ಯೋಜನೆ ಲಾಭ ಫಲಾನುಭವಿಗಳಿಗೆ ಸಿಗಲಿ
Team Udayavani, Jun 19, 2022, 9:47 AM IST
ಅಫಜಲಪುರ: ಯಾವುದೇ ಪಕ್ಷದ ಸರ್ಕಾರಗಳಿದ್ದರೂ ಕೂಡ ಅವುಗಳು ಜನಕಲ್ಯಾಣಕ್ಕಾಗಿ ರೂಪಿಸುವ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಿಗುವಂತಾಗಬೇಕು ಎಂದು ಶಾಸಕ ಎಂ.ವೈ. ಪಾಟೀಲ್ ಹೇಳಿದರು.
ತಾಲೂಕಿನ ಬಳೂರ್ಗಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ತಮ್ಮ ಕೆಲಸಗಳಿಗಾಗಿ ನಿತ್ಯ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ತಿರುಗಾಡಿ ಸುಸ್ತಾಗುತ್ತಾರೆ. ಅನೇಕ ಸಲ ಸರ್ಕಾರಿ ಕೆಲಸಗಳಾಗದೆ ಬೇಸತ್ತು ಹೋಗುತ್ತಾರೆ. ಅಂತವರಿಗೆಲ್ಲ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದರು.
ಸರ್ಕಾರದ ಯೋಜನೆಗಳು ಸಫಲವಾಗಲು ಮತ್ತು ಅರ್ಹ ಫಲಾನುಭವಿಗಳಿಗೆ ತಲುಪಲು ಇಂತಹ ಕಾರ್ಯಕ್ರಮಗಳ ಅವಶ್ಯವಿದೆ. ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಜಿಲ್ಲಾಡಳಿತವನ್ನೇ ಜನರ ಮನೆ ಬಾಗಿಲಿಗೆ ಕಳುಹಿಸುತ್ತಿರುವುದು ಒಳ್ಳೆಯದು. ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರ ಪಠ್ಯಪುಸ್ತಕದ ಗೊಂದಲ ಸೃಷ್ಟಿಸುವ ಬದಲಾಗಿ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಿ ಮಕ್ಕಳಿಗೆ ಉತ್ತಮ ಪಠ್ಯ ನೀಡಬೇಕೆಂದು ಸಲಹೆ ನೀಡಿದರು.
ತಹಶೀಲ್ದಾರ್ ಸಂಜೀವಕುಮಾರ ದಾಸರ್ ಮಾತನಾಡಿ, ಪ್ರತಿ ತಿಂಗಳ ಮೂರನೇ ಶನಿವಾರ ಸರ್ಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಯೋಜನೆ ಇದಾಗಿದೆ. ಜೂನ್ 21ರಂದು ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ಬಂದು ಜನಸಾಮಾನ್ಯರ ಸಮಸ್ಯೆ ಆಲಿಸಲಿದ್ದಾರೆ. ಹೀಗಾಗಿ ಏನಾದರೂ ಸರ್ಕಾರದ ಮಟ್ಟದ ಸಮಸ್ಯೆಗಳಿದ್ದರೆ ಸಾರ್ವಜನಿಕರು ಸರಿಪಡಿಸಿಕೊಳ್ಳಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಭಾಗ್ಯಲಕ್ಷ್ಮೀ ಬಾಂಡ್, ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್, ಕಂದಾಯ ಇಲಾಖೆಯ ಪಹಣಿ ತಿದ್ದುಪಡಿ, ಸ್ತ್ರೀಶಕ್ತಿ ಸಂಘಗಳಿಗೆ ಅಮೃತ ಯೋಜನೆ ಅಡಿಯಲ್ಲಿ 51 ಸಂಘಗಳಿಗೆ 1 ಲಕ್ಷ ರೂಪಾಯಿ ಸಹಾಯಧನ ಚೆಕ್ ವಿತರಣೆ ಮಾಡಲಾಯಿತು. ಗ್ರಾಪಂ ಅಧ್ಯಕ್ಷೆ ಮುಕ್ತಾಬಾಯಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಅಧಿ ಕಾರಿಗಳಾದ ಮೀನಾಕ್ಷಮ್ಮ ಪಾಟೀಲ್, ಸುರೇಂಧ್ರನಾಥ, ಎಸ್.ಎಚ್. ಗಡಿಗಿಮನಿ, ಡಾ| ರತ್ನಾಕರ ತೋರಣ, ಸಿದ್ದರಾಮ ಅಜಗೊಂಡ, ರಮೇಶ ಪಾಟೀಲ್, ಚೇತನ ಗುರಿಕಾರ, ಮಲ್ಲಿಕಾರ್ಜುನ ಹಿಟ್ನಳ್ಳಿ, ಮಹಾಂತೇಶ ಬಡದಾಳ, ಮನೋಹರ ರಾಠೊಡ, ಫಲಾಲಸಿಂಗ್ ರಾಠೊಡ, ಶಿವಾನಂದ ಗಾಡಿ, ಅರವಿಂದ ದೊಡ್ಮನಿ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.