ಹೆಳವರ ಮನೆಯಂಗಳ ನೋಡಿದರು!
Team Udayavani, Jan 5, 2018, 10:10 AM IST
ವಾಡಿ: ಪಟ್ಟಣದ ವಾರ್ಡ್-21ರ ಹನುಮಾನ ನಗರ ಬಡಾವಣೆಯಲ್ಲಿನ ಹೆಳವರ ಓಣಿಗೆ ಸಿಸಿ ರಸ್ತೆ ಹಾಗೂ ಚರಂಡಿ
ಸೌಲಭ್ಯ ಒದಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಶಂಕರ ಡಿ.ಕಾಳೆ ಮೇಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
2017ನೇ ಸಾಲಿನ ಆಗಸ್ 8ರಂದು ಉದಯವಾಣಿಯಲ್ಲಿ ಪ್ರಕಟಗೊಂಡಿದ್ದ ಹೆಳವರ ಮನೆಯಂಗಳ ನೋಡಿ ಎಂಬ
ವಿಶೇಷ ವರದಿ ಗಮನಿಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಈ ಕುರಿತು ಸ್ಪಷ್ಟ ಉತ್ತರ ನೀಡುವಂತೆ ವಾಡಿ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಆದೇಶ ನೀಡಿದರು. ಇದಕ್ಕೆ
ಪ್ರತಿಯಾಗಿ ಉಲ್ಲೇಖೀತ ಪತ್ರ ಸಂಖ್ಯೆಯೊಂದಿಗೆ ಮುಖ್ಯಾಧಿಕಾರಿಕಾಳೆ, ಅಭಿವೃದ್ಧಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ತಳ ಸಮುದಾಯಕ್ಕೆ ಸೇರಿದ ಹೆಳವರ ಜನಾಂಗ ವಾಸಿಸುವ ಬಡಾವಣೆಯಲ್ಲಿ ರಸ್ತೆ, ಚರಂಡಿ, ನೈರ್ಮಲ್ಯ ಹಾಗೂ ಶೌಚಾಲಯ ಸೇರಿದಂತೆ ಇತರ ಸಮಸ್ಯೆಗಳಿರುವುದನ್ನು ಪಟ್ಟಿ ಮಾಡಿರುವ ಅಧಿಕಾರಿಗಳು, ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದಾರೆ. 2017-18ನೇ ಸಾಲಿನ 3ನೇ ಹಂತದ ನಗರೋತ್ಥಾನ ಯೋಜನೆಯಡಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು,
ಶೀಘ್ರದಲ್ಲಿಯೇ ಕಾಮಗಾರಿ ಕಾರ್ಯಗತಗೊಳಿಸಲಾಗುವುದು.
ಸಾರ್ವಜನಿಕರ ಮನೆಯಂಗಳದಲ್ಲಿ ಮರಂ ಹಾಕಿ ಮಳೆ ನೀರು ಮತ್ತು ಬಚ್ಚಲು ನೀರು ಒಂದೆಡೆ ನಿಲ್ಲದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ.
ಮೂಲಭೂತ ಸೌಕರ್ಯಗಳಿಲ್ಲದೆ ತೀರಾ ಹದಗೆಟ್ಟಿರುವ ಹನುಮಾನಗರ ಬಡಾವಣೆಯಲ್ಲಿನ ಹೆಳವರ ಮನೆಯಂಗಳಕ್ಕೆ
ಅಧಿಕಾರಿಗಳು ಕೊನೆಗೂ ರಸ್ತೆ ನಿರ್ಮಿಸಲು ಮುಂದಾಗಿದ್ದು, ಬಡಾವಣೆಯ ನಿವಾಸಿಗಳಲ್ಲಿ ಹರ್ಷ ಮೂಡಿದೆ. ಆದಷ್ಟು ಬೇಗ ಕಾಮಗಾರಿ ಆರಂಭಗೊಳ್ಳಲಿ ಎಂದು ವಾರ್ಡ್ ಸದಸ್ಯೆ ಬಿಜೆಪಿಯ ಜೈನಾಬಾಯಿ ನಾಯಕ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.