ಆನೆಕಾಲು ರೋಗ ನಿಯಂತ್ರಣಕ್ಕೆ ಔಷಧಿ ನೀಡಿಕೆ
Team Udayavani, Jan 14, 2021, 1:50 PM IST
ಕಲಬುರಗಿ: ಅನೆಕಾಲು ರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜ.22ರಿಂದ 31 ರವರೆಗೆ ಐವಿಆರ್ ಐವರಮೆಕ್ಟಿನ್ ಹಾಗೂ ಡಿಇಸಿ, ಅಲ್ಬಂಡಜೋಲ್ ಮಾತ್ರೆಗಳನ್ನು ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿ ವಿ.ವಿ.ಜ್ಯೋತ್ಸಾ ತಿಳಿಸಿದರು.
ನಗರದ ಜಿಲ್ಲಾಧಿ ಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಔಷಧಿ ಸೇವನೆಯ ಎಂಡಿಎ ಹಾಗೂ ಐಡಿಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿಇಸಿ ಮತ್ತು ಅಲ್ಬಂಡಜೋಲ್ ಮಾತ್ರೆಗಳನ್ನು 2 ವರ್ಷದೊಳಗಿನ ಮಕ್ಕಳಿಗೆ ನೀಡಬಾರದು. ಐವಿಆರ್ ಐವರ್‌ವೆುಕ್ಟಿನ್ ಮಾತ್ರೆಯನ್ನು 5 ವರ್ಷದೊಳಗಿನ ಮಕ್ಕಳಿಗೆ ನೀಡಬಾರದು. ಈ ಔಷಧಿ ಗಳನ್ನು ಗರ್ಭಿಣಿಯರು, ಹೃದಯ, ಶ್ವಾಸಕೋಶ, ಮೂತ್ರಪಿಂಡಕ್ಕೆ ಸಂಬಂ ಧಿಸಿದ ದೀರ್ಘಾವಧಿ ಖಾಯಿಲೆಯಿಂದ ಬಳಲುತ್ತಿರುವವರಿಗೆ ನೀಡುವಂತಿಲ್ಲ. ಎಂಡಿಎ ಮಾತ್ರೆಗಳು ವಯಸ್ಸಿನ ಆಧಾರದ ಮೇಲೆ ಹಾಗೂ ಐಡಿಏ ಮಾತ್ರೆಗಳು ಎತ್ತರದ ಆಧಾರದ ಮೇಲೆ ನೀಡಲಾಗುವುದು ಎಂದು ವಿವರಿಸಿದರು.
ಜಿಲ್ಲೆಯಲ್ಲಿನ 1,255 ಹಳ್ಳಿಗಳಲ್ಲಿ 107 ಪ್ರಾಥಮಿಕ ಕೇಂದ್ರಗಳು ಹಾಗೂ 336 ಉಪಕೇಂದ್ರಗಳಲ್ಲಿ ಒಬ್ಬರು ಅಂಗನವಾಡಿ ಹಾಗೂ 1 ಆಶಾ ಕಾರ್ಯಕರ್ತೆರ ತಂಡ 10 ದಿನಗಳ ಕಾಲ ಪ್ರತಿದಿನ 25 ಮನೆಗಳಿಗೆ ತೆರಳಿ ಮಾತ್ರೆಗಳನ್ನು ನೀಡಲಿದೆ. 250 ಮನೆಗಳಲ್ಲಿ 1,500 ಜನರಿಗೆ ಮಾತ್ರೆ ನುಗಿಸುವ ಗುರಿ ಹೊಂದಿದ್ದು, 5900 ಆಶಾ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಚಿಕ್ಕ ಮಕ್ಕಳಿಗೆ ಮಾತ್ರೆಗಳನ್ನು ನೀಡುವಾಗ ತರಬೇತಿ ಪಡೆದುಕೊಂಡು ಕಾರ್ಯಕರ್ತೆಯರು ಮಾತ್ರ ನೀಡಬೇಕು. ಜನರಿಗೆ ಸರಿಯಾದ ಮಾಹಿತಿ ಕೊಟ್ಟು ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸುಮಾರು 18 ರೋಗಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಐವಿಆರ್, ಐವರ್‌ವೆುಕ್ಟನ್ ಮಾತ್ರಗಳು ಈಗಾಗಲೇ ಯಾದಗಿರಿ ಜಿಲ್ಲೆ ಹಾಗೂ ಪಾಂಡಿಚೇರಿಯಲ್ಲಿ ವಿತರಣೆ ಮಾಡಿ ಯಶಸ್ವಿಯಾಗಿದ್ದು, ಪ್ರಸ್ತುತ ವರ್ಷದಿಂದ ಜಿಲ್ಲೆಯ 7 ತಾಲೂಕಿನ ಜನರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದನ್ನೂ ಓದಿ:ಎಲ್ಲೆಡೆ ಎಳ್ಳ ಅಮಾವಾಸ್ಯೆ ಸಂಭ್ರಮ
ಜಿಪಂ ಸಿಇಒ ಡಾ| ರಾಜಾ ಪಿ. ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾಧಿ ಕಾರಿ ಡಾ| ರಾಜಶೇಖರ ಮಾಲಿ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ| ಬಸವರಾಜ ಗುಳಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಪಿ. ಬಾಡಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಿವಶರಣಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿ ಕಾರಿಗಳು ಉಪಸ್ಥಿತರಿದ್ದರು. ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ಪಿಪಿಟಿ ಮೂಲಕ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.