ಕನ್ನಡ ಹೋರಾಟಗಾರರು ಸೇನಾನಿಗಳಾಗಲಿ
Team Udayavani, Sep 1, 2022, 3:40 PM IST
ಯಡ್ರಾಮಿ: ನಾಡು-ನುಡಿ, ಭಾಷೆ-ಗಡಿ ರಕ್ಷಣೆಗೆ ಕಂಕಣ ಬದ್ಧರಾಗ ಬಯಸುವ ಯುವ ಕಾರ್ಯಕರ್ತರು ಜಾತಿ, ಧರ್ಮಗಳ ವಾಸನೆ ಸುಳಿಯದಂತೆ ಸೇನಾನಿಗಳಾಗಿ ಕಾರ್ಯನಿರ್ವ ಹಿಸಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂತೋಷ ನವಲಗುಂದ ಹೇಳಿದರು.
ತಾಲೂಕಿನ ಮಳ್ಳಿ ಗ್ರಾಮದಲ್ಲಿ ನೂತನವಾಗಿ ರಚನೆಯಾದ ಜೈ ಕರ್ನಾಟಕ ಸಂಘಟನೆ ಗ್ರಾಮ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೈ ಕರ್ನಾಟಕ ಸಂಘಟನೆಯಿಂದ ವಿಶೇಷ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಸಂಘಗಳು ಕಟ್ಟುವುದು ಕೇವಲ ಶಕ್ತಿ ಪ್ರದರ್ಶನಕ್ಕಲ್ಲ. ಸಂಘದ ಮೂಲ ಉದ್ದೇಶಗಳನ್ನು ಈಡೇರಿಸುವತ್ತ ಪ್ರತಿ ಕಾರ್ಯಕರ್ತರು ನಿರಂತರ ಜಾಗೃತಿ ವಹಿಸಬೇಕು ಎಂದರು.
ಗ್ರಾಮದ ಮುಖಂಡ ಗೊಲ್ಲಾಳಪ್ಪಗೌಡ ಪೊಲೀಸ್‌ಪಾಟೀಲ, ಸಂತೋಷ ಯಾದಗಿರಿ, ಗ್ರಾಪಂ ಉಪಾಧ್ಯಕ್ಷ ಬಸನಗೌಡ ಮಾಲಿಪಾಟೀಲ ಸಸಿ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖಂಡರಾದ ಮಲರೆಡ್ಡಿ ಕೊಂಗಂಡಿ, ರಮೇಶ ಸಾಹು ಸೂಗೂರ, ಶಿವನಗೌಡ ಪೊಲೀಸ್‌ಪಾಟೀಲ, ರಾಮನಗೌಡ ಪೊಲೀಸ್‌ಪಾಟೀಲ, ಡಾ|ಜಾಫರ್ ಗುಡ್ನಾಳ, ಜೈ ಕರ್ನಾಟಕ ತಾಲೂಕು ಅಧ್ಯಕ್ಷ ಅಮರನಾಥ ಕುಳಗೇರಿ, ಗ್ರಾಮ ಘಟಕದ ಅಧ್ಯಕ್ಷ ಸಿದ್ಧನಗೌಡ ಪೊಲೀಸ್‌ಪಾಟೀಲ, ನಿಂಗನಗೌಡ ಲಕ್ಕೊಂಡ, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಮೋಫೆಪ್ಪ ದೇವರಮನಿ ಹಾಗೂ ಗ್ರಾಪಂ ಸದಸ್ಯರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.