ಭರದಿಂದ ಸಾಗಿದೆ ಮುಲ್ಲಾ ಮಾರಿ ಸೇತುವೆ ಕಾಮಗಾರಿ


Team Udayavani, Jun 12, 2022, 12:09 PM IST

7bridge

ಚಿಂಚೋಳಿ: ಪಟ್ಟಣದ ಹತ್ತಿರ ಹರಿಯುವ ಮುಲ್ಲಾಮಾರಿ ನದಿಗೆ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಕೆಲಸ ಭರದಿಂದ ನಡೆಯುತ್ತಿದೆ.

ಸ್ಥಳೀಯ ಪುರಸಭೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 2010-11ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ 5ಕೋಟಿ ರೂ.ಅನುದಾನವನ್ನು ಆಗಿನ ಬಿಜೆಪಿ ಶಾಸಕ ಸುನೀಲ ವಲ್ಯಾಪುರೆ ಮಂಜೂರಿ ಮಾಡಿದ್ದರು. ಆದರೆ ಕಾರಣಾಂತರದಿಂದ ಸೇತುವೆ ನಿರ್ಮಾಣಕ್ಕಾಗಿ ಬಂದ ಅನುದಾನ ಸರಕಾರಕ್ಕೆ ಮತ್ತೇ ಮರಳಿ ಹೋಗಿತ್ತು. 2015-16ನೇ ಸಾಲಿನಲ್ಲಿ ಕಾಂಗ್ರೆಸ್‌ ಶಾಸಕ ಡಾ|ಉಮೇಶ ಜಾಧವ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಸೇತುವೆ ನಿರ್ಮಾಣಕ್ಕಾಗಿ 5ಕೋಟಿ ರೂ.ಅನುದಾನ ಮಂಜೂರಿಗೊಳಿಸಿ ಕಾಂಗ್ರೆಸ್‌ ಸರಕಾರದ ಆಗಿನ ನಗರಾಭಿವೃದ್ಧಿ ಸಚಿವ ಖಮರುಲ್‌ ಇಸ್ಮಾಂ ಕಾಮಗಾರಿಗೆ ಚಾಲನೆ ನೀಡಿದ್ದರು.

ಸೇತುವೆ ನಿರ್ಮಾಣ ನಡೆಯುತ್ತಿರುವ ಸಂದರ್ಭದಲ್ಲಿ ಸೇತುವೆ ಛತ್ತು ಕುಸಿದು ಬಿದ್ದು ಏಳು ಕಾರ್ಮಿಕರು ಗಾಯಗೊಂಡಿದ್ದರು. ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿಲ್ಲವೆಂದು ಪುರಸಭೆ ಸದಸ್ಯರು ರಾಜ್ಯ ಸರಕಾರದ ನಗರಾಭಿವೃದ್ಧಿ ಸಚಿವರ ಗಮನಕ್ಕೆ ತಂದಿದ್ದರು. 3ನೇ ತಂಡ ಪರಿಶೀಲನೆ ನಡೆಸಿ ಕಾಮಗಾರಿ ಗುಣಮಟ್ಟದಿಂದ ನಡೆಸುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದ್ದರಿಂದ ಈಗ ಸೇತುವೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಸೇತುವೆ ನಿರ್ಮಾಣದಿಂದ ನಿಮಾಹೊಸಳ್ಳಿ, ಗೌಡನಹಳ್ಳಿ, ಈದಗಾ ಮೈದಾನ ಮತ್ತು ಕೊಳಚೆ ಮಂಡಳಿ ಹೌಸಿಂಗ್‌ ಕಾಲೋನಿ ನಿವಾಸಿಗಳಿಗೆ, ಹೊಲಗಳಿಗೆ ಹೋಗಲು ಹಾಗೂ ಕಲ್ಲು ಗಣಿ ಕಾರ್ಮಿಕರಿಗೆ ಉಪಯೋಗವಾಗಲಿದೆ.

ಕಳೆದ ವರ್ಷ ಮುಲ್ಲಾಮಾರಿ ನದಿ ಮಳೆಗಾಲದಲ್ಲಿ ತುಂಬಿ ಹರಿದಿದ್ದರಿಂದ ಸೇತುವೆ ನಿರ್ಮಾಣಕ್ಕೆ ಅಡ್ಡಿಯಾಗಿ ಕೆಲಸ ನಿಲ್ಲಿಸಲಾಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಸದ್ಯ ಕಡಿಮೆ ಇರುವುದರಿಂದ ಕೆಲಸ ಚುರುಕಿನಿಂದ ನಡೆಯುತ್ತಿದೆ. ಸರಕಾರದಿಂದ ಪುರಸಭೆಗೆ ಸೇತುವೆ ಮುಂದುವರಿದ ಕಾಮಗಾರಿಗೋಸ್ಕರ ಫೇಸ್‌ 4ರಲ್ಲಿ ಒಂದು ಕೋಟಿ ರೂ.ಅನುದಾನ ನೀಡಿದೆ. ಮುಂದಿನ ಆರು ತಿಂಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಶಿನಾಥ ಧನ್ನಿ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.