ಮಿನಿ ವಿಧಾನಸೌಧ ಹಿಂಬದಿ ಮಾರ್ಗ ಬಂದ್: ಪ್ರತಿಭಟನೆ
Team Udayavani, Jul 7, 2017, 3:24 PM IST
ಕಲಬುರಗಿ: ನಗರದ ಮಿನಿ ವಿಧಾನಸೌಧದ ಆವರಣ ಗೋಡೆಯ ಹಿಂಬದಿಯ ಮಾರ್ಗ ಬಂದ್ ಮಾಡಿರುವುದನ್ನು ವಿರೋಧಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಪ್ರತಿಭಟನಾಕಾರರು, ಇಂತಹ ಕ್ರಮಗಳಿಂದ ಸಾರ್ವಜನಿಕರಿಗೆ ಅದರಲ್ಲೂ ವೃದ್ಧರಿಗೆ, ಮಹಿಳೆಯರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ. ಹಿಂಬದಿ ಮಾರ್ಗ ಇಲ್ಲದಿದ್ದರೆ ಸಾರ್ವಜನಿಕರು ಒಂದು ಕಿಮೀ ಸುತ್ತು ಹಾಕಿ ಮಿನಿ ವಿಧಾನ ಸೌಧದ ಮುಂಭಾಗದ ಗೇಟಿನ ಮೂಲಕ ಬರಬೇಕಾಗುತ್ತದೆ. ವಿಧಾನಸೌಧದ ಹಿಂದಿನ ಮಹಡಿಯಲ್ಲಿ ನೋಂದಣಿ ಅಧಿಕಾರಿಗಳ ಕಚೇರಿ ಹಾಗೂ ಇತರ ಕಚೇರಿಗಳು ಇರುವುದರಿಂದ ದಿನಾಲೂ ಸಾರ್ವಜನಿಕರು ಬಂದು
ಹೋಗುತ್ತಾರೆ. ಹಿಂದಿನ ಮಾರ್ಗಗಗಳಿಂದ ನ್ಯಾಯವಾದಿಗಳು, ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸುತ್ತಾರೆ.
ಆವರಣಕ್ಕೆ ಹೊಂದಿಕೊಂಡಂತೆ ಅನೇಕ ಅಂಗಡಿಗಳಿದ್ದು, ಅವರೂ ಸಹ ಹಿಂಬದಿ ಮಾರ್ಗದ ಮೂಲಕವೇ ಬರುತ್ತಾರೆ. ಈಗ ಆ ಎರಡೂ ಮಾರ್ಗಗಳನ್ನು ಬಂದ್ ಮಾಡಿದ್ದರಿಂದ ತೊಂದರೆಯಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಮಾರ್ಗವನ್ನು ಪುನಃ ಆರಂಭಿಸುವುದು ಹಾಗೂ ಸಿಸಿ ಕ್ಯಾಮರಾ ಅಳವಡಿಕೆ ಮಾಡುವುದು ಸೇರಿದಂತೆ ಒಬ್ಬ ಕಾವಲುಗಾರರನ್ನು ನೇಮಿಸಬೇಕು ಎಂದು
ಆಗ್ರಹಿಸಿದ್ದಾರೆ.
ಪತಿಭಟನೆಯಲ್ಲಿ ಜೈಕರವೇ ಸಂಸ್ಥಾಪಕಅಧ್ಯಕ್ಷ ಸಚಿನ್ ಎಸ್. ಫರತಾಬಾದ್, ಕಾಶೀನಾಥ ಮಾಳಗೆ, ಸಂದೇಶ ಪವಾರ,
ಸುರೇಶ ಹುನಗುಂಡಿ, ಲಕ್ಷ್ಮೀಕಾಂತ ಎಚ್. ಉದನೂರ್, ಎಸ್.ಎಸ್. ಅಹ್ಮದ್, ಶಿವು ಮಾಡಬೂಳ್, ಅಂಬು ಮಸ್ಕಿ, ಸತೀಶ ಫರತಾಬಾದ್, ರಾಜು ಹರಸೂರ್, ರಾಹುಲ್ ಫರತಾಬಾದ್, ಲಕ್ಷ್ಮೀಕಾಂತ ಹೋಲ್ಡ್ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.