ಲೋಕಾಯುಕ್ತ ಗುಜರಿ ಅಂಗಡಿ ಮಾಡಿದ ಸಿಎಂ

Team Udayavani, May 2, 2017, 3:44 PM IST

gul2.jpg

ಸೇಡಂ: ಕಾಂಗ್ರೆಸ್‌ನ ಕೆಲಸ ಶಾಸಕರ ಸಂಬಂಧಿಕರೇ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದರಿಂದ ಮರಳು ನೀತಿ ಜಾರಿಯಾಗಿಲ್ಲ. ಇಡೀ ಲೋಕಾಯುಕ್ತ ಸಂಸ್ಥೆಯನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಜರಿ ಅಂಗಡಿ ಮಾಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಗೋವಿಂದ ಕಾರಜೋಳ ಆರೋಪಿಸಿದರು. 

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಹೆಸರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಆ ವರ್ಗದ ಉದ್ಧಾರಕ್ಕೆ ಮನಸ್ಸು ಮಾಡಿಲ್ಲ. ರಾಜ್ಯದಲ್ಲಿ 2400 ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಾಲಮನ್ನಾ ಮಾಡಲಿಲ್ಲ. ಅಕ್ರಮ ಮರಳುಗಾರಿಕೆಯಲ್ಲಿ ಕಾಂಗ್ರೆಸ್‌ ಶಾಸಕರ ಪುತ್ರರು, ಸಂಬಂಧಿಕರು ಶಾಮಿಲಾಗಿದ್ದಾರೆ. ಆದರೂ ಕ್ರಮವಿಲ್ಲ. ಸರಕಾರ ಎಲ್ಲ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಮರಳುಗಾರಿಕೆ ಕಾಳದಂಧೆಯಾಗಿ ಮಾರ್ಪಟ್ಟಿದೆ. ರಾಜ್ಯಕ್ಕೆ ಸಾವಿರ ಕೋಟಿಗೂ ಅಧಿಕ ಆದಾಯ ನೀಡುವ ಮರಳು ನೀತಿ ರೂಪಿಸಿ ಜಾರಿಗೊಳಿಸಲು ಸರಕಾರ ಹಿಂದೇಟು ಹಾಕಿದೆ. ಈ ಮೂಲಕ ಸಿದ್ದು ಸರ್ಕಾರ ಅಕ್ರಮಕ್ಕೆ ಸಹಕಾರ ನೀಡುತ್ತಿದೆ. ಸರಕಾರಕ್ಕೆ ಸೇರಬೇಕಾದ ಆದಾಯ ಕಳ್ಳರ ಪಾಲಾಗುತ್ತಿದೆ. ಈಗಲಾದರೂ ಎಚ್ಚೆತ್ತು ಮರಳು ನೀತಿ ರೂಪಿಸಲಿ ಎಂದು ಆಗ್ರಹಿಸಿದರು. 

ತೊಗರಿಗೂ ಹಣವಿಲ್ಲ: ತೊಗರಿ ಖರೀದಿಗಾಗಿ ಕೇಂದ್ರ ಸರ್ಕಾರ 5050 ರೂ. ನೀಡುತ್ತಿದೆ. ರಾಜ್ಯ ಸರ್ಕಾರ ಕೇವಲ 450 ರೂ. ನೀಡಬೇಕು. ಅದನ್ನೂ ನೀಡದ ರಾಜ್ಯ ಸರ್ಕಾರದ ನಡೆಯಿಂದ ರೈತರು ಕಂಗಾಲಾಗಿದ್ದಾರೆ. ಖರೀದಿ ಕೇಂದ್ರಗಳನ್ನು ಮುಚ್ಚಿಸಲಾಗುತ್ತಿದೆ ಎಂದು ಆರೋಪಿಸಿದರು. ಕಳೆದ ಚುನಾವಣೆಯಲ್ಲಿ ಬಿಜೆಪಿ, ಕೆಜೆಪಿ ಮತ್ತು ಬಿಎಸ್‌ ಆರ್‌ಸಿ ಎಂಬ ಬಣಗಳಾಗಿ ಬಿಜೆಪಿ ಒಡೆದು ಹೋಗಿತ್ತು. 

ಅದರಿಂದಲೇ ಬಿಜೆಪಿ ಸೋಲುಂಡಿತ್ತು. ಈ ಸಾರಿ ಖಂಡಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೃಷ್ಣ ಮೇಲ್ದಂಡೆ ಯೋಜನೆ ಸಾಕಾರಕ್ಕೆ ನಾಟಕ ಮಾಡಿದ ಸಿದ್ದರಾಮಯ್ಯ ಜನರನ್ನು ವಂಚಿಸಿದ್ದಾರೆ. ಯೋಜನೆ ಹೆಸರಲ್ಲಿ ರಾಜಕೀಯ ಮಾಡಿದ್ದಾರೆ. 10 ಸಾವಿರ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿ ಮಂಕುಬೂದಿ ಎರಚಿದ್ದಾರೆ ಎಂದು ಕಾರಜೋಳ ಆರೋಪಿಸಿದರು.  

ಟಾಪ್ ನ್ಯೂಸ್

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1(1)

Punjalkatte: ಗುಂಡಿಗಳು ಸಾರ್‌ ಗುಂಡಿಗಳು

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.