Lok Sabha Election: ಅಭ್ಯರ್ಥಿಗಳ ಆಯ್ಕೆ ಕುರಿತು ನಾಳೆ ಕಾಂಗ್ರೆಸ್ ಮಹತ್ವದ ಸಭೆ: ಖರ್ಗೆ
Team Udayavani, Jan 9, 2024, 12:00 PM IST
ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಪ್ರಯುಕ್ತ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಾಳೆ ಸಭೆ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ವಿಮಾನ ನಿಲ್ದಾಣ ದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜತೆ ಮಾತನಾಡಿ, ಸಭೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಗುವುದು. ಆ ನಿಟ್ಟಿನಲ್ಲಿ ಅನಿರೀಕ್ಷಿತ ಬೆಳವಣಿಗೆ ದೊಡ್ಡದಾಗೇನು ನಿರೀಕ್ಷಿತ ವಿಲ್ಲ ಎಂದ ಅವರು, ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಇಂಡಿಯಾ ಒಕ್ಕೂಟ ಒಂದಾಗಿ, ಒಗ್ಗಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಮತ್ತು ಅದೇ ರೀತಿ ಒಂದಾಗಿ ಕೆಲಸ ನಿರ್ವಹಿಸುತ್ತೇವೆ ಎಂದರು.
ನಾಳೆ ದೆಹಲಿಯಲ್ಲಿ ಅನೇಕ ಘಟಕಗಳ ಮೀಟಿಂಗ್ ಕರೆದಿದ್ದೇವೆ. ಎಲ್ಲಾ ಮತಕ್ಷೇತ್ರಗಳಿಗೆ ಈಗಾಗಲೇ ವೀಕ್ಷಕರನ್ನು ನೇಮಕ ಮಾಡಿದ್ದೇವೆ ಎಂದರು.
ಮೋದಿ ಫಾರೆನ್ ಪಾಲಿಸಿಗೆ ಖರ್ಗೆ ಅಸಮಾಧಾನ:
ಮೋದಿ ಅವರು ಎಲ್ಲವೂ ಪರ್ಸನಲ್ ಆಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೊದಲು ನಾವು ನಮ್ಮ ನೆರೆಹೊರೆಯ ರಾಷ್ಟ್ರಗಳ ಜತೆಯಲ್ಲಿ ಸಂಬಂಧ ಚೆನ್ನಾಗಿ ಇಟ್ಟುಕೊಳ್ಳಬೇಕು. ಕೆಟ್ಟ ಪರಿಸ್ಥಿತಿ ಬಂದಾಗ ನಾವು ಹೋರಾಟಕ್ಕೂ ಸಿದ್ದರಾಗಬೇಕಾಗುತ್ತದೆ. ಇಂದಿರಾಗಾಂಧಿ ಯಾವ ರೀತಿ ಪಾಕಿಸ್ತಾನವನ್ನು ಬೇರ್ಪಡಿಸಿ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಅಂತಹ ಹೋರಾಟ ಮಾಡಬೇಕಾಗುತ್ತದೆ ಎಂದರು.
ಅಂತರಾಷ್ಟ್ರೀಯ ಪಾಲಿಸಿ ವಿಚಾರದಲ್ಲಿ ಮೋದಿಯವರು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಯಾವಾಗ ಯಾರನ್ನು ಬೇಕಾದರೂ ತಬ್ಬಿಕೊಳ್ಳುತ್ತಾರೆ, ಯಾರನ್ನು ಬೇಕಾದರೂ ತೆಗಳುತ್ತಾರೋ ಗೊತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಮಾಲ್ಡೀವ್ಸ್ ವಿಚಾರದಲ್ಲಿ ಪ್ರಧಾನಿ ಮೋದಿ ನಡೆ ಸರ್ವಸಮ್ಮತವಲ್ಲ ಎಂದರು.
ಮೂವರು ಡಿಸಿಎಂ ವಿಚಾರ ಹೈಕಮಾಂಡ್ ಮುಂದೆ ಇಲ್ಲ:
ರಾಜ್ಯದಲ್ಲಿ ಮೂರು ಡಿಸಿಎಂ ವಿಚಾರ ನಮ್ಮ ಮುಂದೆ ಬಂದಿಲ್ಲ. ಈ ವಿಚಾರ ನೀವು ಸಿದ್ರಾಮಯ್ಯ, ಡಿಕೆ ಶಿವಕುಮಾರ ಅವರಿಗೆ ಕೇಳಿ ಎಂದ ಖರ್ಗೆ, ನಮ್ಮ ಮುಂದೆ ಇಂತಹ ಪ್ರಸ್ತಾವನೆ ಇಲ್ಲ. ಇದೆಲ್ಲಾ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಬರಬಾರದು. ಸದ್ಯಕ್ಕೆ ಸರಕಾರ ನಡೆಸುವ ಕಡೆಗೆ, ಸಮಸ್ಯೆಗಳ ಕಡೆಗೆ ಗಮನ ಕೊಡಬೇಕು, ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.