ಶಾಸಕ ರಾಜಾಸಿಂಗ್ ವಿರುದ್ದ ಮುಸ್ಲಿಮರ ಪ್ರತಿಭಟನೆ
Team Udayavani, Aug 26, 2022, 3:32 PM IST
ಚಿಂಚೋಳಿ: ಇಸ್ಲಾಂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ತೆಲಂಗಾಣ ರಾಜ್ಯದ ಬಿಜೆಪಿಯ ಶಾಸಕ ರಾಜಾಸಿಂಗ್ ಅವರನ್ನು ಬಂಧಿಸಿ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಮುಸ್ಲಿಮರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ವಿವಾದಿತ ಹಾಸ್ಯ ಕಲಾವಿದ ಮುನವ್ವರ ಫಾರೂಕಿ ಅವರನ್ನು ಟೀಕಿಸಿದ ಬಿಜೆಪಿ ಉಚ್ಚಾಟಿತ ನಾಯಕಿ ನೂಪುರ ಶರ್ಮಾ ಅವರನ್ನು ಅನುಕರಿಸಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ವಿರುದ್ದ ನೀಡಿರುವ ಹೇಳಿಕೆಯ ದೃಶ್ಯದ ತುಣುಕನ್ನು ಬಿಜೆಪಿ ಶಾಸಕ ರಾಜಾಸಿಂಗ್ ಜಾಲತಾಣದಲ್ಲಿ ಉಡುಗೆ ತೊಡುಗೆಗಳನ್ನು ಅವಹೇಳನ ಮಾಡಿ ವಿಡಿಯೋ ಹಂಚಿಕೊಂಡಿರುವುದನ್ನು ಮುಸ್ಲಿಮರು ತೀವ್ರವಾಗಿ ಖಂಡಿಸಿದರು.
ಬಿಜೆಪಿ ಶಾಸಕ ರಾಜಾಸಿಂಗ ಅವರು ಪ್ರವಾದಿ ಮಹಮ್ಮದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೀಡಾಗಿದೆ. ಕೂಡಲೇ ಬಂಸಿ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಮುಸ್ಲಿಮರು ಒತ್ತಾಯಿಸಿದರು.
ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರೇಡ2 ತಹಸೀಲ್ದಾರ ವೆಂಕಟೇಶ ದುಗ್ಗನ ಅವರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಡಿದರ್ಗಾ ಅಕಬರ ಹುಸೇನಿ ಸಾಹೇಬ, ಪುರಸಭೆ ಸದಸ್ಯರಾದ ಅನವರ ಖತೀಬ,ಸೈಯದ ಶಬ್ಬೀರ ಅಹೆಮದ,ಖಲೀಲ ಪಟೇಲ,ತಾಹೆರ ಕುರೇಶಿ, ಮಕತುಮ,ಹಸೇನ ಹಾಶ್ಮಿ,ಜುನೇದ, ಅಜರುದ್ದೀನ್ ,ಸಲಾಮ,ಸೈಯದ ಇಸ್ಲಾಮ ಹಾಫೀಜ,ಆನಂದ ಟೈಗರ,ಮಾರುತಿ ಗಂಜಗಿರಿಇನ್ನಿತರಿದ್ದರು.ಪಟ್ಟಣದ ಕನಕದಾಸರ ವೃತ್ತದಿಂದ ತಹಶಿಲ್ದಾರ್ ಕಚೇರಿವರೆಗೆ ಭಾರಿ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.