ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ


Team Udayavani, Apr 12, 2024, 4:56 PM IST

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಕಲಬುರಗಿ: ವರ್ಷಕ್ಕೆ ಎರಡು ಕೋಟಿ ಉದ್ಯೋಗ, ರೈತರ ಆದಾಯ ದುಪ್ಪಟ್ಟು, ಎಂಎಸ್ಪಿ ಬೆಲೆ ಹೆಚ್ಚಳದಂತಹ ಗ್ಯಾರಂಟಿಗಳನ್ನೇ ಮಾಡದಿರುವ ಪ್ರಧಾನಿ ನರೇಂದ್ರ ಮೋದಿ ಈಗೇನು ಗ್ಯಾರಂಟಿ ಕೊಡ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

ಕಲಬುರಗಿ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರವಾಗಿ ಆಯೋಜಿಸಲಾ ಕಾಂಗ್ರೆಸ್ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅವುಗಳನ್ನು ಈಗಾಗಲೇ ರಾಜ್ಯದಲ್ಲಿ ಕಾರ್ಯಾನುಷ್ಠಾನ ತರಲಾಗಿದೆ. ಆದರೆ ಮೋದಿ ಗ್ಯಾರಂಟಿ ಬರೀ ಜಾಹೀರಾತುಗಳಲ್ಲಿ ಮಾತ್ರ ಎಂದು ವಾಗ್ದಾಳಿ ನಡೆಸಿದರು.

ಎಐಸಿಸಿ ಗ್ಯಾರಂಟಿ ಗಳನ್ನು ನೋಡಿ ಹಾಗೂ ಇಂಡಿಯಾ ಒಕ್ಕೂಟ ವ್ಯಾಪಕವಾಗಿ ಬಲವರ್ಧನೆಗೊಳ್ಳುತ್ತಿರುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿ ದೇಶದ ಗಲ್ಲಿ- ಗಲ್ಲಿ ರೋಡ ಶೋ ನಡೆಸಿ ಇಲ್ಲದ ಗ್ಯಾರಂಟಿ ಪ್ರಸ್ತಾಪಿಸುತ್ತಿದ್ದಾರೆ.‌ ಅದರಲ್ಲೂ ಇಡಿ, ಐಟಿ,ಸಿಬಿಐ ಬಳಸಿ ಹಲವರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ. ಇದು ಸಂವಿಧಾನದ ಆಶಯ ವಿರುದ್ದವಾಗಿದೆ.‌ಹೀಗಾಗಿ ದೇಶದ ಜನ ಈಗಲಾದರೂ ಎಚ್ಚೆತ್ತುಕೊಳ್ಳಬೇಕೆಂದರು.

ದೇಶದ ಹಲವು ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಸ್ವಯಂ ಸೇವಕರು ಹಾಗೂ ಶಿಕ್ಷಕರನ್ನು ಸೇರಿಸಿ ಇಡೀ ಆಡಳಿತ ವ್ಯವಸ್ಥೆ ಬುಡಮೇಲು ಮಾಡಲಾಗುತ್ತಿದೆ. ಜನ ಈಗಲಾದರೂ ಎಚ್ಚೆತ್ತುಕೊಳ್ಳಬೇಕೆಂದರು

ಸವಾಲು ಹಾಕಿದ ಖರ್ಗೆ: ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ಮೋದಿ ಏನು ಅಭಿವೃದ್ದಿ ಮಾಡಿದ್ದಾರೆ ಎಂಬುದನ್ನು ಜನತೆಯ ಮುಂದಿಡಲಿ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದರು. ‌

ಕಳೆದ ತಿಂಗಳು ಪ್ರಧಾನಿ ಮೋದಿ ಇಲ್ಲಿಗೆ ಬಂದು ಹೋಗಿದ್ದಾರೆ ತಮ್ಮ ಹತ್ತು ವರ್ಷಗಳ ಅವಧಿಯಲ್ಲಿ ಈ ಭಾಗಕ್ಕೆ ಏನು ಕೊಟ್ಟಿದ್ದಾರೆ ಎಂಬುದನ್ನು ಹೇಳಬೇಕಿತ್ತು ಎಂದರು.‌

