ಅಂತರ್ಜಲ ಮಟ ಅಭಿವೃದ್ಧಿಗೆ ಕೋಟಿ ರೂ.


Team Udayavani, Mar 12, 2017, 1:18 PM IST

gul2.jpg

ಆಳಂದ: ಆಳಂದ, ಅಫಜಲಪುರ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಈ ಭಾಗದಲ್ಲಿ ಅಂತರ್ಜಲ ಮಟ್ಟ ಅಭಿವೃದ್ಧಿ ಆಗಬೇಕಾಗಿದೆ. ಇದಕ್ಕಾಗಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಒಂದು ಕೋಟಿ ರೂ. ಮೀಸಲಿರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ತಾಲೂಕಿನ ಪಡಸಾವಳಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷದ ಬೇಸಿಗೆ ಕಾಲದಲ್ಲಿ ಆಳಂದ ತಾಲೂಕಿನ 120ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ. ಈ ಭಾಗದಲ್ಲಿ ಅಂತರ್ಜಲ ಮತ್ತು ಭೂಮಟ್ಟದ ಜಲ ಮೂಲಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಸಲ್ಲಿಸಲಾದ ಸಿರಪುರ ಮಾದರಿ ಅಂತರ್ಜಲ ಅಭಿವೃದ್ಧಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ.

ಗ್ರಾಮೀಣ ಭಾಗದ ಮತ್ತು ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸುತ್ತಿದೆ ಎಂದು ಹೇಳಿದರು. ಪಡಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡು ದಿನಗಳಲ್ಲಿ ಎಲ್ಲ ಸಾಧನ ಸಲಕರಣೆಗಳು ಮತ್ತು ಪೀಠೊಪಕರಣಗಳನ್ನು ಹಸ್ತಾಂತರಿಸಿ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡಬೇಕು ಎಂದು ಆರೋಗ್ಯ ಅಧಿಧಿಕಾರಿಗಳಿಗೆ ಸೂಚಿಸಿದರು. 

ಹೈದ್ರಾಬಾದ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 371ನೇ (ಜೆ)ಕಲಂ ಅನುಷ್ಠಾನಗೊಳಿಸಿದ್ದರಿಂದ ಆರು ಜಿಲ್ಲೆಗಳ ಎಲ್ಲ ಬಡ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌, ಇಂಜಿನಿಯರ್‌ ಮುಂತಾದ ಕೋರ್ಸ್‌ ಕಲಿಯುವ ಸದವಕಾಶ ಸಿಕ್ಕಿದೆ. ಇದಲ್ಲದೆ ಸರ್ಕಾರಿ ನೌಕರಿಗಳಲ್ಲಿ ವಿಶೇಷ ಮೀಸಲಾತಿ ದೊರೆತಿದೆ. ಈ ಭಾಗದಲ್ಲಿ ಖಾಲಿಯಿರುವ 30, 000 ಹುದ್ದೆಗಳ ಪೈಕಿ ಈಗಾಗಲೇ 12, 000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.

ಉಳಿದ 18 ಸಾವಿರ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ ಮಾಡಲಾಗುವುದು. ಸರ್ಕಾರದ ಉಳಿದ ಅವಧಿಧಿಯಲ್ಲಿ ಹೈದ್ರಾಬಾದ ಕರ್ನಾಟಕ ಭಾಗದ ಆರು ಜಿಲ್ಲೆಗಳ ಪ್ರತಿ ಹಳ್ಳಿಗೂ ಮತ್ತು ತಾಂಡಾಕ್ಕೂ ಸಂಪರ್ಕ ಕಲ್ಪಿಸಲು ಡಾಂಬರ್‌ ರಸ್ತೆಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಆರ್‌. ಪಾಟೀಲ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳನ್ನು ಪ್ರಾರಂಭಿಸಬೇಕು. ಇದರಿಂದ 371ನೇ (ಜೆ)ಕಲಂ ಲಾಭ ವಿದ್ಯಾರ್ಥಿಗಳಿಗೆ ದೊರೆತಂತಾಗುತ್ತದೆ. ಪಡಸಾವಳಗಿ ಗ್ರಾಮದ ನಾಗರಿಕರಿಂದ ಒಂದು ಲಕ್ಷ ರೂ. ಸಂಗ್ರಹಿಸಿ ನೂತನವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ.

