ಸಣ್ಣ ಸಮುದಾಯ ಅಧಿಕಾರಕ್ಕೆ ಬರಲಿ
Team Udayavani, Sep 5, 2017, 10:14 AM IST
ಕಲಬುರಗಿ: ಸಣ್ಣ ಮತ್ತು ಅತಿ ಸಣ್ಣ ಸಮುದಾಯಗಳಲ್ಲಿನ ಯುವಕರು ಹಾಗೂ ಮುಖಂಡರು ತುಂಬಾ ಎಚ್ಚರಿಕೆಯಿಂದ
ನಡೆದುಕೊಂಡು ರಾಜಕೀಯ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬೆಳೆದಾಗ ಮಾತ್ರವೇ ಈ ಸಮುದಾಯಗಳ ಕಲ್ಯಾಣ ಸಾಧ್ಯ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ.ಜಾಮದಾರ ಹೇಳಿದರು.
ನಗರದ ಹಿಂದಿಪ್ರಚಾರ ಸಭೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಸಣ್ಣ ಹಾಗೂ ಅತಿ ಸಣ್ಣ ಸಮುದಾಯಗಳ ಒಕ್ಕೂಟ
ಹಮ್ಮಿಕೊಂಡಿದ್ದ ಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ಸಣ್ಣ ಮತ್ತು ಅತಿಸಣ್ಣ ಸಮುದಾಯಗಳು ರಾಜಕೀಯ ಮೀಸಲಾತಿ ಅಧಿಕಾರ ಪಡೆಯಲು ಒಂದಾಗುವುದು ಅಗತ್ಯ. ಇಲ್ಲದೆ ಹೋದರೆ ಈ ಸಮುದಾಗಳು ನಿರೀಕ್ಷೆ ಮತ್ತು ಸಾಮಾಜಿಕ ನ್ಯಾಯ ಪಡೆಯಲು ಸಾಧ್ಯವಾಗುವುದಿಲ್ಲ. ಈ ಸಮುದಾಯಗಳ ಮುಖಂಡರನ್ನು ಕೆಲವು ರಾಜಕೀಯ ತಂತ್ರಗಾರಿಕೆಗೆ ಸಿಲುಕಿಸಿ ಅಧಿಕಾರದಿಂದ ದೂರ ಇರುವಂತೆ ಮಾಡಲಾಗುತ್ತಿದೆ. ಇಂತಹ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಂಡು ಒಂದೇ ವಲಯದ ಜನರನ್ನು ಗುರುತಿಸಿಕೊಂಡು ಸಂಘಟನಾತ್ಮಕವಾಗಿ ಮುನ್ನಡೆಯುವುದನ್ನು ರೂಢಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಎಚ್ಚರಿಸಿದರು.
ಒಕ್ಕೂಟದ ರಾಜ್ಯಧ್ಯಕ್ಷ ಸಾಯಿಬಣ್ಣ ಎಂ. ಮಡಿವಾಳ ಮಾತನಾಡಿ, ರಾಜ್ಯದಲ್ಲಿ ಹಿಂದುಳಿದ ಸಣ್ಣ ಮತ್ತು ಅತಿಸಣ್ಣ
ಸಮುದಾಯ ಜನರು ಶೇ. 69ರಷ್ಟು ಇದ್ದಾರೆ. ಶಾಲಾ ಕಾಲೇಜುಗಳ ಮಕ್ಕಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಆದ್ಯತೆ ಹಾಗೂ ಸರಕಾರದ ವಿವಿಧ ಯೋಜನೆ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವ ನಿಟ್ಟಿನಲ್ಲಿ ಈ ಒಕ್ಕೂಟ ಸೇವೆ ನೀಡುತ್ತಿದೆ.
ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯಪ್ರಾತಿನಿಧ್ಯ ಪಡೆಯಲು ಎಲ್ಲ ಪಕ್ಷಗಳಿಗೆ ಒತ್ತಡ ಹಾಕಲಾಗುವುದು. ಮುಂಬರುವ ಚುನಾವಣೆಗಳಲ್ಲಿ ಈ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಸ್ಥಾನಮಾನ, ನಿಗಮ ಮಂಡಳಿಗಳಿಗೆ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳ
ಆಯ್ಕೆ ಪಟ್ಟಿ ತಯಾರಿಸುವಂತೆ ರಾಜ್ಯಾದ್ಯಂತ ರಾಜ್ಯಮಟ್ಟದಲ್ಲಿ ಹೋರಾಟ ಆಯೋಜಿಸಲಾಗುವುದು ಎಂದು
ಹೇಳಿದರು.
ಅಶೋಕ ಗುರುಜಿ, ಡಾ| ಜಯಣ್ಣ, ಪ್ರೊ| ಸಂಜಯ ಮಾಕಲ, ಜಿಲ್ಲಾ ಪ್ರಧಾನಕಾರ್ಯದರ್ಶಿ ರವಿ ಬಡಿಗೇರ, ರಾಜ್ಯ
ಸಂಚಾಲನ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಶಾಮಲಾ ಮಂದೆವಾಲ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರಧಾನ ಕಾರ್ಯದರ್ಶಿಗಳಾದ ಭೀಮಾಶಂಕರ ಮಡಿವಾಳ ಆಳಂದ, ವೆಂಕಟೇಶ ದೊರೆಪಲ್ಲಿ, ಒಕ್ಕೂಟದ ಉಪಾಧ್ಯಕ್ಷ ಬಸವರಾಜ ಬಾಗೆವಾಡಿ, ಬಸವರಾಜ ವಂಟಗೊಡಿ, ಸಹ ಪ್ರಧಾನಕಾರ್ಯದರ್ಶಿ ಅಶೋಕ ಆರ್. ಹೂಗಾರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.