಕರಿಸದೆ ಪುರಸಭೆಯವರು ನೀರು ಸರಬರಾಜು ಮಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಶುದ್ಧೀಕರಣ ಘಟಕ ಒಂದು ದಿನವೂ ನೀರು ಶುದ್ಧೀಕರಿಸಿಲ್ಲ. ಹೀಗಾಗಿ ಪಟ್ಟಣದ ಜನರಿಗೆ ಶುದ್ಧ ನೀರು ಅನ್ನುವುದೇ ಗೊತ್ತಿಲ್ಲ. ಬರೀ ಕಲುಷಿತ ನೀರನ್ನು ನೆಚ್ಚಿಕೊಂಡಂತಾಗಿದೆ.
ಪ್ರವಾಹದ ನೆಪ: ಪ್ರವಾಹ ಬಂದು ಅಫಜಲಪುರ ಪಟ್ಟಣದ ಎರಡು ಬಡಾವಣೆಗಳಲ್ಲಿ ನೀರು ನುಗ್ಗಿದೆ. ಆದರೆ, ಪಟ್ಟಣದ ಬಡಾವಣೆಗಳಿಗೆ ನೀರು ನುಗ್ಗುವ ಮೊದಲೇ ಪುರಸಭೆಯವರು ನೀರುಸರಬರಾಜು ನಿಲ್ಲಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ನಿಲ್ಲಿಸಲಾಗಿದೆ. ಪುರಸಭೆಯವರು ತಮ್ಮ ಜವಾಬ್ದಾರಿಮರೆತು ಪ್ರವಾಹದ ನೆಪದಲ್ಲಿ ನೀರು ಪೂರೈಕೆ ಮಾಡುತ್ತಿಲ್ಲ.
ಖಾಸಗಿಯವರಿಗೆ ಭರ್ಜರಿ ಲಾಭ: ಪುರಸಭೆಯವರುನದಿ ನೀರನ್ನು ಸರಬರಾಜು ಮಾಡುತ್ತಿದ್ದರು. ಆದರೆ ನಾಲ್ಕು ದಿನಗಳಿಂದ ಸರಬರಾಜು ನಿಲ್ಲಿಸಿದ್ದಾರೆ.ಆದರೆ ಪ್ರವಾಹಕ್ಕೂ ಮುನ್ನವೇ ನೀರು ಶುದ್ಧೀಕರಣ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ನದಿ ನೀರು ಕಲುಷಿತವಾದರೂ ಶುದ್ಧ ಕುಡಿಯುವ ನೀರಿನ ಘಟಕಗಳಿಂದಲಾದರೂ ನೀರು ತಂದು ಕುಡಿಯುತ್ತಿದ್ದ ಜನರಿಗೆ ಆ ನೀರು ಸಿಗದಂತಾಗಿದೆ. ಪುರಸಭೆಯ ನಾಲ್ಕು ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿದ್ದರಿಂದ ಖಾಸಗಿ ಶುದ್ಧ ನೀರಿನ ಘಟಕಗಳಿಗೆ ಭರ್ಜರಿ ವ್ಯಾಪಾರ ನಡೆದಿದೆ. ಖಾಸಗಿ ಶುದ್ಧೀಕರಣ ಘಟಕ ಇಟ್ಟುಕೊಂಡವರು ಮನಸೋ ಇಚ್ಚೆ ದರ ಪಟ್ಟಿ ಸಿದ್ಧಪಡಿಸಿ ಜನಸಾಮಾನ್ಯರಿಗೆ ಮಾರಿಕೊಳ್ಳುತ್ತಿದ್ದಾರೆ. ಮೊದಲೇ ಪ್ರವಾಹದ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ನಾಲ್ಕು ದಿನಗಳಿಂದ ಪುರಸಭೆಯವರು ನೀರು ಸರಬರಾಜುನಿಲ್ಲಿಸಿದ್ದಾರೆ. ಇದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡ ಸ್ಥಗಿತಗೊಳಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
2019ರ ಅಕ್ಟೋಬರ್‌ನಲ್ಲಿ ಪಟ್ಟಣಕ್ಕೆ ಶುದ್ಧ ನೀರು ಪೂರೈಕೆಗಾಗಿ 66.54 ಕೋಟಿ ಅನುದಾನ ಮಂಜೂರಾಗಿದೆ. ಆದರೆ ಟೆಂಡರ್ ಆಗಿಲ್ಲ. ಹೀಗಾಗಿಶುದ್ಧ ನೀರು ಪೂರೈಕೆ ಮಾಡಲಾಗುತ್ತಿಲ್ಲ. ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಮುಗಿದ ಬಳಿಕ ಶುದ್ಧ ನೀರು ಪೂರೈಕೆ ಮಾಡಲಾಗುತ್ತದೆ. – ವಿಜಯಕುಮಾರ ಬಿಲಗುಂದಿ, ಎಇಇ ಕೆಯುಡೂಬ್ಲ್ಯಎಸ್‌ಡಿ ಬೋರ್ಡ್ ಕಲಬುರಗಿ
ಭೀಮಾ ನದಿಯಲ್ಲಿ ಪ್ರವಾಹದ ನೀರುಬಂದಿದ್ದರಿಂದ ಪಟ್ಟಣಕ್ಕೆ ಸರಬರಾಜು ಆಗುವ ಜಾಕ್‌ವಾಲ್ ಮುಳುಗಡೆಯಾಗಿದೆ. ಹೀಗಾಗಿ ನೀರು ಸರಬರಾಜು ಮಾಡಲಾಗುತ್ತಿಲ್ಲ. ಇನ್ನೂ ಮೂರು ದಿನ ಸಮಸ್ಯೆಯಾಗಲಿದೆ. ಸಾರ್ವಜನಿಕರು ಸಹಕರಿಸಬೇಕು.-ಬಾಬುರಾವ ಮುಖ್ಯಾಧಿಕಾರಿ ಪುರಸಭೆ
-ಮಲ್ಲಿಕಾರ್ಜುನ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು
World Rapid Chess: ಕಡೆಗೂ ಅರ್ಜುನ್ ಎರಿಗೈಸಿಗೆ ಅಮೆರಿಕ ವೀಸಾ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.