ಪೊಲೀಸ್, ಕಂದಾಯ, ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಬೆವರಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ
Team Udayavani, Jun 20, 2023, 4:36 PM IST
ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಗಾಂಜಾ, ಜೂಜೂ, ಕ್ರಿಕೆಟ್ ಗ್ಯಾಂಬ್ಲಿಂಗ್ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿಮಗೆ ಸಾಧ್ಯವಾಗುತ್ತಿಲ್ಲವೇಕೆ? ನಿಮಗೆ ಗೊತ್ತಿಲ್ಲದೆ ಈ ಎಲ್ಲ ದಂಧೆ ನಡೆಯುತ್ತಿವೆಯಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ನೀರೀಳಿದ ಪ್ರಸಂಗ ಮಂಗಳವಾರ ಜರುಗಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಜೂಜು, ಅಕ್ರಮ ಮರುಳು ಸಾಗಾಣಿಕೆ, ಗ್ಯಾಂಬ್ಲಿಂಗ್, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ದಂತಹ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿವೆ. ನಿಮಗೆ ತಡೆಯಲು ಸಾಧ್ಯವಾಗುತ್ತಿಲ್ಲ ಎಂದರೆ ನೀವು ಕೂಡಾ ಅವರೊಂದಿಗೆ ಶಾಮೀಲಾಗಿದ್ದೀರಿ ಎಂದು ಅರ್ಥ. ಇತ್ತೀಚೆಗೆ ಪೊಲೀಸ್ ಇಲಾಖೆಯ ಪೇದೆಯೊಬ್ಬರು ಅಕ್ರಮ ಮರುಳು ಸಾಗಾಣಿಕೆ ತಡೆಯಲು ಹೋಗಿ ಪ್ರಾಣ ಕಳೆದು ಕೊಂಡಿದ್ದಾರೆ. ನಿಮ್ಮೊಂದಿಗೆ ಕೆಲಸ ಮಾಡುವ ಸಿಬ್ಬಂದಿಯ ಸಾವಾಗಿದೆ. ನಿಮಗೆ ಏನು ಅನಿಸುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.
ಅಪ್ರಾಪ್ತರಿಗೆ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಕಿರಾಣಿ ಅಂಗಡಿಗಳಲ್ಲಿಯೂ ಮದ್ಯ ಮಾರಾಟ ನಡೆಯುತ್ತಿದೆ. ಜಿಲ್ಲೆಯಲ್ಲಿ ಥರ್ಡ್ ಕ್ವಾಲಿಟಿ ಲಿಕ್ಕರ್ ಹಾಗೂ ಕಳ್ಳಭಟ್ಟಿ ಮಾರಾಟ ಮಾಡಲಾಗುತ್ತಿರುವ ಕುರಿತು ದೂರುಗಳಿವೆ. ಅಬಕಾರಿ ಇಲಾಖೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಸಚಿವರು ಪ್ರಶ್ನಿಸಿದಾಗ ಉತ್ತರಿಸಿದ ಅಧಿಕಾರಿಗಳು 300 ಕ್ಕೂ ಅಧಿಕ ಕೇಸುಗಳು ದಾಖಲಿಸಲಾಗಿದೆ ಎಂದು ಉತ್ತರಿಸಿದರು.
ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರು ಹಾಗೂ ಮಹಿಳೆಯರು ಕಾಣೆಯಾಗುತ್ತಿರುವ ಕುರಿತು ವರದಿಗಳಿವೆ ಈ ಬಗ್ಗೆ ಮಾಧ್ಯಮಗಳು ಕೂಡಾ ವರದಿ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳಿಗೆ ಹೇಳಿದರು.
“ಸಿಪಿಐ, ಪಿಎಸ್ಐ ಹಾಗೂ ಪಿಸಿಗಳೇ ರೌಡಿಗಳನ್ನು ಸಾಕುತ್ತಿದ್ದೀರಿ. ನಿಮ್ಮಿಂದಲೇ ಜಿಲ್ಲೆಯ ಮರ್ಯಾದೆ ಹಾಳಾಗುತ್ತಿದೆ. ರೌಡಿಗಳ ಹುಟ್ಟುಹಬ್ಬಕ್ಕೆ ಪೊಲೀಸ್ ಅಧಿಕಾರಿಗಳು ಹೋಗುತ್ತಾರೆ. ಆಚರಣೆಗೆ ಐಬಿಗಳಲ್ಲಿ ಅನುಮತಿ ನೀಡಲಾಗುತ್ತಿದೆ. ಈ ಹಿಂದಿನ ಪೊಲೀಸ್ ಅಧಿಕಾರಿಯೊಬ್ಬರು ರೌಡಿಯೊಬ್ಬನ ಹುಟ್ಟುಹಬ್ಬಕ್ಕೆ ಹೋಗಿ ವಿಷ್ ಮಾಡಿ ಫೋಟೋ ತೆಗೆಸಿಕೊಂಡಿದ್ದಾರೆ. ಪೊಲೀಸರು ರೌಡಿಗಳಿಗೆ ಅಣ್ಣಾ ಎಂದು ಸಂಬೋಧಿಸುತ್ತಾರೆ. ನಿಮಗೆ ನಾಚಿಕೆಯಾಗುವುದಿಲ್ಲವೇ? ನಿಮ್ಮ ಯೂನಿಫಾರ್ಮ್ ಗಾದರೂ ಮರ್ಯಾದೆ ಬೇಡವೇ? ಎಂದರು.
ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ದ ನಡೆಯುತ್ತಿರುವ ಇಲಾಖೆ ತನಿಖೆಗಳನ್ನು ಪೂರ್ಣಗೊಳಿಸುವಂತೆ ಕಮೀಷನರ್ ಹಾಗೂ ಎಸ್ ಪಿ ಗೆ ಸೂಚಿಸಿದ ಖರ್ಗೆ, ನಗರ ವ್ಯಾಪ್ತಿಯ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹೆಚ್ಚಾಗಿ ನಡೆಯುತ್ತಿದೆ. ಈ ಕೂಡಲೇ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಯೂನಿವರ್ಸಿಟಿ ಹಾಗೂ ಅಶೋಕ್ ನಗರ ಪೊಲೀಸ್ ಠಾಣೆಗಳು ವಿವಾದಿತ ಸಿವಿಲ್ ಕೇಸ್ ಗಳ ಸೆಟಲ್ ಮೆಂಟ್ ಅಡ್ಡಾಗಳಾಗಿವೆ, ಅಧಿಕಾರಿಗಳು ಬೀಟ್ ಗೆ ಹೋಗುವುದಿಲ್ಲ ಎಂದು ದೂರುಗಳು ಬಂದಿವೆ ಎಂದ ಸಚಿವರು ಈ ವಿಷಯವನ್ನು ಕಮೀಷನರ್ ಗಮನಕ್ಕೆ ತಂದು ಸರಿಪಡಿಸುವಂತೆ ಸೂಚಿಸಿದರು.
ಇದನ್ನೂ ಓದಿ:Goa; ಛತ್ರಪತಿ ಶಿವಾಜಿ ಮಹಾರಾಜರ ಕುದುರೆ ಸವಾರಿ ಪ್ರತಿಮೆ ತೆರವಿಗೆ ಆದೇಶ
ಪ್ರತಿ ಪೊಲೀಸ್ ಸ್ಟೇಷನ್ ಗಳಿಂದ ನಮ್ಮಿಬ್ಬರು ಸಚಿವರಿಗೆ 20,000 ಕೊಡಬೇಕು ಎಂದು ವದಂತಿಗಳಿವೆ. ಯಾರಾದರೂ ನಮ್ಮ ಹೆಸರು ಹೇಳಿ ವಸೂಲಿಗೆ ಇಳಿದರೆ ಅಂತವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ ಮಾತನಾಡಿ ಓವರ್ ಲೋಡ್ ಮರುಳು ಸಾಗಾಣಿಕೆ ಮಾಡುವ ವಾಹನಗಳನ್ನು ಸೀಜ್ ಮಾಡಿ ಕೇಸು ದಾಖಲಿಸಿ ಎಂದು ಸೂಚಿಸಿದರು.
ನಗರದಲ್ಲಿ 22 ಕ್ಲಬ್ ಗಳು ನಡೆಯುತ್ತಿವೆ. ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿವೆ ಪಟ್ಟಿ ಮಾಡಿ ಅಕ್ರಮ ಚಟುವಟಿಕೆ ಗಳು ನಡೆಯುತ್ತಿರುವ ಬಗ್ಗೆ ನಾನೇ ಮಾಹಿತಿ ಕೊಡುತ್ತೇನೆ ಅಂತಹ ಕ್ಲಬ್ ಗಳ ಮೇಲೆ ದಾಳಿ ಮಾಡಿ ಆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ. ಅಕ್ರಮ ಚಟುವಟಿಕೆ ನಡೆಸುವ ಯಾವ ಕ್ಲಬ್ ಕೂಡಾ ನಗರ ವ್ಯಾಪ್ತಿಯಲ್ಲಿ ಇರಬಾರದು ಎಂದು ಡಿಸಿಪಿ ಶ್ರೀನಿವಾಸಲು ಅವರಿಗೆ ಡಾ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಓ ಭನ್ವರ್ ಸಿಂಗ್ ಮೀನಾ, ನಗರ ಪೊಲೀಸ್ ಕಮೀಷನರ್ ಆರ್. ಚೇತನ್, ಪ್ರಭಾರಿ ಅಪರ ಜಿಲ್ಲಾಧಿಕಾರಿ ರಾಚಪ್ಪ, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸ್ ಪಿ ಇಶಾಪಂತ್, ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಎಸಿಪಿ ದೀಪನ್ ಎನ್ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.