ವಾರ್ಡ್‌ಗಳಲ್ಲೂ ಕಣ್ಣು ತಪಾಸಣೆ ಮಾಡಿ
Team Udayavani, Feb 15, 2017, 2:58 PM IST
ಕಲಬುರಗಿ: ನಗರದ ಎಲ್ಲ ವಾರ್ಡ್‌ಗಳಲ್ಲಿ ಪಾಲಿಕೆ ಸದಸ್ಯರು ವಾರ್ಡ್ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಎಚ್ಚರಿಕೆ ವಹಿಸಿ ಕಣ್ಣು ತಪಾಸಣೆ ಶಿಬಿರ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಕರೆ ನೀಡಿದರು.
ನಗರದ ರಿಂಗ್ ರಸ್ತೆಯಲ್ಲಿರುವ ಶಾದಾಬ್ ಫಂಕ್ಷನ್ ಹಾಲ್‌ನಲ್ಲಿ ನೇತ್ರ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಎಲ್ಲ ಕ್ಷೇತ್ರಗಳಲ್ಲಿ ಜನರಿಗೆ ಅಗತ್ಯ ಸೇವೆ ಒದಗಿಸುವಲ್ಲಿ ಉತ್ತಮ ಹೆಜ್ಜೆ ಇಡುತ್ತಿದೆ. ಅದರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ದೊರೆತಲ್ಲಿ ಜನರಿಗೆ ಸಮಯಕ್ಕೆ ಸರಿಯಾಗಿ ಸೌಕರ್ಯ ಒದಗಿಸಲು ಸಾಧ್ಯವಾಗುತ್ತದೆ.
ಆರೋಗ್ಯ ಸೇವೆಯಲ್ಲಿ ಹಿರಿಯ ನಾಗರಿಕರು ಅತಿ ಹೆಚ್ಚು ಸಮಸ್ಯೆಗಳನ್ನು ಪದೇ ಪದೇ ಎದುರಿಸುತ್ತಿದ್ದಾರೆ. ಈ ಹಂತದಲ್ಲಿ ಸರಕಾರದ ಜತೆಯಲ್ಲಿ ಮಾಜಿ ಮೇಯರ್ ಇಕ್ಬಾಲ್ ಶಿರಿ°ಫೊÅàಷ್ ಹಾಗೂ ಮಹಮ್ಮದ್ ಸಮದ್ ಖಾನ್ ಕೂಡ ತಮ್ಮ ಸಂಸ್ಥೆಗಳ ಮೂಲಕ ಕಣ್ಣು ತಪಾಸಣೆ ಮಾಡುತ್ತಿರುವುದು ಶ್ಲಾಘನೀಯ.
ಅದರಲ್ಲೂ 1500 ಜನರಿಗೆ ಇದರ ಪ್ರಯೋಜನ ದೊರೆತಿದೆ. ಇದೇ ರೀತಿಯಲ್ಲಿ ಅವರು ಪ್ರತಿ ವಾರ್ಡಿನಲ್ಲಿ ಕೆಲಸ ಮಾಡುವುದೇ ಆದಲ್ಲಿ, ಆರೋಗ್ಯ ಇಲಾಖೆ ಜಿಲ್ಲಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಪ್ರತಿ ವಾರ್ಡ್‌ನಲ್ಲಿ ಜನರ ಆರೋಗ್ಯದ ಕುರಿತು ಪಾಲಿಕೆ ಸದಸ್ಯರು ಕೂಡ ಹೆಚ್ಚು ಆಸಕ್ತಿವಹಿಸಬೇಕು.
ಆನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಕೂಡ ಪ್ರತಿ ವಾರ್ಡ್‌ನಲ್ಲಿ ಇಂತಹ ಕೆಲಸ ಮಾಡಿ ಎಂದು ಹೇಳಿದರು. ಶಿಬಿರ ಸಂಯೋಜಕ ಮಾಜಿ ಮೇಯರ್ ಇಕ್ಬಾಲ್ ಶಿರಿ°ಫೊÅàಷ್ ಮಾತನಾಡಿ, ನಾವು ಒಟ್ಟು 1734 ಜನರ ನೋಂದಣಿ ಮಾಡಿಕೊಂಡಿದ್ದೇವೆ. ಸಮಯದ ಅಭಾವದಿಂದ ಕೇದಲ 1500 ಜನರಿಗೆ ತಪಾಸಣೆ ಮಾಡಲು ಸಾಧ್ಯವಾಯಿತು. ಇದರಲ್ಲಿ 125 ಜನರಿಗೆ ಶಸ್ತ್ರಚಿಕಿತ್ಸೆ ನೀಡಲಾಗುವುದು.
1100 ಜನರಿಗೆ ಉಚಿತವಾಗಿ ಕನ್ನಡಕ ನೀಡಲಾಗುವುದು. ಬೆಳಗ್ಗೆ 10:00ರಿಂದ ರಾತ್ರಿ 10:00ರ ವರೆಗೆ ಜನರನ್ನು ತಪಾಸಣೆ ಮಾಡಿದ ವೈದ್ಯರ ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಮಾಜಿ ಸಂಸದ ಹಾಗೂ ಹಾಲಿ ಎಂಎಲ್‌ಸಿ ಇಕ್ಬಾಲ್ ಅಹಮದ್ ಸರಡಗಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಅಜೀಜುಲ್ಲಾ ಸರಮಸ್ತ್, ಬಾಬಾ ನಜರ್ ಮಹಮದ್‌ಖಾನ್ ಶಾದಾಬ್ ಫಂಕಷನ್ ಹಾಲ್‌ನ ಮೋಹಿದುದ್ದೀನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.