ಮುತ್ತಗಾ: ಕೊಳಚೆ ನೀರು ಸೇರಿ ಹೊಂಡದಂತಾದ ರಸ್ತೆ
Team Udayavani, Aug 27, 2017, 11:34 AM IST
ಶಹಾಬಾದ: ನಗರದಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಮುತ್ತಗಾ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಇಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಸಾರಿಗೆ, ನೈರ್ಮಲ್ಯ ಹಾಗೂ ಶೌಚಾಲಯವಿಲ್ಲದೇ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹದಗೆಟ್ಟ ರಸ್ತೆ: ಇತ್ತೀಚೆಗೆ ಜಿಪಂ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣವಾಗಿದೆ. ಆದರೆ ಅದು ಕೂಡ ಪೂರ್ಣಗೊಂಡಿಲ್ಲ.
ಇನ್ನುಳಿದ ರಸ್ತೆ ಹದಗೆಟ್ಟು ದೊಡ್ಡ ಕಂದಕಗಳಾಗಿ ಪರಿವರ್ತನೆಯಾಗಿವೆ. ನಿರ್ಮಾಣವಾದ ರಸ್ತೆಯ
ಮೇಲೆ ಮರಳು ಹಾಗೂ ಕಂಕರ್ ಹಾಕಿರುವುದರಿಂದ ರಸ್ತೆ ಇಕ್ಕಟ್ಟಾಗಿರುವುದರಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟ ಮುಖಂಡರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿ ಧಿಗಳು ಹಾಗೂ ಅ ಧಿಕಾರಿಗಳು ರಸ್ತೆ
ನಿರ್ಮಾಣಕ್ಕೆ ಮುಂದಾಗದಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿ ಸಮಸ್ಯೆ: ಗ್ರಾಮದಲ್ಲಿ ಚರಂಡಿ ವ್ಯವಸ್ಥೆಯಿಲ್ಲದ ಕಾರಣ ರಸ್ತೆ ಮೇಲೆಲ್ಲ ನೀರು ಹರಿದಾಡುತ್ತಿದೆ. ಇದರಿಂದ
ಗ್ರಾಮದ ಕೊಳಚೆ ನೀರು ತಗ್ಗುಗಳಲ್ಲಿ ಸೇರಿಕೊಂಡು ಹೊಂಡಗಳಾಗಿ ನಿರ್ಮಾಣವಾಗಿವೆ. ಇದರಿಂದ ಸುಲಭ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕೊಳಚೆ ನೀರು ಗಬ್ಬೆದ್ದು ನಾರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದಲ್ಲದೇ ರಸ್ತೆಯ ಮೇಲೆ ಮೂಗು ಮುಚ್ಚಿಕೊಂಡೇ
ತಿರುಗಾಡುವಂತಾಗಿದೆ. ಬಳಕೆಗೆ ಬಾರದ ಶೌಚಾಲಯ: ಗ್ರಾಮದಲ್ಲಿ ಸಾರ್ವಜನಿಕ
ಮಹಿಳಾ ಶೌಚಾಲಯವೇನೋ ಇದೆ. ಬಳಸಲು ಯೋಗ್ಯವಾಗಿಲ್ಲ. 2011-12ನೇ ಸಾಲಿನಲ್ಲಿ ಅಂದಿನ
ಜಿಪಂ ಸದಸ್ಯೆ ಪಾರ್ವತಿ ಚವ್ಹಾಣ ಅವರು ಶೇ. 60 ರಲ್ಲಿ 3 ಲಕ್ಷರೂ. ಅನುದಾನದಲ್ಲಿ ಮಹಿಳಾ ಶೌಚಾಲಯ ನಿರ್ಮಾಣ ಮಾಡಿದ್ದಾರೆ. ಆದರೆ ನೀರಿನ ವ್ಯವಸ್ಥೆ ಮಾಡದ ಕಾರಣ ಅದು
ಬಳಕೆಗೆ ಬಾರದಾಗಿದೆ. ಇದರಿಂದ ಗ್ರಾಮದ ಮಹಿಳೆಯರಿಗೆ ಮುಳ್ಳು ಕಂಟಿಗಳೇ ಶೌಚಕ್ಕೆ ಆಶ್ರಯವಾಗಿವೆ. ಈ ಬಗ್ಗೆ ಗ್ರಾಪಂ ಅಧ್ಯಕ್ಷರಿಗೆ ಹಾಗೂ ಅ ಧಿಕಾರಿಗಳಿಗೆ ಮಹಿಳಾ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ಹಲವಾರು ಬಾರಿ ಗ್ರಾಮಸ್ಥರು ಮನವಿ ಮಾಡಿದರೂ
ಕ್ಯಾರೇ ಎನ್ನುತ್ತಿಲ್ಲ. ಸರ್ಕಾರ ಶೌಚಾಲಯ ನಿರ್ಮಾಣಕ್ಕೆ ಸಾಕಷ್ಟು ಸಹಾಯಧನ ನೀಡುತ್ತಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯಾತನದಿಂದ ಯೋಜನೆ ಮಾತ್ರ ಹಳ್ಳ ಹಿಡಿಯುತ್ತಿದೆ. ಕೂಡಲೇ ಇನ್ನುಳಿದ ರಸ್ತೆ ನಿರ್ಮಾಣ ಮಾಡಬೇಕು. ಶೌಚಾಲಯ, ಕುಡಿಯುವ ನೀರಿನ ಸಮಸ್ಯೆ ಹಾಗೂ ಚರಂಡಿ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮದ ಮಲ್ಲೇಶಿ ಜಿರಕಲ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.