ಅಧಿಕಾರಿಗಳ ನೀರಿಳಿಸಿದ ಸದಸ್ಯರು!

Team Udayavani, Feb 15, 2019, 6:28 AM IST

gul-2.jpg

ಜೇವರ್ಗಿ: ತಾಲೂಕಿನ ಸರ್ಕಾರಿ ಶಾಲೆಗಳಿಗೆ ವಿತರಿಸಲಾದ ಬೂಟ್‌ ಮತ್ತು ಸಾಕ್ಸ್‌ಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ಜಿಪಂ ಸದಸ್ಯರು ತಾಪಂ ಕಚೇರಿಯಲ್ಲಿ ಬುಧವಾರ ನಡೆದ ತಾಲೂಕು ಅಧಿಕಾರಿಗಳ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಮಾಹಿತಿ ಕೇಳಿದರೆ ತಿಂಗಳವರೆಗೆ ಕಾಯಬೇಕೆ ಎಂದು ಜಿಲ್ಲಾ ಕೃಷಿ ಮತ್ತು ಕೃಷಿ ಕೈಗಾರಿಕೆ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಬೂಟ್‌ ಹಾಗೂ ಸಾಕ್‌ಗಳನ್ನು ಎಲ್ಲಿಂದ ಖರೀದಿಸುತ್ತೀರಿ ಎಂದು ಪ್ರಶ್ನಿಸಿದರು. ಪಂಜಾಬ ಬೂಟ್‌ ಹೌಸ್‌ನಿಂದ ಖರೀದಿಸುತ್ತೇವೆ ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದರು. ಈ ಕುರಿತಂತೆ ಕೋಳಕೂರ, ಆಂದೋಲಾ ಸಿಆರ್‌ಸಿಗಳಿಗೆ ಪ್ರಶ್ನಿಸಿದರೆ ಅವರು ಮಾಹಿತಿ ನೀಡಿಲ್ಲ. ಅವರಿಗೆ ನೋಟಿಸ್‌ ನೀಡಿ ಎಂದು ಹೇಳಿದಾಗ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಪ್ಪ ಹುಲಕಲ್‌ ಕ್ಷಮೆ ಕೇಳಿದರು.

ಖಾತ್ರಿ ಕೂಲಿಗೂ ಹಣ ಕೊಡ್ಬೇಕಾ?: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕೂಲಿ ನೀಡಲು ನಿಮಗೆ ತಾಪಂ ಸದಸ್ಯರು ಹಣ ನೀಡಬೇಕಾ? ನಾಚಿಕೆ ಆಗೋದಿಲ್ವೇ? ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಾಂತಪ್ಪ ಕೂಡಲಗಿ ತಾಲೂಕು ಉದ್ಯೋಗ ಖಾತ್ರಿ ಅಧಿಕಾರಿ ಚನ್ನಪ್ಪ ಅವರನ್ನು ಪ್ರಶ್ನಿಸಿದರು.