ಕಲಬುರಗಿಯಲ್ಲಿ ಇಎಸ್ ಐ ಆಸ್ಪತ್ರೆ ಕಟ್ಟಿದ್ದೇವೆ. ಅಲ್ಲಿ ಏಮ್ಸ್ ನಿರ್ಮಾಣ ಮಾಡಲು ಮೋದಿ ಅವರಿಗೆ ಮನವಿ ಮಾಡಿದ್ದೆ. ಆದರೆ ನನ್ನ ಮೇಲೆ ಏನು ಸಿಟ್ಟು ಗೊತ್ತಿಲ್ಲ ನಮ್ಮ ಮನವಿಯನ್ನು ಪುರಸ್ಕರಿಸಲಿಲ್ಲ‌. ನನ್ನ ಅವಧಿಯಲ್ಲಿ ಮಂಜೂರಾಗಿದ್ದ ರೇಲ್ವೆ ವಿಭಾಗ ಕಚೇರಿ ಯೋಜನೆ ವಾಪಸ್ ಹೋಗಿದೆ. ನಾನು ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯಗಳಲ್ಲಿ ಶೇ 10 ರಷ್ಟು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಸವಾಲು ಹಾಕಿದರು.

ಮೋದಿ ತಮ್ಮ ಗ್ಯಾರಂಟಿ ಏನು ಎಂದು ಮೊದಲು ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಖರ್ಗೆ ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ಗ್ಯಾರಂಟಿ ಎಂದು ಜನರೇ ಹೇಳುತ್ತಿದ್ದಾತೆ.‌

ತಮ್ಮ ಅವಧಿಯಲ್ಲಿ ಕೈಗೊಂಡ ಅಭಿವೃದ್ದಿ ಕೆಲಸಗಳ ಪಟ್ಟಿ ನೀಡಿದ ಖರ್ಗೆ, ರಾಷ್ಟ್ರೀಯ ಹೆದ್ದಾರಿ, ಕೇಂದ್ರಿಯ ವಿಶ್ವವಿದ್ಯಾಲಯ ಸ್ಥಾಪಿಸಿದ್ದೇನೆ. ಮೂವತ್ತೇಳು ಹೊಸ‌ ರೈಲು ಓಡಿಸಿದ್ದೇನೆ. ಜವಳಿ ಪಾರ್ಕ್ ಮಂಜೂರು ಮಾಡಿಸಿದ್ದೇನೆ. ಇವುಗಳನ್ನು ನೀವು ಮಾಡಿ ಎಂದು ನನಗೆ ಯಾರೂ ಹೇಳಿರಲಿಲ್ಲ. ಆದರೆ ನಮ್ಮ ಭಾಗದ ಅಭಿವೃದ್ದಿಗಾಗಿ ಕೆಲಸ ಮಾಡಿದ್ದೇನೆ ಈಗ ಓಟು ಕೇಳುತ್ತಿದ್ದೇನೆ. ಅಭಿವೃದ್ದಿ ಆಗಬೇಕೆಂದರೆ ಕಾಂಗ್ರೆಸ್ ಗೆ ಮತ ನೀಡಿ, ಕಳೆದ ಸಲದ ಸೋಲಿನ ಸೇಡು ತೀರಿಸಿಕೊಳ್ಳಿ ಎಂದು ಮನವಿ ಮಾಡಿದರು.

