ಚಟ ತ್ಯಜಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸಿ
Team Udayavani, Nov 15, 2017, 10:14 AM IST
ಕಲಬುರಗಿ: ಪಾಲಕರು ಕಷ್ಟಪಟ್ಟು ಹಾಗೂ ತ್ಯಾಗ ಮಾಡಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ದೊರಕಿಸಿದರೆ ಮುಂದಿನ ಪೀಳಿಗೆ ಬದಲಾವಣೆಗೆ ಕಾರಣರಾಗುವುದರೊಂದಿಗೆ ಮಕ್ಕಳ ಭವಿಷ್ಯ ಉಜ್ವಲವಾಗುವುದು ಎಂದು ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ ತಿಳಿಸಿದರು.
ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳುವ ಸಿರಿ ಕಾರ್ಯಕ್ರಮದ ನೇರ ಫೋನ್-ಇನ್ ಮಾತನಾಡಿದ
ಅವರು, ಬಡತನದ ಸಂಕಷ್ಟ ಎದುರಿಸುವ ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡದೇ ಕಷ್ಟಪಡಬೇಕು. ವಿವಿಧ ಚಟಗಳಿಗೆ ಬಲಿಯಾಗಿರುವ ಪಾಲಕರು ತಮ್ಮ ಚಟಗಳನ್ನು ತ್ಯಾಗ ಮಾಡಿ ಮಕ್ಕಳ ಬೆಳವಣಿಗೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದರು.
ಬದುಕು ಕಟ್ಟಿಕೊಳ್ಳುವುದು ಅಷ್ಟೊಂದು ಸುಲಭವಾಗಿಲ್ಲ. ಯುವಕರು ಒಳ್ಳೆಯ ದಾರಿಯಲ್ಲಿ ನಡೆದು ಸುಂದರ ಬದುಕು
ಕಟ್ಟಿಕೊಳ್ಳಲು ಹೋರಾಟ ಮಾಡಲು ಹಾಗೂ ಮಾನಸಿಕವಾಗಿ ಗಟ್ಟಿಯಾಗಬೇಕು. ಮೊಬೈಲ್ ಮತ್ತು ಟಿ.ವಿ. ಸಂಸ್ಕಾರದಿಂದ ಶಿಕ್ಷಣ ಮತ್ತು ಸಾಮಾಜಿಕ ವ್ಯವಸ್ಥೆ ಹಾಳಾಗುತ್ತಿದೆ. ಮಕ್ಕಳು ಇವುಗಳಿಂದ ದೂರವಿರಬೇಕು. ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಬಾಲ್ಯವಿವಾಹಗಳನ್ನು ತಪ್ಪಿಸಬೇಕು ಎಂದರು.
ಹಬ್ಬ-ಹರಿದಿನಗಳನ್ನು ಆಚರಿಸುವಾಗ ತಮ್ಮ ತಮ್ಮ ಧರ್ಮದ ದಬ್ಟಾಳಿಕೆ ಮಾಡುವುದು ಸಮಾಜದ ಬೆಳವಣಿಗೆಗೆ
ಮಾರಕವಾಗಿದೆ. ಜಾತಿ, ಧರ್ಮದ ವಿಷಬೀಜ ಮಕ್ಕಳಲ್ಲಿ ಬೆಳೆಯದಂತೆ ಪಾಲಕರು ಹಾಗೂ ಶಿಕ್ಷಕರು ಮುಂಜಾಗೃತೆ
ವಹಿಸಬೇಕು. ವಿದ್ಯಾರ್ಥಿಗಳು ಸಂಘಟನೆ ಮಾಡಿಕೊಂಡು ಜಾತಿ, ಅಸ್ಪೃಶ್ಯತೆ ನಿವಾರಣೆಗೆ ಮುಂದಾಗಬೇಕು. ಮನುಷ್ಯನಿಗೆ ಮನುಷ್ಯ ಪ್ರೀತಿ ಮಾಡಲು ಮನುಷ್ಯ ಜಾತಿ ತಾನೊಂದೇ ವಲಂ ಎಂಬ ಮನೋಭಾವ ಬೆಳೆಸುವುದು ಅಗತ್ಯವಾಗಿದೆ ಎಂದರು.
