MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು
Team Udayavani, Jun 7, 2024, 12:11 PM IST
ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.
ಕ್ಷೇತ್ರದ ಹಾಲಿ ಸದಸ್ಯ ಕಾಂಗ್ರೆಸ್ ಪಕ್ಷದ ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ ಪುನರಾಯ್ಕೆಯಾದರು.
ಪ್ರಥಮ ಪ್ರಾಶಸ್ತ್ಯದ ಮತದ ನಂತರ ನಿಗದಿಪಡಿಸಲಾದ ಕೋಟಾ 48,260 ಮತಗಳು ಎರಡನೇ ಪ್ರಾಶಸ್ತ್ಯದ ಮತ ಗುರಿ ತಲುಪಿದ ಹಿನ್ನೆಲೆಯಲ್ಲಿ ಚಂದ್ರಶೇಖರ ಪಾಟೀಲ ಪುನರಾಯ್ಕೆಯಾದರು.
ಸೋಲಿನ ಛಾಯೆ ಕಾಣುತ್ತಿದ್ದಂತೆ ಮತ ಏಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಹೊರ ನಡೆದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಣ ಬಲದಿಂದ ಗೆದ್ದಿದೆ. ಆದರೆ ಪದವೀಧರ ಹಾಗೂ ಶಿಕ್ಷಕರ ಪರದ ಹೋರಾಟ ಮುಂದುವರೆಯುತ್ತದೆ ಎಂದು ಸೋಲಿನ ಬಳಿಕ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ತಿಳಿಸಿದರು.
ಗೆಲುವಿನ ಹಿಂದೆ ಮಟ್ಟೂರ: ಪ್ರಸ್ತುತ ಕಾಂಗ್ರೆಸ್ ಪುನಾರಾಯ್ಕೆಯಾಗುವಲ್ಲಿ ಆರು ತಿಂಗಳ ಹಿಂದೆಯೇ ಅಭ್ಯರ್ಥಿಯನ್ನು ಘೋಷಿಸಿದ್ದು, ಕ್ಷೇತ್ರದಾದ್ಯಂತ ಪ್ರಚಾರ ಮಾಡಲು ಸಮಯ ಸಿಕ್ಕಿತ್ತಲ್ಲದೇ ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಸತತ ಜತೆಗೂಡಿ ವ್ಯಾಪಕ ಪ್ರಚಾರ ಕೈಗೊಂಡಿರುವುದು ಕಾಂಗ್ರೆಸ್ ಗೆಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
12 ಸಾವಿರ ಮತಗಳು ತಿರಸ್ಕೃತ: ಚಲಾವಣೆಯಾದ ಒಟ್ಟಾರೆ 1.09 ಲಕ್ಷ ಮತಗಳಲ್ಲಿ 12,513 ಮತಗಳು ತಿರಸ್ಕೃತಗೊಂಡಿವೆ. ಪದವೀಧರ, ಸರ್ಕಾರಿ ನೌಕರರು-ಅಧಿಕಾರಿಗಳೇ ಇರುವ ಮತದಾರರಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮತ ತಿರಸ್ಕೃತಗೊಂಡಿರುವುದು ಆತ್ಮಾವಲೋಕನಕ್ಕೆ ಎಡೆ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.