ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಜಾರಿ
Team Udayavani, Mar 25, 2017, 2:59 PM IST
ಕಲಬುರಗಿ: ಹಲವು ವರ್ಷಗಳಿಂದ ಕಾರ್ಯರೂಪಕ್ಕೆ ಬಾರದೇ ನನೆಗುದಿಗೆ ಬಿದ್ದಿರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಅಧಿನಿಯಮ ಯೋಜನೆ ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು, ಈ ಮೂಲಕ ಐತಿಹಾಸಿಕ ನಿರ್ಧಾರ ತೆಗೆದುಕೊಂಡಂತಾಗಿದೆ ಎಂದು ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಯೋಜನೆ ಜಾರಿ ಮೂಲಕ ಕ್ರಾಂತಿಕಾರಿ ಹೆಜ್ಜೆ ಇಟ್ಟಂತಾಗಿದೆಯಲ್ಲದೇ ಬಾಯಿಲ್ಲದ, ಬಡವರಿಗೆ ಸೂರಿನ ಹಕ್ಕು ಕಲ್ಪಿಸಿದಂತಾಗಿದೆ. ಖಾಸಗಿ ಜಮೀನುಗಳಲ್ಲಿ ನೂರಾರು ವರ್ಷಗಳಿಂದ ವಸತಿ ನಿರ್ಮಿಸಿಕೊಂಡು ವಾಸಿಸುತ್ತಿರುವವರಿಗೆ ಜಾಗದ ಮೇಲಿನ ಹಕ್ಕು ಪಡೆಯದೇ ಅಕ್ರಮ ವಾಸಿಗಳೆಂಬ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದವರಿಗೆ ಈ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಆಶಾಕಿರಣವಾಗುತ್ತದೆ ಎಂದು ವಿವರಣೆ ನೀಡಿದ್ದಾರೆ.
ಊಳುವವನೇ ಹೊಲದೊಡೆಯ ಇರುವವನೆ ಮನೆ ಒಡೆಯ ಎಂಬ ಘೋಷವಾಕ್ಯ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಅಡಿ ಗೇಣಿದಾರರಿಗೆ ಭೂ ಒಡೆತನದ ಹಕ್ಕು ಕೊಡಿಸಿದ್ದು ಇತಿಹಾಸ. ಆದರೆ ಇದೇ ಕಾಯ್ದೆಯಲ್ಲಿ ಕಲ್ಪಿಸಲಾಗಿದ್ದ ಅವಕಾಶವನ್ನು ದುರ್ಬಲ ವರ್ಗಕ್ಕೆ ಸೇರಿದ್ದ ಲಂಬಾಣಿ, ಭೋವಿ, ಗೊಲ್ಲ, ನಾಯಕ, ಕುರುಬ, ಶಿಕಾರಿ ಮುಂತಾದ ಸಮುದಾಯಗಳಿಗೆ ವಾಸಿಸುವ ಮನೆಗಳಿಗೆ ದಾಖಲೆ ಹಾಗೂ ಹಕ್ಕನ್ನು ನೀಡುವ ಕೆಲಸವಾಗಿರಲಿಲ್ಲ.
ಇಂತಹ ಕ್ರಾಂತಿಕಾರಿ ಕಾಯ್ದೆ ಜಾರಿಗೆ ಶ್ರಮಿಸಿದ ಕೆ. ಶಿವಮೂರ್ತಿ ಹಾಗೂ ವಿಧಾನಸಭೆಯಲ್ಲಿ ಅಂಗೀಕಾರಗೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.