ಲಾಕ್‌ಡೌನ್ ಸಡಿಲಿಕೆ : ಖರೀದಿಗೆ ನೂಕುನುಗ್ಗಲು
Team Udayavani, Jun 15, 2021, 8:26 PM IST
ಅಫಜಲಪುರ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಹೇರಿದ್ದ ಕಟ್ಟುನಿಟ್ಟಿನ ಲಾಕ್‌ಡೌನ್ ಸಡಿಲಿಕೆ ಮಾಡಿದ್ದರಿಂದ ಸಾರ್ವಜನಿಕರು ಕೋವಿಡ್ ಭೀತಿ ಲೆಕ್ಕಿಸದೆ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಆಂತಕ ಹೆಚ್ಚಿಸಿದೆ. ಪಟ್ಟಣದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿದಂತೆ ತಾಲೂಕಿನ ವಿವಿಧ ಹಳ್ಳಿಗಳ ಜನತೆ ಪಟ್ಟಣಕ್ಕೆ ಬಂದು ದಿನಸಿ ಹಾಗೂ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀ ದಿಯಲ್ಲಿ ತೊಡಗಿದ್ದರು.
ಇಷ್ಟಲ್ಲದೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳು ಕೂಡಾ ಓಡಾಟ ಮಾಡುತ್ತಿದ್ದರಿಂದ ಜನತೆಗೆ ಕೋವಿಡ್ ನಿಯಮಗಳ ಪಾಲನೆ ಯಾರು ಪಾಲಿಸಲಿಲ್ಲ. ಈ ಮೊದಲು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಸಮಯ ನಿಗದಿಪಡಿಸಿತ್ತು. ಆದರೆ ಕೋವಿಡ್ ನಿಯಂತ್ರಣ ಕಂಡು ಬರುತ್ತಿದ್ದರಿಂದ ಜಿಲ್ಲಾಡಳಿತವು ಲಾಕ್‌ಡೌನ್ ಸಡಿಲಿಕೆ ಮಾಡಿ 6 ರಿಂದ 10 ಗಂಟೆ ಬದಲಾಗಿ 2 ಗಂಟೆವರೆಗೆ ವಿಸ್ತರಿಸಿದ್ದರಿಂದ ಪಟ್ಟಣದಲ್ಲಿ ಜನತೆ ಹಾಗೂ ವಾಹನಗಳ ಓಡಾಟ ಹೆಚ್ಚಾಗಿ ಕಂಡು ಬಂತು. ಸರಕಾರ ಕೋವಿಡ್ ನಿಯಂತ್ರಣಕ್ಕೆ ಬರಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಿದ್ದರೂ ಕೂಡಾ ಜನ ಮಾತ್ರ ಇದ್ಯಾವುದು ಲೆಕ್ಕಕ್ಕೆ ತೆಗೆದುಕೊಳ್ಳದೆ ಬೇಜವಾಬ್ದಾರಿತನ ತೋರಿಸುತ್ತಿರುವುದು ಕಂಡು ಬಂತು.
ಪಟ್ಟಣದಲ್ಲಿರುವ ವ್ಯಾಪಾರಸ್ಥರು ತಮ್ಮ ಅಂಗಡಿಗೆ ಬರುತ್ತಿರುವ ಗ್ರಾಹಕರಿಗೆ ಮಾಸ್ಕ್ ಧರಿಸುವಂತೆ ತಿಳಿ ಹೇಳುವುದಾಗಲಿ ಅಂತರ ಕಾಯ್ದುಕೊಳ್ಳುವಂತಹ ವ್ಯವಸ್ಥೆ ಮಾಡುವುದಾಗಲಿ ಮಾಡಿರದ ಕಾರಣ ಅಂಗಡಿ ಮುಗ್ಗಟ್ಟುಗಳಲ್ಲಿ ಗ್ರಾಹಕರ ನೂಕು ನುಗ್ಗಲು ಎದ್ದು ಕಾಣುತ್ತಿತ್ತು. ಸರಕಾರ ಕೋವಿಡ್ ನಿಯಂತ್ರಣ ವಾಗುತ್ತಿರುವುದನ್ನು ಗಮನಿಸಿ ಲಾಕ್‌ಡೌನ್ ನಿಯಮಗಳಲ್ಲಿ ಸಮಯ ಸಡಿಲಿಕೆ ಮಾಡಿ ಜನತೆಗೆ ಅನುಕೂಲವಾಗಲೆಂದು ಹೆಚ್ಚಿನ ಸಮಯ ನೀಡಿದರೂ ಕೂಡಾ ಜನದಟ್ಟನೆ ಹಾಗೂ ವಾಹನ ಸಂಚಾರ ಕಡಿಮೆಯಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.