ಮೋದಿ ಚೇಲಾಗಳಿಂದ ಸೋಲು ಅಸಾಧ್ಯ


Team Udayavani, Mar 30, 2019, 2:11 PM IST

gul-5

ಸೇಡಂ: ದಿಲ್ಲಿಯಿಂದ ಹಳ್ಳಿವರೆಗೂ ನನ್ನನ್ನು ಸೋಲಿಸಲು ತಂತ್ರ ಹೆಣೆಯಲಾಗುತ್ತಿದೆ. ಮೋದಿ ಹಾಗೂ ಮೋದಿ ಚೇಲಾಗಳಿಂದ ನನ್ನನ್ನು ಸೋಲಿಸುವುದು ಅಸಾಧ್ಯ, ನನ್ನ ಗೆಲುವು ಇಲ್ಲಿನ ಮತದಾರರ ಕೈಯಲ್ಲಿದೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದರು.

ಪಟ್ಟಣದ ಕೆ.ಎನ್‌.ಝಡ್‌ ಫಂಕ್ಷನ್‌ ಹಾಲ್‌ ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಜನತೆ ನೀಡಿದ ಅಧಿಕಾರವನ್ನು ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಬಳಸಿಕೊಂಡಿದ್ದೇನೆ. ಲೋಕಸಭೆಯಲ್ಲಿ ಶಕ್ತಿ ಮೀರಿ ನ್ಯಾಯ ದೊರಕಿಸಿಕೊಡುವಲ್ಲಿ ಶ್ರಮಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ನಾನು ಮಾಡಿರುವ ಕೆಲಸಕ್ಕೆ ಮತ ಕೇಳಲು ಬಂದಿದ್ದೇನೆ.

ಬಿಜೆಪಿಯವರು ತಾವು ದೇಶಪ್ರೇಮಿಗಳು ಎಂದು ಬೊಬ್ಬೆ ಹೊಡೆಯುತ್ತಾರೆ, ನಾವೇನು ದೇಶದ್ರೋಹಿಗಳಾ? ದೇಶದ ಮೇಲೆ ಬಿಜೆಪಿಗಿಂತಲೂ ಮೂರು ಪಟ್ಟು ಹೆಚ್ಚು ಪ್ರೇಮ ಕಾಂಗ್ರೆಸ್‌ ಗಿದೆ. ಇಂದಿರಾ ಗಾಂಧಿ , ರಾಜೀವ ಗಾಂಧಿ  ದೇಶಕ್ಕಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ ಎಂದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಒಂದೂ ಕಪ್ಪು ಚುಕ್ಕೆ ಇಲ್ಲದ ಜನನಾಯಕರು. ಸರ್ಕಾರಿ ನೌಕರಿಯಲ್ಲಿದ್ದ ಉಮೇಶ ಜಾಧವ್‌ ಅವರನ್ನು ಕರೆತಂದು ಶಾಸಕರನ್ನಾಗಿ ಮಾಡಿದ್ದು ನಾವು, ಈಗ ಆಮಿಷಕ್ಕೆ ಒಳಗಾಗಿ ಪಕ್ಷ ತೊರೆದಿದ್ದಾರೆ.

ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ನಡೆಯುತ್ತಿದೆ. ಪ್ರಧಾನಿ ಮೋದಿ ಕೇವಲ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಮುಕ್ರಂಖಾನ್‌, ಭಾಗಣ್ಣಗೌಡ ಸಂಕನೂರ, ತಿಪ್ಪಣ್ಣಪ್ಪ ಕಮಕನೂರ, ಶಾಮರಾವ ಪ್ಯಾಟಿ, ಸತೀಶರೆಡ್ಡಿ ಪಾಟೀಲ ರಂಜೋಳ ಇನ್ನಿತರರು ಮಾತನಾಡಿದರು.

ವೇದಿಕೆಯಲ್ಲಿ ಮಹಾಂತಪ್ಪ ಸಂಗಾವಿ, ಬಸವರಾಜ ಭೀಮಳ್ಳಿ, ಚಂದ್ರಿಕಾ ಪರಮೇಶ್ವರ, ನಾಗೇಶ ಕಾಳಾ, ಜಿಂಜಾನಿ ಜಾಗಿರದಾರ, ಕೃಷ್ಣ ಕುಲಕರ್ಣಿ ಇನ್ನಿತರರು ಇದ್ದರು. ನಾಗೇಶ್ವರರಾವ ಮಾಲಿಪಾಟೀಲ ನಿರೂಪಿಸಿದರು, ಸಿದ್ಧು ಬಾನಾರ ಸ್ವಾಗತಿಸಿದರು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.