PPE ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗೆ ಶಾಸಕ ಪ್ರಿಯಾಂಕ್ ಖರ್ಗೆ ಭೇಟಿ
Team Udayavani, Aug 2, 2020, 11:00 PM IST
ಕಲಬುರಗಿ: ಚಿತ್ತಾಪುರ ಪಟ್ಟಣದ ನಾಗಾವಿ ಕ್ಯಾಂಪಸ್ ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್‌ಗೆ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ರವಿವಾರ ಸಂಜೆ ಪಿಪಿಇ ಕಿಟ್ ಧರಿಸಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು
ಇದೇ ಸಂದರ್ಭದಲ್ಲಿ ಸೋಂಕಿತರೊಂದಿಗೆ ಮಾತನಾಡಿದ ಶಾಸಕರು, ಆರೋಗ್ಯ ವಿಚಾರಿಸುವ ಮೂಲಕ ಧೈರ್ಯ ತುಂಬಿದರು.
ಇಲ್ಲಿ ದಾಖಲಾಗಿರುವ ಕೋವಿಡ್ 19 ಸೊಂಕಿತರಿಗೆ ಸೂಕ್ತ ಊಟೋಪಚಾರ ಹಾಗೂ ಅಗತ್ಯ ಔಷಧಿಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದಕ್ಕೂ ಮುನ್ನ ಚಿತ್ತಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋಸ್ಕ್ ಸಭೆಯಲ್ಲಿ ಭಾಗವಹಿಸಿ, ಕೋವಿಡ್ 19 ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚಿತ್ತಾಪುರ, ಕಾಳಗಿ ಹಾಗೂ ಶಹಾಬಾದ್ ತಹಸೀಲ್ದಾರ್ ಅವರು ಒಟ್ಟಾಗಿ ಕುಳಿತು ಮಾತನಾಡಿ ಚಿತ್ತಾಪುರ ತಾಲೂಕಿನಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಕ್ರಮಕೈಗೊಳ್ಳಬೇಕು. ನಾನು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ಶಾಸಕರು ಭರವಸೆ ಕೊಟ್ಟರು.
ನಾಗಾವಿ ಕ್ಯಾಂಪಸ್ ನಲ್ಲಿ ಈಗಾಗಲೇ 100 ಬೆಡ್‌ಗಳ ಕೊವೀಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಇದೇ ತೆರನಾದ 50 ಬೆಡ್‌ಗಳ ಮತ್ತೊಂದು ಕೇರ್ ಸೆಂಟರ್ ಅನ್ನು ವಾಡಿ ಪಟ್ಟಣದಲ್ಲಿ ತೆರೆಯಲು ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಶಾಸಕ ಪ್ರಿಯಾಂಕ ಖರ್ಗೆ ಅವರು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.