ಒತ್ತಡ ನಿವಾರಣೆಗೆ ಧ್ಯಾನ ಮಾಡಿ

Team Udayavani, Jan 6, 2017, 12:54 PM IST

gul2.jpg

ಕಲಬುರಗಿ: ಒತ್ತಡ ನಿವಾರಣೆಗೆ ಅನಗತ್ಯ ವಿಷಯಗಳಿಂದ ದೂರ ಇರುವುದು ಹಾಗೂ ಸ್ವಯಂ ನಿಯಂತ್ರಣ ಹಾಕಿಕೊಳ್ಳುವುದೇ ಪರಿಹಾರವಾಗಿದೆ ಎಂದು ಆಂಧ್ರಪ್ರದೇಶ ಹೈಕೋರ್ಟ್‌ನ ನಿವೃತ್ತ ಮುಖ್ಯ ನಾಯಮೂರ್ತಿ ವಿ. ಈಶ್ವರಯ್ಯ ಹೇಳಿದರು. 

ನಗರದ ಸೇಡಂ ರಸ್ತೆಯ ಗೀತಾ ನಗರದಲ್ಲಿನ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಅಮೃತ ಸರೋವರದಲ್ಲಿ ಈಶ್ವರೀಯ ವಿವಿ ಹಾಗೂ ಜಿಲ್ಲಾ ಪೊಲೀಸ ಇಲಾಖೆಯು ಪೊಲೀಸರ ಕರ್ತವ್ಯ ಕಾರ್ಯನಿರ್ವಹಣೆಯಲ್ಲಿನ ಒತ್ತಡ ನಿವಾರಣೆ ಕುರಿತು ಆಯೋಜಿಸಲಾದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು. 

ಪೊಲೀಸರ ಒತ್ತಡ ನಿವಾರಿಸಲು ಹಾಗೂ ಸೂಕ್ತ ಹೆಜ್ಜೆ ಇಡಲು ಸ್ನೇಹ ಮನೋಭಾವ, ಸಹಕಾರ, ಪ್ರೀತಿ ಅಳವಡಿಸಿಕೊಳ್ಳುವುದರ ಜತೆಗೆ ಧ್ಯಾನ ಅಗತ್ಯವಾಗಿದೆ. ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಧ್ಯಾನವೇ ಮಹತ್ವವಾಗಿದೆ. ಒತ್ತಡ ಕಾರ್ಯದ ನಡುವೆ ಧ್ಯಾನದ ಮನೋಭಾವ ಹೊಂದಿದ್ದರೆ ತಕ್ಕಮಟ್ಟಿಗೆ ಒತ್ತಡ ನಿವಾರಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. 

ಭೃಷ್ಟಾಚಾರ ಇಂದು ಸರ್ವ ರಂಗಗಳಲ್ಲಿ ವ್ಯಾಪಿಸಿದೆ. ಇದನ್ನೆಲ್ಲ ಕಾನೂನುಬದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಎಲ್ಲ ಆಯಾಮಗಳೊಂದಿಗೆ ವಿಚಾರಿಸಿ ತರ್ಕಬದ್ಧತೆಯಿಂದ ವಿಚಾರಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು. ಇದಕ್ಕೆಲ್ಲ  ಮಾನಸಿಕತೆಯಿಂದ ಸದೃಢತೆ ಹೊಂದಿದ್ದಾಗ ಮಾತ್ರ ಸಾಧ್ಯ. 

ಆದ್ದರಿಂದ ಧ್ಯಾನದ ಅಳವಡಿಕೆ ಅಗತ್ಯವಾಗಿದೆ ಎಂದರು. ಬ್ರಹ್ಮಕುಮಾರಿ ವಿಜಯಾ ಹಾಗೂ ಬ್ರಹ್ಮಕುಮಾರ ಪ್ರೇಮ್‌ ಮಾತನಾಡಿ, ಈಶ್ವರೀಯ ವಿಶ್ವವಿದ್ಯಾಲಯ ಉದ್ದೇಶವೇ ಸಮಾಜ ಶಾಂತಿ, ನೆಮ್ಮದಿಯಿಂದ ಬದುಕು ನಿರ್ವಹಿಸುವುದಾಗಿದೆ. ಇದಕ್ಕಾಗಿಯೇ ವಿವಿ ಆರಂಭದಿಂದ ಇಂದಿನವರೆಗೂ ಅವಿರತವಾಗಿ ಶ್ರಮಿಸುತ್ತಿದೆ.

ಒತ್ತಡದ ನೌಕರಿ ಇಲ್ಲವೇ ಕೆಲಸದ ನಡುವೆಯೂ ಕುಟುಂಬದ ಜೊತೆ ಕಾಲ ಕಳೆಯಲು ಸಮಯ ನೀಡುವುದು ಮುಖ್ಯವಾಗಿದೆ ಎಂದರು. ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳು, ಆರಕ್ಷಕ ನಿರೀಕ್ಷರು, ಪೊಲೀಸ್‌ ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ನಂತರ ಮುಖ್ಯ ನ್ಯಾಯಾಧೀಶರೊಂದಿಗೆ ಸಂವಾದ ಕಾರ್ಯಕ್ರಮವೂ ನಡೆಯಿತು. 

ಹೆಚ್ಚಿನ ಅಗತ್ಯಕ್ಕೆ ಪೂರ್ಣವಿರಾಮ ಹಾಕಿ
ಹೆಚ್ಚಿನ ಅಗತ್ಯತೆಗಳಿಗೆ ಪೂರ್ಣ ವಿರಾಮ ಹಾಕಿದರೆ ಸಂತೋಷದಿಂದ ಇರಬಹುದು. ಬೇಡಿಕೆಗಳೆ ನಮ್ಮ ಮನಸ್ಸು ವಿಚಲಿತಗೊಳ್ಳುವಂತೆ ಮಾಡುತ್ತವೆ. ಆದ್ದರಿಂದ ಇದಕ್ಕೆಲ್ಲ ಸ್ವಯಂ ನಿಯಂತ್ರಣ ಹೇರಿಕೊಳ್ಳುವುದು ಬಹು ಮುಖ್ಯ.
-ಎನ್‌. ಶಶಿಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.