ಸದ್ಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಒಬ್ಬ ವೈದ್ಯಾಧಿಕಾರಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದರು. ಪಡಸಾವಳಗಿ ಗ್ರಾಮದ ರೈತರು ಹೆಚ್ಚಿನ ಪ್ರಮಾಣದಲ್ಲಿ  ಕಬ್ಬು ಬೆಳೆಯುವ ಪ್ರಯುಕ್ತ ಅವರ ಹಣಕಾಸಿನ ವ್ಯವಹಾರಕ್ಕೆ ಒಂದು ಬ್ಯಾಂಕ್‌ ಪ್ರಾರಂಭಿಸುವುದು ಅವಶ್ಯಕತೆ ಇದೆ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. 

ಆಳಂದ ತಾಲೂಕಿನ ನಿಂಬರ್ಗಾ, ಪಡಸಾವಳಗಿ ಮತ್ತು ಕೊಂತನ ಹಿಪ್ಪರಗಾ ಗ್ರಾಮಗಳಿಗೆ ಈ ಹಿಂದೆ ಕೇಂದ್ರ ಸರ್ಕಾರದ ಯೋಜನೆಯಡಿ ಕೆರೆ ಮಂಜೂರು ಮಾಡಿಸಲಾಗಿತ್ತು. ಕೇಂದ್ರ ಸರ್ಕಾರ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಿರುವ ಕಾರಣ ಕೆರೆಗಳ ನಿರ್ಮಾಣ ಅಸಾಧ್ಯವಾಗಿದೆ. ಆದರೆ ರಾಜ್ಯ ಸರ್ಕಾರ ಪಡಸಾವಳಗಿ ಹಾಗೂ ಕೊಂತನ ಹಿಪ್ಪರಗಾ ಕೆರೆಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದೆ.

ಪಡಸಾವಳಗಿಯಿಂದ ಆಳಂದ ಪಟ್ಟಣಕ್ಕೆ ಹೆಬಳಿ ಮಾರ್ಗವಾಗಿ ಸಂಚರಿಸಿದರೆ ತುಂಬಾ ಸಮೀಪವಾಗುತ್ತದೆ. ಕಾರಣ ರಸ್ತೆ ನಿರ್ಮಿಸಲಾಗುವುದು. ನಿರ್ಗುಡಿ-ಕೆಸರಜವಳಗಾ ರಸ್ತೆ ಸಹ ನಿರ್ಮಿಸಲಾಗುವುದು. ಪಡಸಾವಳಗಿ-ನಿರ್ಗುಡಿ ರಸ್ತೆ ಈಗಾಗಲೇ ನಿರ್ಮಿಸಿದ್ದು, ಈ ಮಾರ್ಗದಲ್ಲಿ ಒಂದು ಸೇತುವೆ ನಿರ್ಮಿಸಲಾಗುವುದು ಎಂದು ಹೇಳಿದರು. 

ಪಡಸಾವಳಗಿ ಗ್ರಾಪಂ ಅಧ್ಯಕ್ಷೆ ಭೌರಮ್ಮ ಮಲ್ಲಿನಾಥ ದುಲಂಗೆ, ಉಪಾಧ್ಯಕ್ಷ ಶರಣಪ್ಪ ಮಾರುತಿ ದೇವನೂರೆ, ಮುಖಂಡರಾದ ಶರಣು ಭೂಸನೂರ, ಅಜಗರ ಅಲಿ, ಯುವರಾಜ ಹತ್ತರಕಿ, ರಾಜಶೇಖರ ಪಾಟೀಲ, ಮಲ್ಲಪ್ಪ ಹತ್ತರಕಿ, ಸಲಾಂ ಸಗರಿ, ವೀರಣ್ಣ ಮಂಗಾಣೆ, ಚಂದ್ರಕಾಂತ ಭೂಸನೂರ, ರೇವಣಸಿದ್ದಪ್ಪ ನಾಗೂರೆ, ಬಿ.ಕೆ. ಪಾಟೀಲ, ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಶಿವರಾಜ ಸಜ್ಜನಶೆಟ್ಟಿ,

ಆಳಂದ ತಾಲೂಕು ವೈದ್ಯಾಧಿಧಿಕಾರಿ ಅಭಯಕುಮಾರ ಜಿ., ಪಡಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಧಿಕಾರಿ ದೀಪಕ ಕಾವೇರಿ ಇದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಎರಡು ಎಕರೆ ಭೂಮಿಯನ್ನು ದಾನವಾಗಿ ನೀಡಿದ ದಿವಂಗತ ಶಿವಲಿಂಗಪ್ಪ ಶ್ರೀಮಂತರಾವ ಪಾಟೀಲ ಅವರ ಧರ್ಮಪತ್ನಿ ವೆಂಕಟಮ್ಮ ಅವರನ್ನು ಇದೇ ಸಂದರ್ಭದಲ್ಲಿ ಸಚಿವರು ಸನ್ಮಾನಿಸಿದರು.  

ಟಾಪ್ ನ್ಯೂಸ್

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.