ಮೋದಿ ಭಾವನೆಗಳ ಬ್ಲಾಕ್‌ಮೇಲರ್
Team Udayavani, Jan 8, 2018, 11:01 AM IST
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಪಕ್ಕಾ ಬ್ಲಾಕ್‌ಮೇಲರ್. ಗುಜರಾತ ಚುನಾವಣೆಯಲ್ಲಿ ಜನರಿಗೆ ದೇಶಪ್ರೇಮ ಮತ್ತು ದೇಶಾಭಿಮಾನಿಗಳ ಹೆಸರಿನಲ್ಲಿ ಸುಳ್ಳು ಹೇಳಿ ಭಾವನಾತ್ಮಕವಾಗಿ ಬ್ಲಾಕ್‌ಮೇಲ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ಹೇಳಿದರು.
ಅವರು, ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಹಮ್ಮಿಕೊಂಡಿದ್ದ ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಾಕಿಸ್ತಾನದ ಪ್ರಧಾನಿಯೊಂದಿಗೆ ಉಪಹಾರ ಮಾಡಿ ಬರುವ ನಮ್ಮ ಪ್ರಧಾನಿಗಳು ಪಾಕಿಸ್ತಾನ ತಮ್ಮನ್ನು ಮುಗಿಸಲು ಸುಪಾರಿ ನೀಡಿದೆ. ಗುಜರಾತ್ ಚುನಾವಣೆ ಗೆಲ್ಲಲು ಕಾಂಗ್ರೆಸ್ ಪಾಕಿಸ್ತಾನದ ಸಹಾಯ ಪಡೆಯುತ್ತಿದೆ ಎಂದೆಲ್ಲ ಹೇಳಿಕೆಗಳನ್ನು ನೀಡಿ ಜನರನ್ನು ಮಾನಸಿಕವಾಗಿ ತಮ್ಮ ಪರ ವಾಲಿಸಿಕೊಂಡು ಚುನಾವಣೆ ಗೆದ್ದರು. ಬಳಿಕ ಈ ಕುರಿತು ಸಂಸತ್ತಿನಲ್ಲಿ ಚರ್ಚೆ ಆರಂಭಿಸಿದಾಗ ಇದೆಲ್ಲವೂ ಚುನಾವಣೆಯಲ್ಲಿ ಮಾಡಿದ ತಂತ್ರಗಳಾಗಿತ್ತು ಎಂದು ಹೇಳುವ ಮೂಲಕ ದೇಶದ ಜನರನ್ನು ಅದರಲ್ಲೂ ಮುಖ್ಯವಾಗಿ ಗುಜರಾತ್ ಜನರನ್ನು ಬ್ಲಾಕ್‌ಮೇಲ ಮಾಡಿದ್ದಾರೆ ಎಂದು ಹೇಳಿದರು.
ಜನರಿಂದ ಕೇಳಲಾಗುತ್ತಿದೆ ಸಲಹೆ: ಕರ್ನಾಟಕವನ್ನು 2025ರವರೆಗೆ ನವ ಕರ್ನಾಟಕವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜನರಿಂದ ಸಲಹೆಗಳನ್ನು ಕೇಳಲಾಗುತ್ತಿದೆ. ಅಲ್ಲದೆ, ಪ್ರಣಾಳಿಕೆಯಲ್ಲಿನ ಅಂಶಗಳು ಹೇಗಿರಬೇಕು. ಅದರಿಂದ ಜನರಿಗೆ ಹಾಗೂ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ಬೇಕಾಗಿರುವ ಅಂಶಗಳೇನು ಎನ್ನುವುದನ್ನು ಸಮಿತಿ ಅಂತಿಮಗೊಳಿಸಲಿದೆ ಎಂದು ಹೇಳಿದರು.
ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಸರಕಾರ ನುಡಿದಂತೆ ನಡೆದಿದೆ. ಹಲವು ಭಾಗ್ಯಗಳನ್ನು ನೀಡುವ ಮೂಲಕ ಹಸಿವು ಮುಕ್ತ ಕರ್ನಾಟಕ ಮಾಡಲು ಹೆಜ್ಜೆ ಇಟ್ಟಿದೆ. 2013ರ ರಿಂದ 2018ರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಎಂತಹ ಪ್ರಣಾಳಿಕೆ ಇರಬೇಕು. ಅದರಲ್ಲಿ ಯಾವ್ಯಾವ ಅಂಶಗಳಿರಬೇಕು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಯಾಗಿರುವ ವೀರಪ್ಪ ಮೊಯ್ಲಿ ಅವರು ಬೆಂಗಳೂರಿನಲ್ಲಿ ಕುಳಿತು ಪ್ರಣಾಳಿಕೆ ತಯಾರು ಮಾಡದೆ ಇಡೀ ರಾಜ್ಯವನ್ನು ಸುತ್ತಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸಿದ್ಧ ಮಾಡುತ್ತಿದ್ದಾರೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿದರು. ಬಳಿಕ ರಾಯಚೂರು, ಬೀದರ, ಕಲಬುರಗಿ ಹಾಗೂ ಇತರೆ ಹೈಕದ ಇತರೆ ಜಿಲ್ಲೆಗಳ ಕೆಪಿಸಿಸಿ ಜಿಲ್ಲಾಧ್ಯಕ್ಷರು ಮಾತನಾಡಿದರು. ಈ ವೇಳೆ ಬಳ್ಳಾರಿ ಮತ್ತು ಬೀದರ್‌ಗೆ ಕೃಷಿ ವಿವಿ, ಉಸುಕಿನ ಸಮಸ್ಯೆ ನೀಗಿಸಲು ಎಲ್ಲರಿಗೂ ಉಚಿತ ಮರಳು ವಿತರಣೆ, ಸ್ಥಳೀಯ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ನೌಕರಿ ನೀಡಬೇಕು ಎನ್ನುವ ಬೇಡಿಕೆಗಳನ್ನು ಸಲ್ಲಿಸಲಾಯಿತು.
ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ, 12 ಗಂಟೆ ನಿರಂತರ ವಿದ್ಯುತ್, ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನೀಡುವಂತೆ ಮನವಿ ಸಲ್ಲಿಸಲಾಯಿತು. ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಬಿ.ಆರ್. ಪಾಟೀಲ, ಉಮೇಶ ಜಾಧವ್, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ, ಎಂಎಲ್‌ಸಿ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರು, ಹಂಪನಗೌಡ ಬಾದರ್ಲಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಎ.ವಸಂತಕುಮಾರ, ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಇಲಿಯಾಸ್ ಸೇಠ ಬಾಗವಾನ್, ಮೇಯರ್ ಶರಣಕುಮಾರ ಮೋದಿ,
ಜಿಡಿಎ ಅಧ್ಯಕ್ಷ ಅಸಗರ ಚುಲ್‌ಬುಲ್, ಪ್ರಣಾಳಿಕೆ ಸಮಿತಿ ಸದಸ್ಯರಾದ ಪುಷ್ಪಾ ಅಮರನಾಥ, ಐ.ಜಿ.ಸನದಿ, ವೆಂಕಟರಾವ್ ಘೋರ್ಪಡೆ, ತೊಗರಿ ಬೋರ್ಡ್ ಅಧ್ಯಕ್ಷ ಭಾಗಣ್ಣಗೌಡ ಸಂಕನೂರು, ಹಿರಿಯ ಮುಖಂಡರಾದ ತಿಪ್ಪಣ್ಣಪ್ಪ ಕಮಕನೂರು, ಶಿವಶರಣಪ್ಪ ಕೋಬಾಳ, ಜಗನ್ನಾಥ ಗೋಧಿ, ಚಂದ್ರಶೇಖರ ಸುಲ್ತಾನಪುರ, ಜರಣಪ್ಪ ಚಿಂಚೋಳಿ, ಚಂದ್ರಿಕಾ ಪರಮೇಶ್ವರ ಇತರರು ಇದ್ದರು.
ಕೆಪಿಸಿಸಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಸ್ವಾಗತಿಸಿದರು, ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲ ನಿರೂಪಿಸಿದರು. ಹೈಕದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲೆಯ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಪ್ರಣಾಳಿಕೆ ರಚನೆಗೆ ಜನಾಭಿಪ್ರಾಯ ಸಂಗ್ರಹ
ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಎಲ್ಲ ವರ್ಗದ ಜನರಿಗೆ ಸಾಕಷ್ಟು ಭಾಗ್ಯಗಳನ್ನು ನೀಡಿದೆ. ಅದರಂತೆ 2013ರ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದ್ದ 170 ಘೋಷಣೆಗಳಲ್ಲಿ 168 ನ್ನು ಪೂರ್ತಿ ಮಾಡಿದೆ. ಉಳಿದೆರಡು ಕಾರ್ಯಗತಗೊಳ್ಳುತ್ತಿವೆ. ಆದ್ದರಿಂದ 2018ರ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವರ್ಗಗಳ ಹಿತ ಬಯಸುವ ಪ್ರಣಾಳಿಕೆಯನ್ನು ರಚನೆ ಮಾಡಲು ಪ್ರಣಾಳಿಕೆ ಸಮಿತಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದೆ. ಈಗಾಗಲೇ ಮೂರು ವಿಭಾಗಗಳಲ್ಲಿ ಸಭೆಗಳನ್ನು ಮಾಡಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರು, ರೈತರು, ವ್ಯಾಪಾರಿಗಳು, ವಿದ್ಯಾರ್ಥಿಗಳು, ಹಿರಿಯರು, ಮಹಿಳೆಯರ ಅಭಿಪ್ರಾಯಗಳನ್ನು ಸಂಗ್ರಹ ಮಾಡಿ ಪ್ರಣಾಳಿಕೆ ಸಿದ್ಧ ಮಾಡಿ ಜನವರಿ ಕೊನೆಯ ವಾರದಲ್ಲಿ ಹೈಕಮಾಂಡ್‌ಗೆ ಮಂಡಿಸಲಾಗುವುದು. ವೀರಪ್ಪ ಮೊಯ್ಲಿ, ಮಾಜಿ ಮುಖ್ಯಮಂತ್ರಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.