ಬಿಜೆಪಿ ಬಳಿ ವಾಷಿಂಗ್ ಮಷಿನ್ ಇದೆ. ಯಾರನ್ನೂ ಭ್ರಷ್ಟಾಚಾರಿಗಳು ಎಂದು ಹೇಳಿ ಜೈಲಿಗೆ ಹಾಕುತ್ತಾರೋ ಅಂತವರನ್ನೇ ಆ ಮಷಿನ್ ಮೂಲಕ ಪಕ್ಷಕ್ಕೆ ಸೇರಿಸಿಕೊಂಡು ಅವರನ್ನು ಒಳ್ಳೆಯವರು ಎಂದು ಬಿಂಬಿಸುತ್ತಾರೆ ಎಂದು ವ್ಯಂಗ್ಯವಾಡಿದ ಖರ್ಗೆ, ಭ್ರಷ್ಟಾಚಾರಿಗಳನ್ನು ಬಿಡುವುದಿಲ್ಲವೆಂದು ಮೋದಿ ಹಾಗೂ ಶಾ ಹೇಳುತ್ತಾರೆ. ಬಿಡುವ ಮಾತಿರಲಿ ನಿಮ್ಮ ಪಕ್ಕದಲ್ಲೇ ಕೂಡಿಸಿಕೊಂಡಿದ್ದೀರಲ್ಲ ಎಂದು ಟಾಂಗ್ ನೀಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾವುದೇ ಕಂಪನಿಯಲ್ಲಿ ಯುವಕ ಯುವತಿಯರು ಅಂಪ್ರೆಟಿಸಿಪ್ ಮಾಡಿ ಬಂದರೆ ಅವರಿಗೆ ಉದ್ಯೋಗ ನೀಡಲಾಗುವುದು. ರೈತರ ಸಾಲ ಮನ್ನಾ ಮಾಡಲಾಗುವುದು. ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ನೀಡಲಾಗುವುದು. ಒಟ್ಟಾರೆ ೨೫ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದರು.

ರಾಧಾಕೃಷ್ಣ ಅವರಿಗೆ ಓಟು ಕೊಟ್ಟು ಗೆಲ್ಲಿಸಿ ಮುಂದಿನ ಐದು ವರ್ಷದಲ್ಲಿ ಏನು ಬದಲಾವಣೆ ಮಾಡುತ್ತೇನೆ ನೋಡಿ. ಈ ಭಾಗವನ್ನು ನಿಜವಾದ ಕಲ್ಯಾಣ ಕರ್ನಾಟಕವನ್ನಾಗಿ ಮಾಡಿ ತೋರಿಸುತ್ತೇನೆ ಎಂದು ವಾಗ್ದಾನ ಮಾಡಿದರು.

ಈ ಚುನಾವಣೆ ಕೇವಲ ರಾಧಾಕೃಷ್ಣ ಅಥವಾ ಕಾಂಗ್ರೆಸ್ ಚುನಾವಣೆಯಲ್ಲ ಬದಲಿಗೆ ದೇಶದ ಸಂವಿಧಾನ ಪ್ರಜಾಸತ್ತೆ ಉಳಿಸುವ ಚುನಾವಣೆಯಾಗಲಿದೆ.‌ ಪ್ರಜಾತಂತ್ರ ಉಳಿಯಬೇಕು ಹಾಗೂ ಈ‌ಭಾಗ ಬೆಳೆಯಬೇಕು ಎನ್ನುವ ಇಚ್ಛೆ ಇದ್ದರೆ ಕಾಂಗ್ರೆಸ್ ಗೆ ಮತ ನೀಡಿ ಎಂದು ಮನವಿ ಮಾಡಿ ನಿಮ್ಮ ದರ್ಶನಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದರು.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ ಮೋದಿ ಅವರು ಇಲ್ಲಿ ಬಂದು ದ್ವೇಷದ ಪ್ರಚಾರ ಪ್ರಾರಂಭಿಸಿದ್ದಾರೆ. ಆದರೆ
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇದೂವರೆಗೆ ಕೈಗೊಂಡ ಅಭಿವೃದ್ದಿ ಕಾರ್ಯಗಳ ಅದರಲ್ಲೂ ಆರ್ಟಿಕಲ್ 371 ಜೆ ಜಾರಿಗೆ ತಂದಿರುವುದಕ್ಕೆ ಪ್ರತಿಯಾಗಿ ನೀವೆಲ್ಲ ರಾಧಾಕೃಷ್ಣ ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರಿಗೆ ಉತ್ತರ ನೀಡಬೇಕು ಎಂದರು.‌

