ಯೋಜನೆ ಮಾಹಿತಿ ಜನತೆಗೆ ತಿಳಿಸಿ
Team Udayavani, Jun 23, 2022, 12:51 PM IST
ಸೇಡಂ: ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನರಪವಾದ ಯೋಜನೆಗಳನ್ನು ಜನರ ತಿಳಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.
ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬುಧುವಾರ ತಾಲೂಕು ಬಿಜೆಪಿ ಆಯೋಜಿಸಿದ್ದMake project information public ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಕಟ್ಟ ಕಡೆ ವ್ಯಕ್ತಿಗೂ ಸಿಗಬೇಕಾದಂತಹ ಯೋಜನೆಗಳನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ ಎಂದರು.
ಹಿಂದೆ ಯಾವುದಾದರೂ ಸರ್ಕಾರದ ಯೋಜನೆ ಬಂದರೆ ಅದು ಕೆಲವರಿಗೆ ಮಾತ್ರ ಸೀಮಿತವಾಗಿರುತ್ತಿತ್ತು, ಸಮಯ ಬದಲಾಗಿದೆ, ನೇರವಾಗಿ ಫಲಾನುಭವಿಗಳಿಗೆ ಯೋಜನೆ ಲಾಭ ತಲುಪುತ್ತಿದೆ. ಈ ಕುರಿತು ಪ್ರತಿ ಮನೆ-ಮನೆಗೆ ಹೋಗಿ ತಿಳಿಹೇಳುವ ಕೆಲಸ ಮಾಡಬೇಕು ಎಂದು ಹೇಳಿದರು. ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ, ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ತಾಲೂಕು ಅಧ್ಯಕ್ಷ ಪರ್ವತರೆಡ್ಡಿ ಪಾಟೀಲ ನಾಮವಾರ ಮಾತನಾಡಿದರು. ವಿ
ಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ ಬಿನ್ನಾಡೆ ಸಂಘಟನಾ ಸಭೆ ನಡೆಸಿದರು. ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಚಿಮ್ಮನಚೋಡಕರ್, ಡಿಸಿಸಿ ಬ್ಯಾಂಕ್ ನಿರ್ದೆಶಕ ಕಲ್ಯಾಣಪ್ಪ ಪಾಟೀಲ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಅತೀಶ ಪವಾರ, ಪುರಸಭೆ ಅಧ್ಯಕ್ಷೆ ಶೋಭಾ ಹೂಗಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರೆಡ್ಡಿ ದೇಶಮುಖ ಮದನಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಯಕ್ಮಾಯಿ, ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ ಕೇರಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ವೆಂಕಟಯ್ಯ ಮುಸ್ತಾಜರ, ರೈತ ಮೋರ್ಚಾ ಅಧ್ಯಕ್ಷ ವೀರಾರೆಡ್ಡಿ ಬಟಗೇರಾ ಇನ್ನಿತರರಿದ್ದರು. ಶರಣು ಕೆರಳ್ಳಿ ಪ್ರಾರ್ಥಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಪ್ಪ ಕೊಳ್ಳಿ ಸ್ವಾಗತಿಸಿದರು, ತಾಲೂಕು ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಪಾಟೀಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.