![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 15, 2020, 3:03 PM IST
ಕಲಬುರಗಿ: ಒಂದು ವರ್ಷದ ಮಗುವಿಗೆ ಕೋವಿಡ್-19 ಪಾಸಿಟಿವ್ ವರದಿ ಬಂದಿರುವ ತಾಲ್ಲೂಕಿನ ಫರತಾಬಾದ್ ವಲಯದ ಅಫಜಲಪುರ ವಿಧಾನಸಭಾ ಕ್ಷೇತ್ರದ ಕವಲಗಾ ಹಾಗೂ ಸರಡಗಿ ಗ್ರಾಮಗಳಿಗೆ ಶಾಸಕ ಎಂ.ವೈ ಪಾಟೀಲ್ ಬುಧವಾರ ಭೇಟಿ ನೀಡಿದರು.
ಮಗುವಿಗೆ ಸೋಂಕು ಹರಡಿದ್ದರ ಕುರಿತಾಗಿ ಮಾಹಿತಿ ಪಡೆದುಕೊಂಡರಲ್ಲದೇ ಸಾಮಾಜಿಕ ಅಂತರ ಕಾಪಾಡುವಂತೆ ಜನರಲ್ಲಿ ತಿಳಿ ಹೇಳಿದರು. ಮಗುವಿನ ಸಮೀಪದ ಸಂಬಂಧಿಕರೊಂದಿಗೆ ಶಾಸಕರು ಚರ್ಚಿಸಿ ಮಾಹಿತಿ ಪಡೆದರಲ್ಲದೇ ಧೈರ್ಯದಿಂದ ಇರುವಂತೆ ಹೇಳಿದರು.
ಕವಲಗಾ ಬಿ ಗ್ರಾಮದ ಮಹಿಳೆ ತನ್ನ 15 ತಿಂಗಳು ಮಗುವಿನೊಂದಿಗೆ ತವರು ಮನೆ ಸರಡಗಿ ಮನೆಗೆ ಬಂದಿದ್ದರು. ಜ್ವರ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಾಸಿದ್ದಾಗ ಪಾಸಿಟಿವ್ ವರದಿ ಬಂದಿದೆ. ಸರಡಗಿ ಮನೆಯಲ್ಲಿರುವ 14 ಜನರನ್ನು ಹಾಗೂ ಕವಲಗಾ 8 ಜನರನ್ನು ಪರೀಕ್ಷೆಗಾಗಿ ಇಎಸ್ಐ ಆಸ್ಪತ್ರೆಗೆ ಸೇರಿಸಲಾಗಿದೆ.
ಇಷ್ಟು ದಿನ ನಗರ ಪ್ರದೇಶದಲ್ಲೇ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ ಇದೇ ಮೊದಲ ಸಲ ಗ್ರಾಮೀಣದಲ್ಲಿ ವರದಿಯಾಗಿರುವುದು ಆತಂಕ ಉಂಟು ಮಾಡಿದೆ. ಹಳ್ಳಿಗಳಲ್ಲಿ ಜನರು ಶುಚಿತ್ವ ಬಗ್ಗೆ ಕಾಳಜಿ ವಹಿಸುವುದರ ಜತೆಗೆ ಒಂದೇಡೆ ಸೇರುವುದನ್ನು ತಪ್ಪಿಸಬೇಕೆಂದು ಶಾಸಕ ಎಂ.ವೈ ಪಾಟೀಲ್ ಸಲಹೆ ನೀಡಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.