ಪಾಲಿಕೆ ಹೆಚ್ಚಿಸಿದ ತೆರಿಗೆ ವಾಪಸ್‌ ಪಡೆಯಲಿ


Team Udayavani, Mar 31, 2022, 9:56 AM IST

1tax

ಕಲಬುರಗಿ: ಮಹಾನಗರ ಪಾಲಿಕೆಯು ಕಳೆದ ವರ್ಷವೇ ಅವೈಜ್ಞಾನಿಕವಾಗಿ ಶೇ. 15ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದು ತಪ್ಪು ಎಂಬುದಾಗಿ ಹೋರಾಟ ಮಾಡಿದ ಪರಿಣಾಮ ಶೇ. 10ರಷ್ಟು ಕಡಿಮೆ ಮಾಡಿ, ಶೇ. 5ರಷ್ಟು ಆಸ್ತಿ ತೆರಿಗೆ ಜಾರಿಗೆ ತರಲಾಗಿತ್ತು. ಆದರೀಗ ಮತ್ತೆ 2022-23ನೇ ಸಾಲಿಗಾಗಿ ಶೇ. 4ರಷ್ಟು ಆಸ್ತಿ ತೆರಿಗೆ ಹೆಚ್ಚಿಸಿರುವುದನ್ನು ವಾಪಸ್ಸು ಪಡೆಯುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಆಗ್ರಹಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮಾಡಿದ್ದ ರಿಂದ ವ್ಯಾಪಾರ ವಹಿವಾಟು ಸಂಪೂರ್ಣ ನಷ್ಟದಲ್ಲಿದೆ. ಕಳೆದ ವರ್ಷ ಶೇ. 5ರಷ್ಟು ತೆರಿಗೆ ಹೆಚ್ಚಿಸಿರುವುದೇ ತೆರಿಗೆದಾರರಿಗೆ ಹೊರೆಯಾಗಿದೆ. ಅಂತಹುದ್ದರಲ್ಲಿ ಗಾಯದ ಮೇಲೆ ಬರೆ ಎಳೆದಿರುವುಂತೆ ಮತ್ತೆ ಶೇ. 4ರಷ್ಟು ಆಸ್ತಿ ತೆರಿಗೆಯನ್ನು ಪಾಲಿಕೆ ಹೆಚ್ಚಿಸಿರುವುದರಿಂದ ಇಡೀ ವಾಣಿಜ್ಯ ಉದ್ಯಮಕ್ಕೆ ಹೊಡೆತ ಬೀಳುತ್ತದೆ. ಆದ್ದರಿಂದ ಪಾಲಿಕೆ ಈಗಲಾದರೂ ಎಚ್ಚೆತ್ತು ತೆರಿಗೆ ಹೆಚ್ಚಳ ಕೈ ಬಿಡಬೇಕೆಂದು ಎಚ್‌ಕೆಇಸಿಸಿಐ ಅಧ್ಯಕ್ಷ ಪ್ರಶಾಂತ ಎಸ್‌. ಮಾನಕರ್‌, ಗೌರವ ಕಾರ್ಯದರ್ಶಿ ಶರಣು ಪಪ್ಪಾ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಪೌರಾಡಳಿತ ನಿರ್ದೇಶನಾಲಯವೇ ಆಸ್ತಿ ತೆರಿಗೆ ಶೇ. 3ರಿಂದ ಶೇ. 5ರಷ್ಟು ಮಿತಿಯೊಳಗೆ ಇರಬೇಕೆಂದು ನಿರ್ದೇಶನ ಇರುವಾಗಲೂ ಪಾಲಿಕೆ ಆಡಳಿತಾಧಿಕಾರಿಗಳು ಶೇ. 15 ಆಸ್ತಿ ತೆರಿಗೆ ಹೆಚ್ಚಿಸಿ ಅಧಿಸೂಚನೆ ಹೊರಡಿಸಿದ್ದರು. ಇದರ ವಿರುದ್ಧ ಹೋರಾಡಿ, ಸರ್ಕಾರದ ಗಮನಕ್ಕೆ ತಂದ ನಂತರ ಶೇ. 10ರಷ್ಟು ಇಳಿಕೆ ಮಾಡಲಾಗಿತ್ತು. ಶೇ. 5ರಷ್ಟು ಆಸ್ತಿ ತೆರಿಗೆಯೇ ತುಂಬಲು ಉದ್ಯಮಿದಾರರು ಹೆಣಗಾಡುತ್ತಿರುವಾಗ ಮತ್ತೆ ಪ್ರಸಕ್ತ ವರ್ಷಕ್ಕಾಗಿ ಶೇ. 4ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಿ ಪಾಲಿಕೆ ಆಡಳಿತಾಧಿಕಾರಿ, ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪ್ರಮುಖವಾಗಿ ಸಬ್‌ ರಜಿಷ್ಟಾರ್‌ ದಲ್ಲಿ ಆಸ್ತಿ ಮೌಲ್ಯದ ಮೇಲಿನ ತೆರಿಗೆ ಹೆಚ್ಚಳವಾಗಿಲ್ಲ. ಅಂತಹುದ್ದರಲ್ಲಿ ಶೇ. 