ಗ್ರಾಮೀಣ ಶಿಕ್ಷಣ ಅಭಿವೃದ್ಧಿಗೆ ಹೆಚ್ಚಿನ ಒತ್ತು
Team Udayavani, Aug 29, 2020, 7:33 PM IST
ಕಲಬುರಗಿ: ಶಿಕ್ಷಣವೇ ಅಭಿವೃದ್ಧಿಗೆ ಪೂರಕವಾಗಿದ್ದರಿಂದ ಅದರ ಅಭಿವೃದ್ಧಿಗೆ ಬದ್ಧವಾಗಿದ್ದು, ಗ್ರಾಮೀಣ ಭಾಗದ ಶಿಕ್ಷಣ ಅಭಿವೃದ್ಧಿಗಾಗಿ ಮತ್ತಷ್ಟು ಕಾರ್ಯ ರೂಪಿಸುತ್ತೇನೆ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ಹೇಳಿದರು.
ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು 2020-21ನೇ ಸಾಲಿನ ಪ್ರವೇಶ ಪ್ರಾರಂಭ ಕಾರ್ಯಕ್ರಮ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಫಜಲಪುರ ವಿಧಾನಸಭೆ ಮತಕ್ಷೇತ್ರದಲ್ಲಿ ಬರುವ ಎಲ್ಲ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಸಮಸ್ಯೆ ಬಗೆಹರಿಸಲು ಹಾಗೂ ಬಡವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಸಲುವಾಗಿ ವಿಶ್ರಮಿಸದೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿಗಾಗಿ ಈಗಾಗಲೇ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಕೋಣೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ತರುವ ಮುಖಾಂತರ ಮಾದರಿ ಕಾಲೇಜು ಮಾಡುತ್ತೇನೆ ಎಂದರು.
ಜಿ.ಪಂ ಸಾಮಾಜಿಕ ನ್ಯಾಸ್ಥಾಯಿ ಸಮಿತಿ ಅಧ್ಯಕ್ಷರಾದ ದಿಲೀಪ್ ಆರ್ .ಪಾಟೀಲ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ತಮ್ಮ ಅನುದಾನದಡಿ 5 ಲಕ್ಷ ರೂ. ತರಲಾಗಿದೆ. ಇನ್ನುಳಿದ ಸಮಸ್ಯೆಗಳನ್ನು ಪರಿಹರಿಸಲು ಶಾಸಕರ ಜೊತೆಗೆ ಕೈಜೋಡಿಸಿ ಸಹಾಯ ಮಾಡುವೆ ಎಂದು ಭರವಸೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ ಬಿರಾದಾರ ಮಾತನಾಡಿ, ಈಗಾಗಲೇ ಮುಚ್ಚಿ ಹೋಗಿದ್ದ ಕಾಲೇಜನ್ನು ಶಾಸಕರು ಮರು ಮರು ಮಂಜೂರಾತಿ ಮಾಡಿಸಿಕೊಂಡು ಬಂದಿದ್ದಾರೆ ಎಂದರು. ಫರಹತಾ ಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ತಿಬಶೆಟ್ಟಿ, ಡಾ| ಶರಣಪ್ಪ ಮಾಳಗಿ, ಮುಖಂಡರಾದ ಶಿವಕುಮಾರ ಶರ್ಮಾ, ಬಸವರಾಜ ದೊಡ್ಡಮನಿ, ಮಲ್ಲಿಕಾರ್ಜುನ ಖನ್ನಾ, ಡಾ| ಶರಣಗೌಡ ಪಾಟೀಲ, ಶರಣು ಶಹಾಬಾದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.