ನೀರಿನ ಸಮಸ್ಯೆಗೆ ಸ್ಪಂದಿಸಿ: ತಾಲೂಕಿನಲ್ಲಿ ಯಾವುದೇ ಹಳ್ಳಿಗಳಿಗೆ ನೀರಿನ ಕೊರತೆ ಉಲ್ಬಣ ಆಗದಂತೆ ನೋಡಿಕೊಳ್ಳಿ. ಅಲ್ಲದೇ ಇಜೇರಿ ವಲಯದಲ್ಲಿ ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ಕೆಲವೊಂದು ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ ಎಂದು
ನೀರು ಸರಬರಾಜು ಇಲಾಖೆ ಅಧಿಕಾರಿ ಪಾಂಡುರಂಗ ಸಭೆ ಗಮನಕ್ಕೆ ತಂದರು. ಮುಂದೆ ಜೂನ್‌ ತಿಂಗಳ ವರೆಗೆ ಬಹಳಷ್ಟು ನೀರಿನ ಕೊರತೆ ಉಲ್ಬಣ ಆಗುತ್ತದೆ ಎಂದು ಜಿಪಂ ಸದಸ್ಯರು ತಿಳಿಸಿದರು. ಆಗ ಈಗಾಗಲೇ ಹಳ್ಳಿಗಳಿಗೆ ಕೊಳವೆ ಬಾವಿ ಹಾಕುತ್ತಿದ್ದೇವೆ ಎಂದು ಪಾಂಡುರಂಗ
ತಿಳಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಜಿಪಂ ಸದಸ್ಯರು ಸುಮಾರು 70ರಿಂದ 80 ಲಕ್ಷ ರೂ. ವರೆಗೆ ಖರ್ಚುಮಾಡಿ ಬಾವಿ ಹಾಗೂ ನೀರಿನ ಟ್ಯಾಂಕ್‌ ನಿರ್ಮಿಸಿದರೂ ಅವುಗಳು ಹಾಳಾಗಿವೆ. ಅನಾವಶ್ಯಕವಾಗಿ ಕೊಳವೆ ಬಾವಿ ಹಾಕಿ ನೀರು ಲಭ್ಯವಾಗದಿದ್ದರೇ ಯಾರು ಹೊಣೆ ಎಂದು ಪ್ರಶ್ನಿಸಿದರು.

ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ಧು ಶಿರಸಗಿ, ಜಿಪಂ ಸದಸ್ಯರಾದ ದಂಡಪ್ಪಸಾಹು ಕುರಳಗೇರಾ, ಗಂಗಮ್ಮ ದೇಸಾಯಿ,
ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಸಿ. ಮಾನೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು ಇದ್ದರು.

ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ರದ್ದುಗೊಳಿಸಿ ಜೇವರ್ಗಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯನ್ನು ತಾಪಂ ಹಾಗೂ ಜಿಪಂ ಕಾಯ್ದೆ ಅನುಸಾರವಾಗಿ ಚುನಾವಣೆ ನಡೆಸಬೇಕಿತ್ತು. ಆದರೆ ಅದು ನಡೆದಿಲ್ಲ. ಅಲ್ಲದೇ ಸದಸ್ಯರಿಗೆ ಯಾವುದೇ ನೋಟಿಸ್‌ ನೀಡಿಲ್ಲ. ಆದ್ದರಿಂದ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ರದ್ದು ಪಡಿಸಬೇಕು ಎಂದು ಜಿಪಂ ಸದಸ್ಯರು ತಿಳಿಸಿದಾಗ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಸದಸ್ಯರ ಹೊಂದಾಣಿಕೆ ಮೇರೆಗೆ ಆಯ್ಕೆ ಮಾಡಿದ್ದೇವೆ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ನೀವೇ ಸುಪ್ರಿಂ ಎಂದು ತಿಳಿದಿದ್ದಿರಾ ಎಂದು ಜಿಪಂ ಸದಸ್ಯರು ತರಾಟೆ ತೆಗೆದುಕೊಂಡರು.

ಫಲಾನುಭವಿಗಳಿಂದ ಹಣ ವಸೂಲಿ ಜೇವರ್ಗಿ ತಾಲೂಕಿನಲ್ಲಿ ಬರುವ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿನ ವಸತಿ ಯೋಜನೆಯಡಿ ಫಲಾನುಭವಿಗಳಿಂದ ಸುಮಾರು 20 ರಿಂದ 40ಸಾವಿರ ರೂ. ವರೆಗೆ ಅ ಧಿಕಾರಿಗಳು ಹಾಗೂ ಚುನಾಯಿತ ಸದಸ್ಯರು ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪವಿದೆ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಜಿಪಂ ಸದಸ್ಯರಾದ ಶಿವರಾಜ ಪಾಟೀಲ ರದ್ದೇವಾಡಗಿ, ಶಾಂತಪ್ಪ ಕೂಡಲಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.