ಹಸಿರು ಪಟಾಕಿಗೂ ಸಮಯದ ಲಗಾಮು

ರಾತ್ರಿ 8ರಿಂದ 10 ಗಂಟೆಯೊಳಗೆ ಸಿಡಿಸಲು ಅವಕಾಶ

Team Udayavani, Nov 12, 2020, 3:03 PM IST

gb-tdy-1

ಕಲಬುರಗಿ: ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹಸಿರು ಪಟಾಕಿ ಮಳಿಗೆಗಳ ಸ್ಥಾಪನೆ ಸಿದ್ಧತಾ ಕಾರ್ಯ ನಡೆದಿದೆ.

ಕಲಬುರಗಿ: ಬಹುದೊಡ್ಡ ದೀಪಾವಳಿ ಹಬ್ಬಕ್ಕೂ ಕೋವಿಡ್ ಕರಿಛಾಯೆ ಬಿಡದೆ ಕಾಡುತ್ತಿದೆ. ಪಾಸಿಟಿವ್‌ ಪ್ರಕರಣಗಳಲ್ಲಿ ಕುಸಿತಗೊಂಡಿದ್ದರೂ ಕೆಟ್ಟ ವಾತಾವರಣದಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಉಲ್ಬಣಿಸುವ ಹಿನ್ನೆಲೆಯಲ್ಲಿ ಪರಿಸರ ಮಾರಕಪಟಾಕಿಗೆ ಸರ್ಕಾರ ನಿಷೇಧ ಹೇರಿದೆ. ಹಸಿರು ಪಟಾಕಿಗೆ ಮಾತ್ರ ಹಸಿರು ನಿಶಾನೆ ತೋರಿದೆ. ಆದರೆ, ಇದಕ್ಕೂ ಸಮಯದ ಲಗಾಮು ಹಾಕಿದೆ.

ಲಾಕ್‌ಡೌನ್‌ನಿಂದ ವ್ಯಾಪಾರಿಗಳಕೈಸುಟ್ಟುಕೊಂಡಿದ್ದು, ದೀಪಾವಳಿ ಹಬ್ಬ ಬಂತೆಂದು ಪ್ರತಿ ವರ್ಷದಂತೆ ಮಳಿಗೆ ತೆರೆದು ಮಾರಾಟಕ್ಕೆ ಸಿದ್ಧತೆ ನಡೆಸಿದ್ದರು.ಶಿವಕಾಶಿಯಿಂದ ಪಟಾಕಿಗಳನ್ನು ತರಿಸಲು ಮುಂಗಡ ಹಣ ಪಾವತಿಸಿದ್ದರು. ಈಗಾಗಲೇ ಕೆಲವರ ಪಟಾಕಿಗಳ ಲೋಡ್‌ಗಳು ನಗರಕ್ಕೆಆಗಮಿಸಿವೆ. ಇದರ ನಡುವೆ ನ.6ರಂದುಮುಖ್ಯಮಂತ್ರಿ ಯಡಿಯೂರಪ್ಪ ಈ ಬಾರಿ ದೀಪಾವಳಿಗೆ ಹಸಿರು ಪಟಾಕಿ ಮಾತ್ರವೇಮಾರಾಟಕ್ಕೆ ಮತ್ತು ಸಿಡಿಸಲು ಅನುಮತಿ ನೀಡಲಾಗುವುದು ಎಂದು ದಿಢೀರನೆ ಪ್ರಕಟಿಸಿದರು. ಇದರಿಂದ ವ್ಯಾಪಾರಸ್ಥರು ಕೊಂಚ ಚಿಂತಿತರಾದರೂ ಹಸಿರು ಪಟಾಕಿ ಮಾರಾಟಕ್ಕೆ ಸಜ್ಜಾಗಿದ್ದಾರೆ.

ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆದು 34 ಪಟಾಕಿ ಮಳಿಗೆ ಹಾಕಲಾಗಿದೆ. ನೆಲ ಸಮದಟ್ಟು ಮಾಡಿ ಲೈಟಿಂಗ್‌ ಸೇರಿಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲದೇ, ಈ ಬಾರಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮಳಿಗೆಗಳ ನಡುವೆಯೂ “ಅಂತರ’ ಬಿಡಲಾಗಿದೆ.

ಪಟಾಕಿ ಮಾರಾಟ ಮೈದಾನ ಸಿದ್ಧತೆಗಾಗಿಯೇ 20 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಮಳಿಗೆಯವರಿಂದ ತಲಾ 50 ಸಾವಿರ ರೂ. ಸಂಗ್ರಹಿಸಿ ಪಟಾಕಿ ಮಾರಾಟಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮೇಲಾಗಿ ಮಳಿಗೆ ಸ್ಥಾಪನೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಜತೆಗೆ ನಿಯಮದಂತೆ ಅಗ್ನಿಶಾಮಕ, ಪಾಲಿಕೆ, ಇಂಧನ, ಲೋಕೋಪಯೋಗಿ ಸೇರಿದಂತೆ ಎಲ್ಲ ಇಲಾಖೆಗಳಿಂದ ನಿರಾಕ್ಷೇಪಣ ಪ್ರಮಾಣ ಪತ್ರ ಪಡೆದುಕೊಳ್ಳಲಾಗಿದೆ ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳಲ್ಲೊಬ್ಬರಾದ ವೀರೆಂದ್ರ ಕಡಾಳೆ.

