ಸೈಬರ್ ಅಪರಾಧ ತಡೆಗೆ ಘಟಕ ಆರಂಭ
Team Udayavani, Feb 17, 2017, 2:56 PM IST
ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗೆ ಹಾಗೂ ತೀವ್ರ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಮತ್ತು ಟೆಕ್ನಿಕಲ್ ಸಪೋರ್ಟ್ ಸೆಲ್ (ಘಟಕ) ಗೆ ಗೃಹ ಖಾತೆ ಸಚಿವ ಡಾ| ಜಿ. ಪರಮೇಶ್ವರ ಚಾಲನೆ ನೀಡಿದರು.
ಪೊಲೀಸ್ ಭವನದಲ್ಲಿ ಉದ್ಘಾಟನೆ ನೆರವೇರಿಸಿ ಘಟಕ್ಕೆ ಚಾಲನೆ ನೀಡಿದ ಸಚಿವರು, ಎಲ್ಲ ಜನ ಮಾಹಿತಿ ತಂತಜ್ಞಾನಕ್ಕೆ ಹೊಂದಿಕೊಳ್ಳುತ್ತಿರುವುದರಿಂದ ಅಪರಾಧ ಚಟುವಟಿಕೆಗಳು ಹೆಚ್ಚಲು ಕಾರಣವಾಗುತ್ತಿದೆ. ಇದಕ್ಕೆ ಪ್ರತ್ಯೇಕ ತಂಡ ಹಾಗೂ ತಂತ್ರಜ್ಞಾನ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಘಟಕ ತನಿಖೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಿದರು.
ಹೊಸ ಘಟಕವು ಫೆಸ್‌ಬುಕ್ ಮಾನಿಟರಿಂಗ್, ಟ್ವಿಟರ್ ಮಾನಿಟರಿಂಗ್, ವ್ಯಾಟ್ಸ್‌ಪ್ ಮಾನಿಟರಿಂಗ್, ಸಿಡಿಆರ್ ಅನಾಲಿಸಿಸ್ ವಿಂಗ್, ಪ್ರಿಂಟ್ ಮಿಡಿಯಾ ಮಾನಿಟರಿಂಗ್, ವೆಬ್‌ಸೈಟ್ ವಾಚಿಂಗ್ ಯುನಿಟಿ ಮತ್ತು ಸೈಬರ್ ಅಫೆನ್ಸೆಸ್ ಡಾಕ್ಯುಮೆಂಟೇಶನ್ ಯುನಿಟ್‌ಗಳನ್ನು ಒಳಗೊಂಡಿರುತ್ತದೆ ಎಂದು ವಿವರಣೆ ನೀಡಿದರು.
ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಎಸ್‌ಪಿ ಶಶಿಕುಮಾರ, ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು. ಸೈಬರ್ ಅಪರಾಧ ತಡೆ ಘಟಕದ ಮೇಲುಸ್ತುವಾರಿಯನ್ನು ಡಿಸಿಆರ್‌ಬಿ ಡಿಎಸ್‌ಪಿ ಎಸ್.ಎಸ್. ಹುಲ್ಲೂರ, ನೋಡಲ್ ಅಧಿಕಾರಿಯಾಗಿ ಡಿಸಿಬಿ ಘಟಕದ ಪೊಲೀಸ್ ಇನ್ಸಪೆಕ್ಟರ್ ಕಪೀಲದೇವ, ಸಹಾಯಕ ನೋಡಲ್ ಅಧಿಕಾರಿಯಾಗಿ ಪಿಎಸ್‌ಐ ವನಂಜಕರ್ ಹಾಗೂ ಇತರ ಸಿಬ್ಬಂದಿಗಳು ಒಳಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.