ಬಾಲ್ಯಾವಸ್ಥೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಓದಿನ ಜೊತೆಗೆ ಆಟ-ಪಾಠಗಳು ಮುಖ್ಯವಾಗಿವೆ ಎಂದರಲ್ಲದೇ, ತಮ್ಮ ಬಾಲ್ಯಾವಸ್ಥೆಯನ್ನು ಮೆಲಕು ಹಾಕಿಕೊಂಡ ಅಲೋಕಕುಮಾರ ತಮ್ಮ ತಂದೆ-ತಾಯಿ ಶಿಕ್ಷಕರಿದ್ದು, ಸ್ವಾತಂತ್ರ್ಯ ಸಂಗ್ರಾಮದ ಆ ದಿನಗಳಲ್ಲಿ ನನಗೆ ಸ್ವಾತಂತ್ರ್ಯ ಸಂಗ್ರಾಮ ಮತ್ತು ಸುಭಾಶ್ಚಂದ್ರ ಬೋಸ್‌ರ ಬಗ್ಗೆ ತಿಳಿಸುತ್ತಿದ್ದರು. ಇದರಿಂದ ಸ್ಫೂರ್ತಿ ದೊರೆತು ಸಮಾಜ ಸೇವೆ ಮಾಡಬೇಕೆಂಬ ಆಲೋಚನೆ ಬಂದು ಐ.ಪಿ.ಎಸ್. ಹುದ್ದೆಗೆ ಸೇರ್ಪಡೆಯಾಗಲು ಅನುಕೂಲವಾಯಿತು ಎಂದರು.
ಗುಲಬರ್ಗಾ ಆಕಾಶವಾಣಿ ಕೇಂದ್ರದ ನಿಲಯ ನಿರ್ದೇಶಕಿ ಅಂಜನಾ ಯಾತನೂರ ನೇರ ಫೋನ್ ಇನ್ ಕಾರ್ಯಕ್ರಮ ನಡೆಸಿಕೊಟ್ಟರು. ಜೇವರ್ಗಿ, ಕೋತನಹಿಪ್ಪರಗಾ, ಖಣದಾಳ, ಚೌಡಾಪುರ, ಬೀರಾಳ(ಬಿ) ಊಡಗಿ, ತಾಜ್ ಸುಲ್ತಾನಪುರ, ಊದನೂರ, ಪ್ರೌಢ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ತೊಡಿ ಕೊಂಡರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಹಾಜರಿದ್ದರು
ಎಲ್ಲರ ಮನೆಯಲ್ಲೂ ಶೌಚಾಲಯ ನಿರ್ಮಿಸಿಕೊಳ್ಳಿ ಪಾಲಕರು ಮಕ್ಕಳಿಗೆ ಪ್ರೋತ್ಸಾಹ ನೀಡಿ ಅವರ ಇಚ್ಛೆಯ ಕ್ಷೇತ್ರದಲ್ಲಿ
ಬೆಳೆಯಲು ಅನುಕೂಲವಾಗುವ ಹಾಗೆಯೇ ವಾತಾವರಣ ನಿರ್ಮಿಸಿಕೊಡಬೇಕು. ಎಲ್ಲ ಶಾಲಾ ಮಕ್ಕಳು ಕಡ್ಡಾಯವಾಗಿ
ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು. ಶಾಲೆಯಲ್ಲಿರುವ ಎಲ್ಲ ಮಕ್ಕಳು ಶೌಚಾಲಯ ನಿರ್ಮಿಸಿಕೊಂಡಲ್ಲಿ ಅಂತಹ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.
ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಪಂ ಸಿಇಒ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.