4ರಷ್ಟು ಆಸ್ತಿ ತೆರಿಗೆ ಸಮಂಜಸವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಮುಖವಾಗಿ ಶೇ. 15ರಷ್ಟು ಆಸ್ತಿ ತೆರಿಗೆ ಮಾರ್ಪಡಿಸಿ ಶೇ. 3ರಿಂದ ಶೇ. 5 ಒಳಗಾಗಿ ಆಸ್ತಿ ತೆರಿಗೆ ನಿಗದಿಪಡಿಸಿ ಮಾರ್ಪಡಿಸಿದ ಆದೇಶವನ್ನು ಹೊರಡಿಸಿಲ್ಲ. ಹೀಗಾಗಿ 2022-23ನೇ ಸಾಲಿಗೆ ಆಸ್ತಿ ತೆರಿಗೆಯನ್ನು ಕಾನೂನು ಬಾಹಿರವಾಗಿ ಶೇ. 15ರಷ್ಟು ಹೆಚ್ಚಿಸಿದ ದರದಂತೆ ಪಾಲಿಕೆಯವರು ಸಂಗ್ರಹಿಸಬಹುದೆಂಬ ಆತಂಕ ಕಾಡುತ್ತಿದೆ. ಒಟ್ಟಾರೆ ಇದನ್ನೆಲ್ಲ ಪಾಲಿಕೆ ಖಚಿತಪಡಿಸಬೇಕು. ಆಸ್ತಿ ತೆರಿಗೆ ನಿಗದಿಪಡಿಸುವಾಗ ಪರಿಗಣಿಸಲಾಗುವ ಆಸ್ತಿ ಮಾರ್ಗದರ್ಶಿ ಮೌಲ್ಯವನ್ನು ಕೈ ಬಿಡಬೇಕೆಂದು ಆಗ್ರಹಿಸಿದರು. ಎಚ್‌ಕೆಸಿಸಿಐ ಪದಾಧಿಕಾರಿಗಳಾದ ರಾಮಚಂದ್ರ ಕೋಸಗಿ, ಸಂಗಮೇಶ ಕಲ್ಯಾಣಿ ಇದ್ದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಬರಬೇಕಿದ್ದ ಒಂದೊಂದು ಯೋಜನೆಗಳನ್ನು ಬೇರೆಡೆ ಕಿತ್ತುಕೊಂಡು ಹೋಗಲಾಗಿದೆ. ಈಗ ಯಾವದೇ ಕಾರಣಕ್ಕೂ ಮೆಗಾ ಟೆಕ್ಸ್‌ಟೈಲ್‌ ಪಾರ್ಕ್‌ ಕಲಬುರಗಿ ಬಿಟ್ಟು ಹೋಗಬಾರದು. ಎರಡು ದಿನಗಳ ಹಿಂದೆ ನವದೆಹಲಿಗೆ ಹೋಗಿ ಎಚ್‌ಕೆಸಿಸಿಐಯಿಂದ ಕಲಬುರಗಿಯಲ್ಲೇ ಮೆಗಾ ಟೆಕ್ಸ್‌ಟೈಲ್‌ ಆಗಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಅವರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಈ ಭಾಗದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಒತ್ತಡ ಹೇರಬೇಕು. ಮತ್ತೆ ಎರಡ್ಮೂರು ತಿಂಗಳ ನಂತರ ನವದೆಹಲಿಗೆ ನಿಯೋಗ ತೆರಳಿ ಮನವಿ ಮಾಡಲಾಗುವುದು. -ಪ್ರಶಾಂತ ಮಾನಕರ್‌, ಅಧ್ಯಕ್ಷ, ಎಚ್‌ಕೆಇಸಿಸಿಐ

ಕೊರೊನಾದ ಲಾಕ್‌ಡೌನ್‌ ಸಂದರ್ಭದಲ್ಲಿ ವ್ಯಾಪಾರಸ್ಥರ ಮೇಲೆ ಇಡೀ ರಾಜ್ಯದಲ್ಲೇ ಅತಿ ಹೆಚ್ಚಿನ ಅಂದರೆ 374 ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳನ್ನು ವಾಪಸ್ಸು ಪಡೆಯುವಂತೆ ಸರ್ಕಾರಕ್ಕೆ ಹಲವು ಸಲ ಮನವಿ ಸಲ್ಲಿಸಿದ್ದರೂ ಪರಿಹಾರವೇ ಸಿಕ್ಕಿಲ್ಲ. ಕಲ್ಯಾಣ ಕರ್ನಾಟಕ ಭಾಗ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. -ಶರಣು ಪಪ್ಪಾ, ಗೌರವ ಕಾರ್ಯದರ್ಶಿ, ಎಚ್‌ಕೆಸಿಸಿಐ

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.