ಮೊಬೈಲ್‌ಗಿಂತ ಪರಿಸರ ಸ್ನೇಹಿಯಾಗಿ: ನಮೋಶಿ
Team Udayavani, Sep 10, 2022, 2:26 PM IST
ಆಳಂದ: ಸಂರಕ್ಷಿತ ಕಾಡು ಕಡಮೆಯಾಗುತ್ತಿರುವ ಈ ಸಂದರ್ಭದಲ್ಲಿ ಪರಿಸರ ರಕ್ಷಣೆ ನಮ್ಮೆಲರ ಹೊಣೆಯಾಗಿದೆ. ಈಗಾಗಿ ನಾವು ಮೊಬೈಲ್ ಸ್ನೇಹಿಯಾಗುವುದಕ್ಕಿಂತ ಪರಿಸರ ಸ್ನೇಹಿಯಾಗುವುದು ಒಳ್ಳೆಯದು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ ಜಿ. ನಮೋಶಿ ಅವರು ಹೇಳಿದರು.
ತಾಲೂಕಿನ ಕಡಗಂಚಿ ಹತ್ತಿರದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಅರಣ್ಯ ಇಲಾಖೆ ಸಹಯೋಗದಿಂದ ಭೋಧಿ ವೃಕ್ಷ ಸಂಸ್ಥೆ ಆಯೋಜಿಸಿದ್ದ ಕಲ್ಯಾಣ ವನ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೋಧಿ ವೃಕ್ಷ ಸಂಸ್ಥೆಯ ಗಿಡ ನೆಡುವ ಈ ಕಾರ್ಯ ಶ್ಲಾಘನೀಯವಾದದ್ದು. ವಿಶ್ವವಿದ್ಯಾಲಯವನ್ನು ಹಸಿರು ಆವರಣವನ್ನಾಗಿಸಲು ಉಪಕುಲಪತಿಗಳಾದ ಪ್ರೊಫೆಸರ್ ಬಟ್ಟು ಸತ್ಯನಾರಾಯಣ ಪ್ರಯತ್ನವನ್ನು ಶ್ಲಾಘಿಸುತ್ತ, ಅವರ ಹಲವಾರು ಕಾರ್ಯಕ್ರಮಗಳನ್ನು ನೆನಪಿಸಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊಫೆಸರ್ ಬಟ್ಟು ಸತ್ಯನಾರಾಯಣ ಮಾತನಾಡಿ, ವಿಶ್ವವಿದ್ಯಾಲಯವನ್ನು ಹಸಿರು ಅವರಣವನ್ನಾಗಿ ಮಾಡಲು ಸಕಲ ಕ್ರಮ ತೆಗೆದುಕೊಳ್ಳಲಾಗಿದೆ ಈ ನಿಟ್ಟಿನಲ್ಲಿ ಬೋಧಿ ವೃಕ್ಷ ಸಂಸ್ಥೆ ಪ್ರಯತ್ನ ಸ್ಮರಣೀಯವಾಗಿದೆ ಎಂದರು.
ವಿಶ್ವ ವಿದ್ಯಾಲಯ ಆವರಣದಲ್ಲಿ ಹಣ್ಣಿನ ಗಿಡ ಬೆಳೆಯುವುದರಿದ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದ ಪೌಷ್ಟಿಕಾಂಶದ ಮೌಲ್ಯ ಹೆಚ್ಚುತ್ತದೆ. ತೇಗ ಮತ್ತು ಶ್ರೀಗಂಧ ಬೆಳೆಯುವುದರಿಂದ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯಕ್ಕೆ ಮೌಲ್ಯಯುತವಾದ ಆಸ್ತಿಗಳಾಗುತ್ತವೆ ಎಂದು ಹೇಳಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಹೇಮಾ ಮಾತನಾಡಿ, ಇಲ್ಲಿಯ ವರೆಗೂ ವಿಶ್ವವಿದ್ಯಾಲಯದ ಆವರಣದಲ್ಲಿ 2012 -13ರಿಂದ ಸುಮಾರು 25000 ಗಿಡಗಳನ್ನು ನೆಡಲಾಗಿದೆ. ಅದರಲ್ಲಿ ಶೇಕಡಾ 95ಪ್ರತಿಶತ ಗಿಡಗಳು ಬೆಳೆದಿವೆ ಎಂದು ತಿಳಿಸಿದರು.
ಭೋಧಿ ವೃಕ್ಷ ಸಂಸ್ಥೆ ಅಧ್ಯಕ್ಷ ಎಂ.ಎಸ್. ಚಂದ್ರ ಮಾತನಾಡಿ, ಈ ವರ್ಷದಲ್ಲಿ 5000 ಸಾವಿರ ಗಿಡ ನೆಡುವ ಗುರಿ ಹೊಂದಲಾಗಿದೆ. ಇದರಲ್ಲಿ 2000 ಸಾವಿರ ಹಣ್ಣಿನ ಗಿಡಗಳು ಸೇರಿವೆ ಎಂದರು.
ವಿಶ್ವ ವಿದ್ಯಾ ಆವರಣದ ಕಲ್ಯಾಣ ವನ ಯೋಜನೆ ಕೇವಲ ಆರಂಭ. ಈ ರೀತಿಯ ಗಿಡ ನೆಡುವ ಕಾರ್ಯಕ್ರಮವನ್ನು ಸಂಪೂರ್ಣ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಅತಿಥಿಯಾಗಿದ್ದ ಪ್ರೊ|ಬಸವರಾಜ ಪಿ. ಡೋಣೂರು ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಮರಗಳು ಕಲಿಕೆಯ ಗುಣಮಟ್ಟ ಹೆಚ್ಚಿಸುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.