ಕಾನೂನು ಆಯೋಗ ವರದಿ ಜಾರಿಗೆ ಖಂಡನೆ
Team Udayavani, Apr 22, 2017, 3:04 PM IST
ಕಲಬುರಗಿ: ಭಾರತ ಕಾನೂನು ಆಯೋಗದ ವರದಿಯನ್ನು ಖಂಡಿಸಿ ಹಾಗೂ ತಿದ್ದುಪಡಿಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಶಿಫಾರಸು ಪತ್ರ ಸುಟ್ಟು ಹಾಕಿ ಪ್ರತಿಭಟಿಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ವಕೀಲರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಹಾಗೂ ವಕೀಲರ ವೃತ್ತಿಗೆ ಸಂಬಂಧವಿಲ್ಲದವರಿಗೆ ವಕೀಲರ ಸಂಘಕ್ಕೆ ಸದಸ್ಯರಾಗಲು ಅವಕಾಶ ಕೊಟ್ಟಿರುವ ಕಾನೂನು ಆಯೋಗದ ವರದಿಯ ಶಿಫಾರಸುಗಳನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಆಯೋಗದ ವರದಿಯನ್ನು ಅಂಗೀಕರಿಸಬಾರದು. ಕೂಡಲೇ ಆಯೋಗದ ಅಧ್ಯಕ್ಷ ಬಿ.ಎಸ್.ಚೌವ್ಹಾಣ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪರಿಷತ್ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹುಡೇದ್, ವಿನೋದ ಜನೆವರಿ ಹಾಗೂ ವಕೀಲರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.