ಪಟಾಕಿ ಸಿಡಿಸಲು ಎರಡೇ ಗಂಟೆ: ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಸಿಡಿಸಲು ಅನುಮತಿ ಕಲ್ಪಿಸಲಾಗಿದೆ. ಆದರೂ, ಹಸಿರು ಪಟಾಕಿ ಹಚ್ಚುವ ಮತ್ತು ಸಿಡಿಸುವ ಸಮಯವನ್ನು ಕೇವಲ ಎರಡು ಗಂಟೆ ಮಾತ್ರ ನೀಡಲಾಗಿದೆ. ರಾತ್ರಿ 8ರಿಂದ 10 ಗಂಟೆಯೊಳಗೆ ಮಾತ್ರ ಸಿಡಿಸಲು ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ದೀಪಾವಳಿ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಮಾರ್ಗಸೂಚಿಗಳು ನ.9ರ ಮಧ್ಯರಾತ್ರಿ ಯಿಂದ ಜಾರಿಯಲ್ಲಿದ್ದು, ನ.30ರ ಮಧ್ಯರಾತ್ರಿಯವರಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಪಟಾಕಿ ಮಾರಾಟ ಮಾಡಲು ಮಾರಾಟಗಾರರರಿಗೆ ಪರವಾನಗಿ ಅಥವಾನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಾಗ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವುದಾಗಿ ವ್ಯಾಪಾರಸ್ಥರಿಂದ ಖಚಿತ ಪಡಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಸೂಚಿಸಲಾಗಿದೆ. ಸರ್ಕಾರದ ಮಾರ್ಗ ಸೂಚಿ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಹಸಿರು ಪಟಾಕಿ ಯಾವ್ಯಾವು? : ಪಟಾಕಿಗಳು ಎಂದರೆ ಎಲ್ಲವೂ ಒಂದೇ. ಇದರಲ್ಲಿ ಹಸಿರು ಪಟಾಕಿಮತ್ತು ಸಾಮಾನ್ಯ ಪಟಾಕಿಗಳ ನಡುವೆ ವ್ಯತ್ಯಾಸ ಏನು ಎನ್ನುವ ಗೊಂದಲ ಜನ ಸಾಮಾನ್ಯರಲ್ಲಿ ಇದೆ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್‌ ನಿಯಮಾವಳಿಯಂತೆ ಪರವಾನಗಿ ಪಡೆದುಕೊಂಡು ಹಸಿರು ಪಟಾಕಿ ಉತ್ಪಾದಿಸಲಾಗುತ್ತದೆ. ಪಟಾಕಿ ಸಿಡಿಸಿದಾಗ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬೆಳಕು ಮತ್ತುಶಬ್ದ ಹೊರ ಬರುತ್ತದೆ. ಜತೆಗೆ ಗಂಧಕ, ನೈಟ್ರೋಜನ್‌ ಆಕ್ಸೈಡ್‌, ಪೋಟ್ಯಾಸಿಯಂ ನೈಟ್ರೇಟ್‌ ಅತ್ಯಲ್ಪ ಮಾತ್ರ ಇರುತ್ತದೆ. ಇದರಿಂದ ಕಡಿಮೆಪ್ರಮಾಣದ ಹೊಗೆ ಹೊರ ಬರುವ ಪಟಾಕಿಗಳೇ ಹಸಿರು ಪಟಾಕಿಗಳು.

ಹಸಿರು ಪಟಾಕಿ ಮಾರಾಟಕ್ಕೆ ಬೇಕಾದ ಅಗತ್ಯ ಅನುಮತಿ ಪಡೆದು 34 ಪಟಾಕಿ ಮಳಿಗೆಸ್ಥಾಪಿಸಲಾಗಿದೆ. ಪ್ರತಿ ಬಾರಿ ಮಳಿಗೆಗಳ ಮಧ್ಯೆ ಯಾವುದೇ ಅಂತರ ಇರುತ್ತಿರಲಿಲ್ಲ. ಈ ಬಾರಿ 8-10 ಅಡಿಅಂತರ ಮಳಿಗೆ ಹಾಕಲಾಗಿದೆ. ಪಟಾಕಿ ಖರೀದಿಗೆ ಬರುವ ಗ್ರಾಹಕರಿಗೆ ಮಾಸ್ಕ್ಕಡ್ಡಾಯ ಮಾಡಲಾಗುತ್ತಿದೆ. ಪ್ರತಿ ಮಳಿಗೆಯಲ್ಲಿ ಸ್ಯಾನಿಟೈಜರ್‌ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತಿದೆ.  ಚಂದ್ರಕಾಂತ ಚವ್ಹಾಣ, ಪಟಾಕಿ ವ್ಯಾಪಾರಿ

ಪ್ರಧಾನ ಹಸಿರು ನ್ಯಾಯ ಪೀಠದ ನಿರ್ದೇಶನ ಹಾಗೂ ಕೋವಿಡ್‌-19 ನಿಯಂತ್ರಣ ನಿಟ್ಟಿನಲ್ಲಿ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಹಸಿರು ಪಟಾಕಿ ಸಿಬ್ಬಂದಿ ನ.6ರಂದು ಹೊರಡಿಸಿದ್ದ ಆದೇಶಕ್ಕೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ಹಸಿರು ಪಟಾಕಿ ಸಿಡಿಸಲು ಸಮಯ ನಿಗದಿಗೊಳಿಸಿದೆ. ರಾತ್ರಿ 8ರಿಂದ 10 ಗಂಟೆ ವರೆಗೆ ಮಾತ್ರ ಸೀಮಿತಿಗೊಳಿಸಿ ಅವಕಾಶ ನೀಡಲಾಗಿದೆ. –ವಿ.ವಿ.ಜ್ಯೋತ್ಸ್ನಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.