ನವಭಾರತ ನಿರ್ಮಾಣವೇ ಧ್ಯೇಯ
Team Udayavani, Aug 16, 2017, 12:12 PM IST
ಸೇಡಂ: ದೇಶವನ್ನು ಕಾಡುತ್ತಿರುವ ಬಡತನ ಮತ್ತು ಅನಕ್ಷರತೆ ಎನ್ನುವ ಪಿಡುಗುಗಳನ್ನು ಹೋಗಲಾಡಿಸುವ ಮೂಲಕ ನವಭಾರತ ನಿರ್ಮಾಣದ ಕನಸನ್ನು ಯುವ ಜನತೆ ಹೊಂದಬೇಕು ಎಂದು ಸಹಾಯಕ ಆಯುಕ್ತ ಪರಶುರಾಮ ಹೇಳಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1947 ರಲ್ಲಿ ದೊರೆತ ಸ್ವಾತಂತ್ರ್ಯ ಅನೇಕ ಮಹಾನ್ ಪುರುಷರ ಬಲಿದಾನ ಮತ್ತು ತ್ಯಾಗದ ಪ್ರತೀಕವಾಗಿದೆ. ಆಗ ದೊರೆತದ್ದು
ಕೇವಲ ಬ್ರಿಟಿಷರ ದಾಸ್ಯದಿಂದ ಮುಕ್ತಿ. ಆದರೆ ಇಂದಿಗೂ ಸಹ ಭಾರತ ಬಡತನ, ಭ್ರಷ್ಟಾಚಾರ ಮತ್ತು ಅನಕ್ಷರತೆಯಿಂದ ಮುಕ್ತಿ ಪಡೆದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ ಸದಸ್ಯ ದಾಮೋದರರೆಡ್ಡಿ ಮಾತನಾಡಿದರು. ಶಿಕ್ಷಣ ಇಲಾಖೆ ಸಮನ್ವಯ ಅಧಿಕಾರಿ ಶಶಿಧರ ಬಿರಾದಾರ, ಹಾಪಕಾಮ್ಸ್ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಸುದರ್ಶನರೆಡ್ಡಿ ಪಾಟೀಲ, ನಗರಾಭಿವೃದ್ಧಿ
ಪ್ರಾಧಿ ಕಾರದ ಅಧ್ಯಕ್ಷ ನಾಗೇಶ್ವರರಾವ್ ಮಾಲಿಪಾಟೀಲ, ದೈಹಿಕ ಶಿಕ್ಷಕರಾದ ಮಣಿಸಿಂಗ ಚವ್ಹಾಣ, ದೇವಿಂದ್ರಪ್ಪ ಪಂಚಾಳ, ಜಿಪಂ ಸದಸ್ಯೆ ದೇವಮ್ಮ ಕರೆಪ್ಪ ಪಿಲ್ಲಿ, ಶಾರದಮ್ಮ ಜೈಪಾಲರೆಡ್ಡಿ, ಗೌರಮ್ಮ ಜೈಭೀಮ, ತಾಪಂ ಅಧ್ಯಕ್ಷ ಸುರೇಖಾ ಪುರಾಣಿಕ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ವೇದಿಕೆಯಲ್ಲಿದ್ದರು. ರವಿ ಕುದುರೇನ ನಿರೂಪಿಸಿದರು. ಸುಬ್ಬಣ್ಣ ಜಮಖಂಡಿ ಸ್ವಾಗತಿಸಿ, ವಂದಿಸಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಲ್ಯಾಪ್‌ಟಾಪ್
ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್: 21 ವರ್ಷದ ಹಿಂದೆ ನಡೆದಿದ್ದೇನು?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.