ಮಾರಕಾಸ್ತ್ರದಿಂದ ಚಿನ್ನ ದ ವ್ಯಾಪಾರಿ ಕೊಲೆ

Team Udayavani, Jan 12, 2022, 9:04 PM IST

ದ್ಗಹಜಕಲಕಜರಗದವಚ

ವಾಡಿ: ಮಾರಕಾಸ್ತ್ರಗಳಿಂದ ದಾಳಿ ನಡೆಸುವ ಜತೆಗೆ ತಲೆ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಕಲಬುರಗಿ ಚಿನ್ನದ ವ್ಯಾಪಾರಿಯೊಬ್ಬರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಚಿತ್ತಾಪುರ ಮತ್ತು ರಾವೂರ ಗ್ರಾಮದ ನಡುವಿನ ಅಬ್ಟಾಸ ಅಲಿ ದರ್ಗಾ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ.

ಕಲಬುರಗಿ ನಗರದ ಗಾಜಿಪುರ ಬಡಾವಣೆಯ ಮಂಜುನಾಥ ತೆಗನೂರ (38) ಕೊಲೆಯಾದ ವ್ಯಕ್ತಿ. ಇವರು ವೃತ್ತಿಯಲ್ಲಿ ಚಿನ್ನದ ವ್ಯಾಪಾರಿ ಹಾಗೂ ಹಣಕಾಸಿನ ವ್ಯವಹಾರ ನಡೆಸುತ್ತಿದ್ದರು. ಕೊಡುಕೊಳ್ಳುವ ವಿಚಾರದಲ್ಲಿ ಸ್ನೇಹಿತರ ಮಧ್ಯೆ ಗಲಾಟೆಯಾಗಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕೊಲೆಯಾದ ವ್ಯಕ್ತಿಯ ಮುಖದ ಮೇಲೆ ಮಾರಕಾಸ್ತ್ರಗಳಿಂದ ಇರಿದ ಗಾಯಗಳು ಕಂಡು ಬಂದಿವೆ. ಮಂಜುನಾಥನನ್ನು ಕಲಬುರಗಿಯಿಂದ ವಾಹನದಲ್ಲಿ ಕರೆತಂದ ದುಷ್ಕರ್ಮಿಗಳ ಗುಂಪು ಯಾದಗಿರಿ ವ್ಯಾಪ್ತಿಯಲ್ಲಿ ಸುತ್ತಾಡಿಸಿದ್ದರು. ನಂತರ ಮಧ್ಯರಾತ್ರಿ ಚಿತ್ತಾಪುರ ಮಾರ್ಗದ ಯರಗಲ್‌ ರಸ್ತೆಯ ಜಮೀನೊಂದರಲ್ಲಿ ಇಳಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ನಂತರ ದೊಡ್ಡ ಗಾತ್ರದ ಸೈಜುಗಲ್ಲನ್ನು ಮಂಜುನಾಥನ ತಲೆ ಮೇಲೆ ಹಾಕಿ ಹತ್ಯೆ ಮಾಡಿ ಆರೋಪಿತರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶ್ವಾನ ದಳದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಇಶಾ ಪಂಥ್‌, ಶಹಾಬಾದ ಡಿವೈಎಸ್‌ಪಿ ಉಮೇಶ ಚಿಕ್ಕಮಠ, ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲೆದೇವರು, ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ ಭಾವಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ವಾಡಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಕೊಲೆ ಘಟನೆ ಗಂಭೀರವಾಗಿ ಪರಿಗಣಿಸಿದ ಎಸ್‌ಪಿ ಇಶಾ ಪಂಥ್‌, ಸಿಪಿಐ ಚಿತ್ತಾಪುರ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸುವ ಮೂಲಕ 24 ಗಂಟೆಯೊಳಗೆ ಆರೋಪಿತರ ಹೆಡೆಮುರಿ ಕಟ್ಟಲು ಆದೇಶ ನೀಡಿದ್ದಾರೆ. ವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚುತ್ತಿವೆ ಕೊಲೆ ಘಟನೆಗಳು: ಕಳೆದ ವರ್ಷ ಕುಂಬಾರಹಳ್ಳಿಯ ನಿರ್ಜನ ಪ್ರದೇಶದಲ್ಲಿ ಹೂತ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇತ್ತೀಚೆಗಷ್ಟೇ ಗಾಂಜಾ ದಂಧೆಗೆ ಸಂಬಂಧಿಸಿದಂತೆ ಚಿತ್ತಾಪುರದಲ್ಲಿ ಯುವಕನೊಬ್ಬನನ್ನು ಚಾಕು ಇರಿದು ಕೊಲ್ಲಲಾಗಿತ್ತು.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.