Election Result: ಈಶಾನ್ಯ ಪದವೀಧರ ಕ್ಷೇತ್ರ; ಬಿಜೆಪಿಯ ಅಮರನಾಥ ಪಾಟೀಲ್ ಗೆ ಆರಂಭಿಕ ಮುನ್ನಡೆ
Team Udayavani, Jun 6, 2024, 8:21 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣೆ ಮತ ಏಣಿಕೆ ಇಲ್ಲಿನ ಗುಲ್ಬರ್ಗ ವಿವಿಯ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಕೇಂದ್ರದಲ್ಲಿ ನಡೆದಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ.
ಪ್ರಥಮ ಸುತ್ತಿನ ಮತ ಎಣಿಕೆ ಮುಕ್ತಾಯ ನಂತರ ಅಭ್ಯರ್ಥಿ ಅಮರನಾಥ ಪಾಟೀಲ್ 4,521 ಮತಗಳು ಪಡೆದಿದ್ದು, 306 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರು 4,215 ಮತಗಳು ಮತ್ತು ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 3,037 ಮತಗಳು ಪಡೆದಿದ್ದಾರೆ. 1,585 ಮತಗಳು ತಿರಸ್ಕೃತವಾಗಿವೆ. ಇದೂವರೆಗೆ ಒಟ್ಟಾರೆ 13,990 ಮತಗಳ ಎಣಿಕೆ ಮುಕ್ತಾಯವಾಗಿದೆ.
ಬೆಳಿಗ್ಗೆ ಮತಪೆಟ್ಟಿಗೆಗಳನ್ನು ತೆರೆದು ಎಲ್ಲ ಮತಪತ್ರಗಳನ್ನು ಕ್ರೋಢಿಕರಿಸಿ ತಲಾ 25 ರ ಮತಪತ್ರಗಳಂತೆ ಬಂಡಲ್ ಮಾಡಲಾಗಿ ಸಂಜೆ 4.30 ರ ನಂತರ ಮತ ಏಣಿಕೆ ಶುರುವಾಯಿತು.
ಬಿಜೆಪಿ ಹಾಗೂ ಕಾಂಗ್ರೆಸ್ ಜತೆಗೆ ಪಕ್ಷೇತರ ಅಭ್ಯರ್ಥಿ ಪ್ರತಾಪರೆಡ್ಡಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂರ ಶುಕ್ರವಾರ ಬೆಳಗಿನ ಜಾವ ಫಲಿತಾಂಶ ಹೊರ ಬೀಳುವ ನಿರೀಕ್ಷೆವಿದೆ.
ಬಿಜೆಪಿಯಿಂದ ಅಮರನಾಥ ಪಾಟೀಲ್, ಕಾಂಗ್ರೆಸ್ ನಿಂದ ಡಾ.ಚಂದ್ರಶೇಖರ ಪಾಟೀಲ್ ಹಾಗೂ ಪಕ್ಷೇತರಾಗಿ ಎನ್. ಪ್ರತಾಪ ರೆಡ್ಡಿ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
1.56 ಲಕ್ಷ ಮತದಾರರ ಪೈಕಿ 1.09 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಶೇ.69.65 ಪ್ರತಿಶತ ಮತದಾನವಾಗಿದೆ.
ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ನೇತೃತ್ವದ ಲ್ಲಿ ಮತ ಏಣಿಕೆ ನಡೆಯುತ್ತಿದ್ದು, ವಿಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲಾಧಿಕಾರಿಗಳು ಹಾಜರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.