ಕಳೆದ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ‌ಗೆಲ್ಲಿಸಿಕೊಟ್ಟಂತೆ ಈ ಸಲದ ಲೋಕಸಭೆ ಚುನಾವಣೆಯಲ್ಲಿ 25 ಕ್ಕೂ ಅಧಿಕ ಸ್ಥಾನ ಗೆಲ್ಲಿಸಬೇಕು ಇದು ಎಲ್ಲರ ಆಸೆಯಾಗಿದೆ. ನೀವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಗೆಲ್ಲಿಸುವ ಮೂಲಕ ಖರ್ಗೆ ಅವರ ಕೈ ಬಲಪಡಿಸಿ ಎಂದು ಡಿಕೆಶಿ ಮನವಿ ಮಾಡಿದರು.

ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಸೌಮ್ಯ ಸ್ವಭಾವದವರು. ಅವರು ನಿಮ್ಮ ಸೇವೆ ಈಗ ಸಜ್ಜಾಗಿದ್ದಾರೆ. ಅವರನ್ನು ಕನಿಷ್ಠ ೫ ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಚಿವರಾದ ಶರಣಪ್ರಕಾಶ ಪಾಟೀಲ್, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಿಎಂ ಸಲಹೆಗಾರರಾದ ಬಿ.ಆರ್.ಪಾಟೀಲ, ಕೆಕೆಆರ್ ಡಿ ಬಿ ಅಧ್ಯಕ್ಷ ಅಜಯ್ ಸಿಂಗ್, ಶಾಸಕರಾದ ಎಂವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಯುಬಿ ವೆಂಕಟೇಶ, ಚೆನ್ನಾರೆಡ್ಡಿ ಪಾಟೀಲ ತುನ್ನೂರು, ಬಸನಗೌಡ ತುರ್ವಿಹಾಳ, ತಿಪ್ಪಣ್ಣಪ್ಪ ಕಮಕನೂರು,ಮಾಜಿ ಸಚಿವರಾದ ರಾಜಶೇಖರ್ ಪಾಟೀಲ ಹುಮನಾಬಾದ್, ಎಚ್ ಎಂ ರೇವಣ್ಣ, ಬಾಬುರಾವ ಚಿಂಚನಸೂರು, ಮಾಜಿ ಲೋಕಸಭಾ ಸದಸ್ಯರಾದ ವಿ.ಎಸ್ ಉಗ್ರಪ್ಪ, ವಿ.ವಸಂತಕುಮಾರ, ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಬಸರೆಡ್ಡಿ ಪಾಟೀಲ ಅನಪೂರ, ಭಾಗನಗೌಡ ಸಂಕನೂರು, ಶ್ರೇಣಿಕ ಕುಮಾರ ಧೋಕಾ, ಶಿವಾನಂದ ಪಾಟೀಲ, ಡೇವಿಡ್ ಸಿಮೆಯೋನ, ಶರಣು‌ಮೋದಿ, ಮಹಜರ್ ಖಾನ್, ಕಿರಣ್ ದೇಶಮುಖ, ಪ್ರವೀಣ ಹರವಾಳ, ರಾಜೀವ್ ಜಾನೆ, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ, ನೀಲಕಂಠ ಮೂಲಗೆ, ಡಿ.ಜಿ.ಸಾಗರ, ಭೀಮಣ್ಣ ಸಾಲಿ ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ: Park Bo Ram: 30ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಖ್ಯಾತ ಗಾಯಕಿ; ಕಾರಣ ನಿಗೂಢ

ಟಾಪ್ ನ್ಯೂಸ್

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.